ಸುಂಟಿಕೊಪ್ಪ, ಆ. ೨೧: ಶ್ರೀ ಗೌರಿ ಗಣೇಶ ಹಬ್ಬ ಆಚರಣೆಯ ಸಂದರ್ಭ ಆಯೋಜಕರು ಸಾರ್ವಜನಿಕರಿಗೆ ತೊಂದರೆಯಾಗದAತೆ ಎಚ್ಚರವಹಿಸು ವುದು, ಹಬ್ಬದ ಸಂಸ್ಕೃತಿಯನ್ನು ಎತ್ತಿ ಹಿಡಿಯುವುದು ಮುಖ್ಯ, ಅದೇ ರೀತಿಯಲ್ಲಿ ಕಾನೂನು ಪರಿಪಾಲಿ ಸುವುದು, ಯಾವುದೇ ಅನಾಹುತಗಳು ಸಂಭವಿಸಿದರೆ ಆಯೋಜಕರೇ ನೇರ ಹೊಣೆಗಾರರು ಎಂದು ಗೌರಿ ಗಣೇಶ ಆಚರಣಾ ಪೂರ್ವ ನಿಯೋಜಿತ ಸಭೆಯಲ್ಲಿ ಜಿಲ್ಲಾ ಪೊಲೀಸ್ ಹೆಚ್ಚುವರಿ ವರಿಷ್ಠಾಧಿಕಾರಿ ಸುಂದರ್‌ರಾಜ್ ಹೇಳಿದರು.ಪೊಲೀಸ್ ಠಾಣೆಯ ಆವರಣ ದಲ್ಲಿ ಆಯೋಜಿಸಲಾದ ಸುಂಟಿಕೊಪ್ಪ ಹೋಬಳಿ ವ್ಯಾಪ್ತಿಯ ಶ್ರೀಗೌರಿ ಗಣೇಶ ಆಚರಣಾ ಸಮಿತಿಗಳ ಪೂರ್ವ ನಿಯೋಜಿತ ಸಭೆಯಲ್ಲಿ ಸುಂದರರಾಜ್ ಮಾತನಾಡಿ, ಸರಕಾರ ನೀಡಿರುವ ಮಾರ್ಗಸೂಚಿಗಳನ್ನು ಗ್ರಾಮಗಳಲ್ಲಿ ಶ್ರೀ ಗೌರಿ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸುವ ಆಯೋಜಕ ಸಮಿತಿಗಳವರು ಪೊಲೀಸ್ ಠಾಣೆ ಸೇರಿದಂತೆ ವಿವಿಧ ಇಲಾಖೆಗಳಿಂದ ಅನುಮತಿಯನ್ನು ಕಡ್ಡಾಯವಾಗಿ ಪಡೆದುಕೊಂಡಿರಬೇಕು. ಮುಂಜಾಗೃತಾ ಕ್ರಮವಾಗಿ ಶ್ರೀ ಗೌರಿ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸುವ ಸ್ಥಳದಲ್ಲಿ ಸಿಸಿ ಕ್ಯಾಮರಾಗಳನ್ನು ಅಳವಡಿಸುವು ದರಿಂದ ಅಹಿತಕರ ಘಟನೆಗಳು ಸಂಭವಿಸದAತೆ ತಡೆಯಲು ಸಹಕಾರಿಯಾಗಲಿದೆ. ವಿದ್ಯುತ್ ಸಂಪರ್ಕ ಅಳವಡಿಸಿ ಕೊಳ್ಳುವಾಗ ಸೂಕ್ಷö್ಮತೆಯನ್ನು ಗಮನದಲ್ಲಿ ಇರಿಸಿಕೊಳ್ಳಬೇಕು. ಶ್ರೀ ಗೌರಿ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸಿದ ಸ್ಥಳದಲ್ಲಿ ಸಮಿತಿಯ ಈರ್ವರು ಪದಾಧಿಕಾರಿಗಳು ಕಾವಲು ಇರುವಂತೆ ಸೂಚಿಸಿದರು. ಸ್ಥಳದ ಪೂರ್ವಾಪರ ಮಾಹಿತಿಯನ್ನು ಪಡೆದಿರಬೇಕು. ವಿಸರ್ಜನೆ ವೇಳೆ ನುರಿತ ಈಜು ಬಲ್ಲವರು ಸೂಕ್ತ ಭದ್ರತೆಯ ಜಾಕಿಟ್ ಕಡ್ಡಾಯವಾಗಿ ತೊಟ್ಟಿರಬೇಕು. ಮೂರ್ತಿಗಳ ವಿಸರ್ಜನೆಯ ವೇಳೆ ಅಲಂಕೃತ ಮಂಟಪ ಮೆರವಣಿಗೆ ತೆರಳುವ ಮಾರ್ಗಗಳ ಮಾಹಿತಿ, ನಿಗದಿಗೊಂಡಿರುವ ಸಮಯವನ್ನು ಪೊಲೀಸ್ ಠಾಣೆಗೆ ತಿಳಿಸುವಂತೆ ಅವರು ಸೂಚಿಸಿದರು.

ಸಭೆಯಲ್ಲಿ ಕುಶಾಲನಗರ ವೃತ್ತ ನಿರೀಕ್ಷಕ

(ಮೊದಲ ಪುಟದಿಂದ) ರಾಜೇಶ್ ಕೋಟ್ಯಾನ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಸುಂಟಿಕೊಪ್ಪ ಪೊಲೀಸ್ ಠಾಣಾಧಿಕಾರಿ ಚಂದ್ರಶೇಖರ್ ಸರಕಾರದಿಂದ ಹೊರಡಿಸಿರುವ ಕಾನೂನು ಅನುಮತಿ ಪತ್ರಗಳ ಬಗ್ಗೆ ಪ್ರಾಸ್ತಾವಿಕವಾಗಿ ಮಾಹಿತಿ ನೀಡಿದರು.

ವೇದಿಕೆಯಲ್ಲಿ ಸುಂಟಿಕೊಪ್ಪ ಪೊಲೀಸ್ ಠಾಣೆಯ ಅಪರಾಧ ವಿಭಾಗದ ಎಸ್.ಐ. ಭಾರತಿ, ಪೊಲೀಸ್ ಸಿಬ್ಬಂದಿಗಳು ವಿವಿಧ ಗ್ರಾಮಗಳಿಂದ ಆಯೋಜಕರು ಪಾಲ್ಗೊಂಡಿದ್ದರು.