ಕಣಿವೆ , ಆ. ೨೦: ಮಡಿಕೇರಿ ಶಾಸಕ ಡಾ.ಮಂತರ್ ಗೌಡ ಮಂಗಳವಾರ ಬೆಂಗಳೂರಿನಲ್ಲಿ ಅರಣ್ಯ ಸಚಿವ ಈಶ್ವರ ಖಂಡ್ರೆಯವರನ್ನು ಭೇಟಿಯಾಗಿ ಕೊಡಗಿನ ಜ್ವಲಂತ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಿದರು.

ಕೊಡಗು ಜಿಲ್ಲೆಯಲ್ಲಿ ಕಸ್ತೂರಿ ರಂಗನ್ ವರದಿ ಜಾರಿ ಮಾಡದಿರುವಂತೆ ರೈತ ಸಂಘಟನೆಗಳು, ಕಾಫಿ ಬೆಳೆಗಾರರು ಹಾಗೂ ಜಿಲ್ಲೆಯ ಸಾರ್ವಜನಿಕರು ಒತ್ತಾಯಿಸಿರುವುದರಿಂದ ಈ ಬಗ್ಗೆ ಸಚಿವರು ಪುನರ್ ಪರಿಶೀಲಿಸಬೇಕು. ಕೊಡಗಿನಲ್ಲಿ ಕಾಡಾನೆ ಹಾಗೂ ಮಾನವ ಸಂಘರ್ಷ ನಿರಂತರವಾಗಿ ನಡೆಯುತ್ತಿದ್ದು ಇದರಿಂದ ಕೃಷಿಕರ ಅಪಾರ ಕೃಷಿ ಸಂಪತ್ತು ನಾಶವಾಗುತ್ತಿರುವುದರಿಂದ ಸೂಕ್ತ ಪರಿಹಾರ ನೀಡಬೇಕು.

ಕಾಡಾನೆಗಳ ಹಾವಳಿ ತಡೆಗೆ ಶಾಶ್ವತ ಯೋಜನೆಗಳನ್ನು ರೂಪಿಸಬೇಕೆಂದು ಶಾಸಕ

ಡಾ. ಮಂತರ್ ಗೌಡ ಸಚಿವರಲ್ಲಿ ಮನವಿ ಮಾಡಿದರು.