ಚೆಯ್ಯಂಡಾಣೆ, ಆ. ೨೨: ಸ್ಥಳೀಯ ಸರಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ಪ್ರಯೋಗ ಶಾಲಾ ತಾಂತ್ರಿಕ ಅಧಿಕಾರಿಯಾಗಿ ೨೫ ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತಿಯಾದ ಲೀಲಾವತಿ ಅವರನ್ನು ಆಸ್ಪತ್ರೆ ವತಿಯಿಂದ ಸನ್ಮಾನಿಸಿ ಬೀಳ್ಕೊಡಲಾಯಿತು.
ಆಸ್ಪತ್ರೆಯ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ. ವಿಜಯ್ ಕುಮಾರ್ ವಹಿಸಿ ಮಾತನಾಡಿದರು.
ಚೆಯ್ಯಂಡಾಣೆ ಆಸ್ಪತ್ರೆಯ ವೈದ್ಯಾಧಿಕಾರಿ ಅಂಚು ಗೌತಮಿ ಆಸ್ಪತ್ರೆಯ ಸಿಬ್ಬಂದಿಗಳು, ಆಶಾ ಕಾರ್ಯಕರ್ತೆಯರು, ಸಿ.ಹೆಚ್.ಓ.ಗಳು ಉಪಸ್ಥಿತ ರಿದ್ದರು. ಕನಕಾವತಿ ಸ್ವಾಗತಿಸಿ, ವಂದಿಸಿದರು.