ಮಡಿಕೇರಿ, ಆ. ೨೧: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಕೊಡಗು ವಿಶ್ವವಿದ್ಯಾನಿಲಯ ಹಾಗೂ ಸ್ಥಳೀಯ ಪತ್ರಿಕಾ ಸಂಘಟನೆಗಳ ಸಹಕಾರದಲ್ಲಿನ ಪತ್ರಿಕಾ ದಿನಾಚರಣೆಯು ತಾ.೨೨ ರಂದು (ಇಂದು) ಬೆಳಿಗ್ಗೆ ೧೦.೩೦ ಗಂಟೆಗೆ ನಗರದ ಗಾಂಧಿ ಭವನದಲ್ಲಿ ನಡೆಯಲಿದೆ.
ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್. ಭೋಸರಾಜು, ಶಾಸಕರಾದ ಡಾ.ಮಂತರ್ ಗೌಡ, ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ಶಾಸಕರಾದ ಎ.ಎಸ್. ಪೊನ್ನಣ್ಣ, ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ವಿಧಾನ ಪರಿಷತ್ ಸದಸ್ಯರಾದ ಎಂ.ಪಿ. ಸುಜಾ ಕುಶಾಲಪ್ಪ, ಎಸ್.ಎಲ್. ಭೋಜೇಗೌಡ, ಡಾ.ಧನಂಜಯ ಸರ್ಜಿ, ಕೊಡಗು ಜಿಲ್ಲಾ ಪಂಚಾಯತ್ ಆಡಳಿತಾಧಿಕಾರಿ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಎನ್.ವಿ. ಪ್ರಸಾದ್, ಚಿಕ್ಕಅಳುವಾರ ಕೊಡಗು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಅಶೋಕ ಸಂಗಪ್ಪ ಆಲೂರ, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್, ಜಿ.ಪಂ. ಸಿಇಒ ಆನಂದ್ ಪ್ರಕಾಶ್ ಮೀನಾ ಇತರರು ಪಾಲ್ಗೊಳ್ಳಲಿದ್ದಾರೆ.
ಶಕ್ತಿ ದಿನಪತ್ರಿಕೆಯ ಪ್ರಧಾನ ಸಂಪಾದಕರಾದ ಜಿ. ರಾಜೇಂದ್ರ ಅವರು ‘ಪತ್ರಿಕಾ ದಿನಾಚರಣೆ’ಯ ಮಹತ್ವದ ಕುರಿತು ಮಾತನಾಡಲಿದ್ದಾರೆ. ಸ್ಥಳೀಯ ಪತ್ರಿಕಾ ಸಂಘಟನೆಗಳ ಅಧ್ಯಕ್ಷರು, ಪತ್ರಕರ್ತರು, ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ವಿದ್ಯಾರ್ಥಿಗಳು, ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ವಿದ್ಯಾರ್ಥಿಗಳು ಇತರರು ಪಾಲ್ಗೊಳ್ಳಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.