ಚೆಯ್ಯಂಡಾಣೆ, ಆ. ೨೨: ಚಾಲಕನ ನಿಯಂತ್ರಣ ತಪ್ಪಿದ ಆಟೋರಿಕ್ಷಾವೊಂದು ಪಲ್ಟಿ ಯಾಗಿ ಪ್ರಯಾಣಿಕರು ಗಂಭೀರ ಗಾಯಗೊಂಡು ಆಸ್ಪತ್ರೆ ಸೇರಿರುವ ಘಟನೆ ನಾಪೋಕ್ಲು ಬಳಿಯ ಎಮ್ಮೆಮಾಡು ಗ್ರಾಮ ದಲ್ಲಿ ಗುರುವಾರ ಬೆಳಿಗ್ಗೆ ಸಂಭವಿಸಿದೆ.

ಎಮ್ಮೆಮಾಡು ಬಳಿಯ ಕೂರುಳಿ ಪರಂಬು ಗ್ರಾಮದಿಂದ ಪ್ರಯಾಣಿಕರನ್ನು ಹೊತ್ತು ಎಮ್ಮೆಮಾಡು ಕಡೆಗೆ ತೆರಳುತ್ತಿದ್ದಾಗ ಎಮ್ಮೆಮಾಡು ಕೂರುಳಿ ಸಂಪರ್ಕ ರಸ್ತೆಯ ಇಳಿಜಾರಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಅಪಘಾತ ಸಂಭವಿಸಿದೆ. ಅಪಘಾತದಿಂದ ಆಟೋರಿಕ್ಷಾ ಸಂಪೂರ್ಣ ಜಖಂಗೊAಡಿದ್ದು ಆಟೋ ಚಾಲಕ ಎಮ್ಮೆಮಾಡು ಕೂರುಳಿ ಗ್ರಾಮದ ನಿವಾಸಿ ಇಬ್ರಾಹಿಂ ಸೇರಿದಂತೆ ಆಟೋದಲ್ಲಿದ್ದ ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿವೆ. ಗಾಯಾಳುಗಳಿಗೆ ನಾಪೋಕ್ಲು ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಥಮ ಚಿಕಿತ್ಸೆ ನೀಡಿದ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಡಿಕೇರಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ನಾಪೋಕ್ಲು ಠಾಣಾಧಿಕಾರಿ ಮಂಜುನಾಥ್ ಹಾಗೂ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.