ಮಡಿಕೇರಿ, ಆ. ೨೧: ಕೇಂದ್ರ ಸರ್ಕಾರದ ಆಲಿಮ್ಕೋ ಸಂಸ್ಥೆಯಿAದ ಅಡಿಪ್ ಯೋಜನೆಯಡಿ ವಿಕಲಚೇತನರಿಗೆ ಹಾಗೂ ರಾಷ್ಟಿçÃಯ ವಯೋಶ್ರೀ ಯೋಜನೆಯಡಿ ಹಿರಿಯ ನಾಗರಿಕರಿಗೆ ವಿವಿಧ ಸಾಧನ ಸಲಕರಣೆ ನೀಡುವ ಸಂಬAಧ ಮೌಲ್ಯಮಾಪನ ಶಿಬಿರ ಹಮ್ಮಿಕೊಳ್ಳಲಾಗಿದೆ. ಜಿಲ್ಲೆಯ ವಿಶೇಷಚೇತನರು ಹಾಗೂ ಹಿರಿಯ ನಾಗರಿಕರ ಮೌಲ್ಯಮಾಪನ ತಪಾಸಣಾ ಶಿಬಿರಕ್ಕೆ ಹಾಜರಾಗಲು ತಾಲ್ಲೂಕುವಾರು ದಿನಾಂಕ ನಿಗದಿಪಡಿಸಲಾಗಿದೆ.

ಆಗಸ್ಟ್ ೨೭ ರಂದು ಕುಶಾಲನಗರ ತಾಲ್ಲೂಕಿಗೆ ಕುಶಾಲನಗರ ರೋಟರಿ ಸಭಾಂಗಣ, ಆಗಸ್ಟ್, ೨೮ ರಂದು ಸೋಮವಾರಪೇಟೆ ತಾಲ್ಲೂಕಿಗೆ ಸೋಮವಾರಪೇಟೆ ಚನ್ನಬಸಪ್ಪ ಸಭಾಂಗಣ, ಆಗಸ್ಟ್, ೨೯ ರಂದು ವೀರಾಜಪೇಟೆ ಮತ್ತು ಪೊನ್ನಂಪೇಟೆ ತಾಲ್ಲೂಕಿಗೆ ಗೋಣಿಕೊಪ್ಪಲು ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ಹಾಗೂ ಆಗಸ್ಟ್, ೩೦ ಮತ್ತು ೩೧ ರಂದು ಮಡಿಕೇರಿ ತಾಲ್ಲೂಕಿಗೆ ಮಡಿಕೇರಿಯ ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ಸಭಾಂಗಣದಲ್ಲಿ ಸಾಧನ ಸಲಕರಣೆಗಳನ್ನು ನೀಡುವ ಸಂಬAಧ ಮೌಲ್ಯಮಾಪನ ಶಿಬಿರ ನಡೆಯಲಿದೆ.

ಈ ದಿನಾಂಕಗಳAದು ಶಿಬಿರಗಳಲ್ಲಿ ಭಾಗವಹಿಸುವ ವಿಶೇಷಚೇತನರು ಯುಡಿಐಡಿ ಕಾರ್ಡ್, ಆಧಾರ್ ಕಾರ್ಡ್ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಅಥವಾ ಬಿಪಿಎಲ್ ಕಾರ್ಡ್, ಪಾಸ್ ಪೋರ್ಟ್ ಅಳತೆಯ ಭಾವಚಿತ್ರ ಹಾಗೂ ಹಿರಿಯ ನಾಗರಿಕರು ಆಧಾರ್ ಕಾರ್ಡ್, ಹಿರಿಯ ನಾಗರಿಕರ ಗುರುತಿನ ಚೀಟಿ, ಆದಾಯ ಪ್ರಮಾಣ ಪತ್ರ ಅಥವಾ ಬಿಪಿಎಲ್ ಕಾರ್ಡ್, ಪಾಸ್ ಪೋರ್ಟ್ ಅಳತೆಯ ಭಾವಚಿತ್ರವನ್ನು ತರಬೇಕಾಗಿ ಹಾಗೂ ಹೆಸರನ್ನು ನೋಂದಾಯಿಸಿಕೊಳ್ಳಲು ಎಂಆರ್‌ಡಬ್ಲುö್ಯಗಳಾದ ಸೋಮವಾರಪೇಟೆ ಹಾಗೂ ಕುಶಾಲನಗರ ತಾಲ್ಲೂಕಿನ ಹರೀಶ್ ಟಿ.ಆರ್ ಮೊ.ಸಂ. ೮೮೬೧೪೨೮೯೩೧, ವಿರಾಜಪೇಟೆ ತಾಲೂಕಿನವರು ಪ್ರಥನ್ ಕುಮಾರ್ ಸಿ.ಬಿ ಮೊ.ಸಂ-೯೯೦೦೮೮೩೬೫೪ ಹಾಗೂ ಮಡಿಕೇರಿ ತಾಲ್ಲೂಕಿನವರು ರಾಜೇಶ್ ಮೊ.ಸಂ–೮೦೭೩೧೯೨೯೧೪ ಸಂಖ್ಯೆಗಳನ್ನು ಹಾಗೂ ಹೆಚ್ಚಿನ ಮಾಹಿತಿಗೆ ಕಚೇರಿ ದೂ.ಸಂ.೦೮೨೭೨-೨೯೫೮೨೯ ನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಅವರು ತಿಳಿಸಿದ್ದಾರೆ.