ಮಡಿಕೇರಿ, ಆ. ೨೧: ಸೋಮವಾರಪೇಟೆ ೬೬/೧೧ ಕೆವಿ ವಿದ್ಯುತ್ ವಿತರಣಾ ಕೇಂದ್ರದ ಎಫ್೨ ಶಾಂತಳ್ಳಿ ಫೀಡರ್ ವ್ಯಾಪ್ತಿಯಲ್ಲಿ ತುರ್ತು ನಿರ್ವಹಣಾ ಕಾಮಗಾರಿ ನಿರ್ವಹಿಸಬೇಕಿರುವುದರಿಂದ ತಾ. ೨೨ ರಂದು (ಇಂದು) ಬೆಳಿಗ್ಗೆ ೧೦ ರಿಂದ ಸಂಜೆ ೬ ಗಂಟೆಯವರೆಗೆ ಈ ಫೀಡರ್ ವ್ಯಾಪ್ತಿಯಲ್ಲಿ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವುದು.
ಯಡೂರು, ತಲ್ತಾರೆಶೆಟ್ಟಳ್ಳಿ, ತಾಕೇರಿ, ಕಿರಗಂದೂರು, ಬಸವನಕಟ್ಟೆ, ಶಾಂತಳ್ಳಿ, ಕುಂದಳ್ಳಿ, ಬಾಚಳ್ಳಿ, ಮಲ್ಲಳ್ಳಿ, ಬೆಟ್ಟದಳ್ಳಿ, ಬೆಟ್ಟದಕೊಪ್ಪ, ಹರಗ, ಕಲ್ಕಂದೂರು, ಹೊಸಬೀಡು, ತೋಳೂರು ಶೆಟ್ಟಳ್ಳಿ, ಹರಪಳ್ಳಿ, ಕೂತಿ, ಕುಂಬಾರಗಡಿಗೆ ಹಾಗೂ ಸುತ್ತಮುತ್ತಲ÷ವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಕೋರಿದೆ.
ಪೊನ್ನಂಪೇಟೆ ೬೬/೧೧ ಕೆವಿ ವಿದ್ಯುತ್ ವಿತರಣಾ ಕೇಂದ್ರದ ಎಫ್೪ ತಿತಿಮತಿ ಫೀಡರ್ನಲ್ಲಿ ತುರ್ತು ನಿರ್ವಹಣಾ ಕಾಮಗಾರಿಗಳನ್ನು ಹಮ್ಮಿಕೊಂಡಿರುವುದರಿAದ ತಾ.೨೨ ರಂದು (ಇಂದು) ಬೆಳಿಗ್ಗೆ ೧೦ ರಿಂದ ಸಂಜೆ ೫ ಗಂಟೆಯವರೆಗೆ ಈ ಫೀಡರ್ಗಳ ವ್ಯಾಪ್ತಿಯಲ್ಲಿ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವುದು.
ತಿತಿಮತಿ, ಮಾಯಮುಡಿ, ದೇವರಪುರ, ಹೆಬ್ಬಾಲೆ, ನೋಕ್ಯ, ದೇವರಪುರ, ಧನುಗಾಲ, ಕೋಣನಕಟ್ಟೆ ಹಾಗೂ ಸುತ್ತಮುತ್ತಲ ಪ್ರದೇಶಗಳ ವ್ಯಾಪ್ತಿಯಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಸೆಸ್ಕ್ ಕಾರ್ಯನಿರ್ವಾಹಕ ಎಂಜಿನಿಯರ್ ಅನಿತಾ ಬಾಯಿ ಕೋರಿದ್ದಾರೆ.