ಸಿದ್ದಾಪುರ, ಆ. ೧೯: ಕಳತ್ಮಾಡು ಗ್ರಾಮದಲ್ಲಿ ಸಾವನ್ನಪ್ಪಿದ ಕಾಡಾನೆಯ ಮರಣೋತ್ತರ ಪರೀಕ್ಷೆಯನ್ನು ಸೋಮವಾರದಂದು ನಡೆಸಲಾಯಿತು. ಕಾಫಿ ತೋಟದಲ್ಲಿ ಕಾಡಾನೆಯೊಂದು ಭಾನುವಾರದಂದು ಸಾವನ್ನಪ್ಪಿತ್ತು. ಇದರ ಮರಣೋತ್ತರ ಪರೀಕ್ಷೆಯನ್ನು ವನ್ಯಜೀವಿ ವೈದ್ಯಾಧಿಕಾರಿ ಡಾ. ರಮೇಶ್ ನಡೆಸಿದರು.
ಈ ಸಂದರ್ಭದಲ್ಲಿ ಮೃತಪಟ್ಟ ಕಾಡಾನೆಯ ಶರೀರದಲ್ಲಿ ಯಾವುದೇ ಗಾಯದ ಗುರುತು ಕಂಡುಬAದಿಲ್ಲ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಆದರೂ ಕೂಡ ಮರಣೋತ್ತರ ಪರೀಕ್ಷೆಯ ವರದಿಯನ್ನು ಹೆಚ್ಚಿನ ಪರೀಕ್ಷೆಗಾಗಿ ಲ್ಯಾಬ್ಗೆ ಕಳುಹಿಸಲಾಗಿದೆ ಎಂದು ವೀರಾಜಪೇಟೆ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಜಗನ್ನಾಥ್ ತಿಳಿಸಿದ್ದಾರೆ.
ಈ ಬಗ್ಗೆ ಪ್ರಕರಣವನ್ನು ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು. ಕಾಡಾನೆಯು ಅಂದಾಜು ೩೫ ವರ್ಷ ಪ್ರಾಯವಾಗಿದ್ದು, ಎರಡು ದಂತವಿದ್ದು, ಮರಣೋತ್ತರ ಪರೀಕ್ಷೆ ನಡೆಸಿದ ಬಳಿಕ ಅಂದಾಜು ೨೦ ಕೆಜಿ ಇದ್ದ ಎರಡು ದಂತಗಳನ್ನು ಅರಣ್ಯ ಇಲಾಖೆ ವಶಕ್ಕೆ ನೀಡಲಾಗಿದೆ. ನಂತರ ಆನೆಯ ಕಳೇಬರಹವನ್ನು ಅಂತ್ಯಸAಸ್ಕಾರ ನೆರವೇರಿಸಲಾಯಿತು. ಈ ಸಂದರ್ಭದಲ್ಲಿ ಎಸಿಎಫ್ ಗೋಪಾಲ್, ವಲಯ ಅಧಿಕಾರಿ ಗಂಗಾಧರ್, ಅರಣ್ಯ ಸಿಬ್ಬಂದಿಗಳು ಹಾಜರಿದ್ದರು. -ವಾಸು