ನಾಪೋಕ್ಲು, ಆ. ೨೦: ವಿದ್ಯಾರ್ಥಿಗಳನ್ನು ಶೈಕ್ಷಣಿಕವಾಗಿ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಜಿಲ್ಲಾಮಟ್ಟದ ರಸಪ್ರಶ್ನೆ ಸ್ಪರ್ಧೆಯನ್ನು ನಡೆಸುವ ಸಲುವಾಗಿ ಕುಂಬಳದಾಳು ಗ್ರಾಮದ ದಾನಿ ನೆರವಂಡ ಮುತ್ತಪ್ಪ ಅವರು ಮೂರ್ನಾಡು ಪದವಿಪೂರ್ವ ಕಾಲೇಜಿಗೆ ಒಂದು ಲಕ್ಷ ರೂಪಾಯಿ ನೀಡಿದರು.

ವಿದ್ಯಾಸಂಸ್ಥೆಯ ಅಧ್ಯಕ್ಷ ಚೌರಿರ ಡಾ. ಜಗತ್ ತಿಮ್ಮಯ್ಯ ಅವರಿಗೆ ನೆರವಂಡ ಮುತ್ತಪ್ಪ ಒಂದು ಲಕ್ಷ ರೂಪಾಯಿ ಚೆಕ್ ಅನ್ನು ಹಸ್ತಾಂತರಿಸಿದರು. ಈ ಸಮಾರಂಭದಲ್ಲಿ ಮೂರ್ನಾಡು ವಿದ್ಯಾಸಂಸ್ಥೆಯ ಕಾರ್ಯದರ್ಶಿ, ಪೆಮ್ಮಡಿಯಂಡ ವೇಣು ಅಪ್ಪಣ್ಣ, ಮೂರ್ನಾಡು ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ದೇವಕ್ಕಿ, ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.