ವೀರಾಜಪೇಟೆ, ಆ. ೨೧: ನಾಟ್ಯ ಮಯೂರಿ ನೃತ್ಯ ಶಾಲೆ ಹಾಗೂ ಡಿವೈನ್ ಟೆಂಪಲ್ ಫೌಂಡೇಶನ್ ಬೆಂಗಳೂರು ಇದರ ಸಹಯೋಗದಲ್ಲಿ ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದ ನಯನ ಸಭಾಂಗಣದಲ್ಲಿ ನಡೆದ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ವೀರಾಜಪೇಟೆಯ ಭರತನಾಟ್ಯ ಕಲಾವಿದೆ ಬಿ.ಎನ್. ಲಾವಣ್ಯ ಬೋರ್ಕರ್ ಅವರಿಗೆ ನೃತ್ಯ ಸಾಧನೆಗಾಗಿ ರಾಷ್ಟçಮಟ್ಟದ ಮಿನುಗುತಾರೆ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು. ಲಾವಣ್ಯ ಬೋರ್ಕರ್ ವೀರಾಜಪೇಟೆಯ ಸೆಂಟ್ ಆ್ಯನ್ಸ್ ಪದವಿ ಕಾಲೇಜಿನ ತೃತೀಯ ಬಿಬಿಎ ವಿದ್ಯಾರ್ಥಿನಿ ಹಾಗೂ ವೀರಾಜ ಪೇಟೆಯ ನಾಟ್ಯ ಮಯೂರಿ ನೃತ್ಯ ಶಾಲೆಯ ಪ್ರೇಮಾಂಜಲಿ ಆಚಾರ್ಯ ಅವರ ಶಿಷ್ಯೆಯಾಗಿರುತ್ತಾಳೆ. ಮೂಲತಃ ವೀರಾಜಪೇಟೆ ಸಮೀಪದ ಬೇಟೋಳಿ ರಾಮನಗರದವರಾದ ಬಿ.ಜಿ. ನಟರಾಜ್ ಬೋರ್ಕರ್ ಹಾಗೂ ಸುನಂದ ದಂಪತಿಯ ಪುತ್ರಿ.