ಸೋಮವಾರಪೇಟೆ, ಆ. ೨೨: ಕರ್ನಾಟಕ ರಾಜ್ಯ ಒಕ್ಕಲಿಗರ ಸಂಘದ ಮೂಲಕ ಪಟ್ಟಣದಲ್ಲಿ ರೂ. ೧೦.೫೫ ಕೋಟಿ ವೆಚ್ಚದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಬಾಲಕಿಯರ ವಿದ್ಯಾರ್ಥಿ ವಸತಿ ನಿಲಯಕ್ಕೆ ರಾಜ್ಯ ಒಕ್ಕಲಿಗರ ಸಂಘದ ಅಧ್ಯಕ್ಷರು ಹಾಗೂ ಶ್ರವಣಬೆಳಗೊಳ ಕ್ಷೇತ್ರದ ಶಾಸಕರೂ ಆದ ಸಿ.ಎನ್. ಬಾಲಕೃಷ್ಣ ಸೇರಿದಂತೆ ಪ್ರಮುಖರು ಭೂಮಿ ಪೂಜೆ ನೆರವೇರಿಸಿದರು.
ಇಲ್ಲಿನ ಬಸವೇಶ್ವರ ರಸ್ತೆಯಲ್ಲಿರುವ ನಿವೇಶನದಲ್ಲಿ ನೂತನ ವಸತಿ ನಿಲಯಕ್ಕೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಬಾಲಕೃಷ್ಣ ಅವರು, ರಾಜ್ಯ ಒಕ್ಕಲಿಗರ ಸಂಘದಿAದ ಪ್ರಸಕ್ತ ಸಾಲಿನಲ್ಲಿ ಕೊಡಗು ಜಿಲ್ಲೆಗೆ ರೂ. ೧೦ ಕೋಟಿಗೂ ಅಧಿಕ ಅನುದಾನ ಬಿಡುಗಡೆಯಾಗಿದೆ. ಸೋಮವಾರಪೇಟೆಯಲ್ಲಿ ವಿದ್ಯಾರ್ಥಿ ನಿಲಯ ಸ್ಥಾಪನೆಯಿಂದ ಹೆಚ್ಚಿನ ಅನುಕೂಲವಾಗಲಿದೆ ಎಂದರು.
೨೦೦ ಬೆಡ್ಗಳನ್ನು ಒಳಗೊಂಡAತೆ ಸುಸಜ್ಜಿತ ವಸತಿ ನಿಲಯ ಸ್ಥಾಪನೆಗೆ ಸಂಘದ ಮೂಲಕವೇ ನಿವೇಶನ ಖರೀದಿಸಿ ಕಟ್ಟಡ ನಿರ್ಮಾಣಕ್ಕೆ ಕ್ರಮವಹಿಸಲಾಗುತ್ತಿದೆ. ಇದೇ ಕಟ್ಟಡದಲ್ಲಿ ಹೃದಯ ಸಂಬAಧಿ ಖಾಯಿಲೆಗಳ ತಪಾಸಣಾ ಘಟಕ ಆರಂಭಗೊಳ್ಳಲಿದೆ ಎಂದು ತಿಳಿಸಿದರು.
ಒಕ್ಕಲಿಗರ ಸಂಘದ ನಿರ್ದೇಶಕ ಹರಪಳ್ಳಿ ರವೀಂದ್ರ ಮಾತನಾಡಿ, ಕೊಡಗಿನ ಜನರ ಬೇಡಿಕೆಯನ್ನು ಸಂಘದ ಮುಂದಿಟ್ಟ ಸಂದರ್ಭ ಆಡಳಿತ ಮಂಡಳಿ ಅನುಮೋದನೆ ನೀಡಿ, ಅನುದಾನ ಬಿಡುಗಡೆ ಮಾಡಿದೆ. ಈ ಯೋಜನೆಯಿಂದ ಭವಿಷ್ಯದಲ್ಲಿ ಸಾವಿರಾರು ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ ಎಂದರು.
ಶಾಸಕ ಡಾ. ಮಂತರ್ ಗೌಡ, ಕಿಮ್ಸ್ ಅಧ್ಯಕ್ಷ ರಘು ಗೌಡ, ಒಕ್ಕಲಿಗರ ಸಂಘದ ಉಪಾಧ್ಯಕ್ಷ ಆರ್. ಪ್ರಕಾಶ್, ಗೌರವಾಧ್ಯಕ್ಷ ಪುಟ್ಟಸ್ವಾಮಿ, ನಿರ್ದೇಶಕರುಗಳಾದ ಡಾ. ಅಂಜನಪ್ಪ, ಚಂದ್ರಶೇಖರ್, ಹನುಮಂತರಾಯಪ್ಪ, ರಾಘವೇಂದ್ರ, ಪೂರ್ಣೇಶ್, ಜಿಲ್ಲಾ ಒಕ್ಕಲಿಗರ ಯುವ ವೇದಿಕೆ ಅಧ್ಯಕ್ಷ ಗಿರೀಶ್ ಮಲ್ಲಪ್ಪ, ಜಿಲ್ಲಾ ಒಕ್ಕಲಿಗರ ಸಂಘದ ಅಧ್ಯಕ್ಷ ಎಸ್.ಎಂ. ಚಂಗಪ್ಪ, ಸೋಮವಾರಪೇಟೆ ಒಕ್ಕಲಿಗರ ಸಂಘದ ಅಧ್ಯಕ್ಷ ಎ.ಆರ್. ಮುತ್ತಣ್ಣ, ಒಕ್ಕಲಿಗರ ಯುವ ವೇದಿಕೆ ಅಧ್ಯಕ್ಷ ಚಕ್ರವರ್ತಿ ಸುರೇಶ್, ವಿಧಾನ ಪರಿಷತ್ ಮಾಜೀ ಸದಸ್ಯ ಎಸ್.ಜಿ. ಮೇದಪ್ಪ ಸೇರಿದಂತೆ ಇತರರು ಉಪಸ್ಥಿತರಿದ್ದರು.