ಬೆಂಗಳೂರು, ಆ. ೧೯ : ಮುಡಾ ಹಗರಣ ಪ್ರಕರಣಕ್ಕೆ ಸಂಬAಧಿಸಿದAತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ಗೆ ರಾಜ್ಯಪಾಲ ತಾವರ್ ಚಂದ್ ಗೆಹ್ಲೋಟ್ ಅನುಮತಿ ನೀಡಿರುವುದರ ವಿರುದ್ಧ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ತಾ. ೨೯ಕ್ಕೆ ಮುಂದೂಡಿದೆ.
ಕರ್ನಾಟಕ ಹೈಕೋರ್ಟ್ನಲ್ಲಿ ಸಿಎಂ ಪರ ವಕೀಲರು ಸಲ್ಲಿಸಿದ್ದ ರಿಟ್ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ನಾಗಪ್ರಸನ್ನ ಅವರಿದ್ದ ಪೀಠ ಪ್ರಕರಣದ ವಿಚಾರಣೆಯನ್ನು ತಾ. ೨೯ಕ್ಕೆ ಮುಂದೂಡಿದೆ. ಇದೇ ವೇಳೆ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಆದೇಶಿಸುವಂತೆ ಸಲ್ಲಿಕೆಯಾಗಿರುವ ಅರ್ಜಿಗಳ ಆದೇಶವನ್ನು ತಾ. ೨೯ಕ್ಕೆ ಮುಂದೂಡುವAತೆ ಜನಪ್ರತಿನಿಧಿಗಳ ಕೋರ್ಟ್ಗೆ ಹೈಕೋರ್ಟ್ ಸೂಚಿಸಿದ್ದು, ಈ ಮೂಲಕ ಸಿದ್ದರಾಮಯ್ಯ ಅವರಿಗೆ ತಾತ್ಕಾಲಿಕ ಸಮಾಧಾನ ಸಿಕ್ಕಿದೆ. ಸಿಎಂ ಸಿದ್ದರಾಮಯ್ಯ ಪರ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ವಾದ ಮಂಡಿಸಿದರೆ, ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ಪರ ವಕೀಲ, ಕೇಂದ್ರ ಸರ್ಕಾರದ ಸಾಲಿಸಿಟರ್ ಜನರಲ್ ಆಗಿರುವ ತುಷಾರ್ ಮೆಹ್ತಾ ಅವರು ವಾದ ಮಂಡಿಸಿದರು. ವಾದ-ಪ್ರತಿವಾದ ಆಲಿಸಿದ ನಂತರ ನ್ಯಾಯಮೂರ್ತಿಗಳು ಮಧ್ಯಂತರ ಆದೇಶ ನೀಡಿದರು. ಸಿದ್ದರಾಮಯ್ಯ ಸಲ್ಲಿಸಿರುವ ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ದೂರುದಾರರಾದ ಪ್ರತಿವಾದಿಗಳಿಗೆ ಕಾಲಾವಕಾಶ ನೀಡಿದೆ.