ಮಡಿಕೇರಿ, ಆ. ೨೦: ಮಡಿಕೇರಿ ನಗರಸಭೆಯ ಅಧ್ಯಕ್ಷ ಸ್ಥಾನದ ಮೀಸಲಾತಿಯನ್ನು ಪ್ರಶ್ನಿಸಿ ನಗರಸಭೆ ಸದಸ್ಯರೋರ್ವರು ಉಚ್ಚ ನ್ಯಾಯಾಲಯದಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದಾರೆ. ಮಡಿಕೇರಿ ನಗರಸಭೆ ಆಡಳಿತದ ೨ನೆ ಅವಧಿಗೆ ಅಧ್ಯಕ್ಷ -ಉಪಾಧ್ಯಕ್ಷ ಸ್ಥಾನಕ್ಕೆ ತಾ.೫ ರಂದು ಮೀಸಲಾತಿ ಪ್ರಕಟಗೊಂಡಿತ್ತು. ಅಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಮಹಿಳೆ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಮೀಸಲಾತಿ ಪ್ರಕಟಗೊಂಡಿತ್ತಾದರೂ ಅಧ್ಯಕ್ಷ ಸ್ಥಾನದ ಮೀಸಲಾತಿ ಸಮಂಜಸವಲ್ಲ ಎಂದು ನಗರಸಭಾ ಬಿ.ಜೆ.ಪಿ ಸದಸ್ಯ ಅರುಣ್ ಶೆಟ್ಟಿ ಅವರು ಈ ಮೀಸಲಾತಿ ರದ್ಧತಿಗೆ ಮನವಿ ಮಾಡಿ ಉಚ್ಛ ನ್ಯಾಯಾಲಯದಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದಾರೆ. ತಾ.೧೨ ರಂದು ಅರ್ಜಿ ಸಲ್ಲಿಕೆಯಾಗಿದೆ. ಹೊರಡಿಸಲಾಗಿರುವ ಅಧ್ಯಕ್ಷ ಸ್ಥಾನದ ಮೀಸಲಾತಿ ರದ್ದುಗೊಳಿಸಿ ಇತರ ಎಲ್ಲಾ ಅರ್ಹ ಸದಸ್ಯರಿಗೆ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಲು ಅವಕಾಶ ನೀಡಬೇಕೆಂದು ಅರ್ಜಿ ಮೂಲಕ ಮನವಿ ಮಾಡಲಾಗಿದೆ. ಅರ್ಜಿದಾರರ ಪರ ವಕೀಲ ಕೆ.ಎಸ್ ಪೊನ್ನಪ್ಪ ಅವರು ವಕಾಲತ್ತು ವಹಿಸಿದ್ದಾರೆ. ತಾ.೨೦ ರಂದು ಅರ್ಜಿ ಸಂಬAಧ ವಿಚಾರಣೆ ನಡೆದಿದ್ದು, ತಾ.೨೧ ರಂದು (ಇಂದು) ವಿಚಾರಣೆ ಸಂಬAಧ ನಿಖರ ಮಾಹಿತಿ ದೊರಕಲಿದೆ.