ಸುಂಟಿಕೊಪ್ಪ, ಆ. ೨೦: ಮಂಗಳವಾರ ಸುರಿದ ಭಾರೀ ಮಳೆಗೆ ಅಲ್ಲಿನ ನಿವಾಸಿಗಳಾದ ಹನೀಫ, ಫೌಸಿಯ, ಇಸ್ಮಾಯಿಲ್, ಅಬ್ಬೂಕ್ಕರ್, ಸಲೀಂ ಉಮ್ಮರ್ ಎಂಬವರುಗಳ ಮನೆಗಳಿಗೆ ನೀರು ನುಗ್ಗಿತ್ತು. ಪರಿಣಾಮ ಮನೆಯ ಗೃಹೋಪಯೊಗಿ ವಸ್ತುಗಳು ಹಾಗೂ ಪೀಠೋಪಕರಣಗಳನ್ನು ಮಳೆಯ ನೀರಿನಿಂದ ರಕ್ಷಿಸಲು ಹರಸಾಹಸ ಪಡಬೇಕಾಯಿತು. ಸ್ಥಳಕ್ಕೆ ಸುಂಟಿಕೊಪ್ಪ ಗ್ರಾಮ ಪಂಚಾಯಿತಿ ಅಧಕ್ಷ ಪಿ.ಆರ್. ಸುನಿಲ್‌ಕುಮಾರ್ ಹಾಗೂ ಉಪಾಧ್ಯಕ್ಷೆ ಶಿವಮ್ಮ ಮಹೇಶ್, ಪಂಚಾಯಿತಿ ಸದಸ್ಯರುಗಳಾದ ಪಿ.ಎಫ್. ಸಬಾಸ್ಟೀನ್ ಭೇಟಿ ನೀಡಿದ್ದರು.