ಮಡಿಕೇರಿ, ಆ. ೨೨: ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡದ ಡಾ. ಬಿ.ಆರ್. ಅಂಬೇಡ್ಕರ್ ಅನುಯಾಯಿಗಳಿಂದ ಮಹಾರಾಷ್ಟçದ ನಾಗಪುರದ ದೀಕ್ಷಾಭೂಮಿ ಯಾತ್ರೆಗೆ ಅರ್ಜಿ ಆಹ್ವಾನಿಸಲಾಗಿದೆ.
ಯಾತ್ರೆಗೆ ತೆರಳುವ ಅರ್ಹ ಯಾತ್ರಾರ್ಥಿಗಳು ಇಲಾಖಾ ವೆಬ್ಸೈಟ್ ತಿತಿತಿ.sತಿ.ಞಚಿಡಿ.ಟಿiಛಿ.iಟಿ ನಲ್ಲಿ ಆನ್ಲೈನ್ ಮೂಲಕ ತಾ. ೩೧ ರವರೆಗೆ ಅರ್ಜಿ ಸಲ್ಲಿಸಬಹುದು. ದಾಖಲಾತಿಗಳನ್ನು ಉಪನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಮಡಿಕೇರಿ ಇಲ್ಲಿಗೆ ತಾ. ೩೧ ರ ಸಂಜೆ ೫.೩೦ ಗಂಟೆಯೊಳಗೆ ಸಲ್ಲಿಸುವುದು. ನಂತರ ಬಂದ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ.
ದೀಕ್ಷಾಭೂಮಿ ನಾಗಪುರಕ್ಕೆ ಹೋಗ ಬಯಸುವ ಯಾತ್ರಾರ್ಥಿಗಳು ಉಪ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ಕೊಡಗು ಜಿಲ್ಲೆ ಇವರಿಗೆ ತಾ. ೩೧ ರೊಳಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವುದು. ಜಿಲ್ಲಾವಾರು ನಿಗದಿತ ಗುರಿಗಿಂತ ಹೆಚ್ಚು ಅರ್ಜಿಗಳು ಸ್ವೀಕೃತಗೊಂಡಲ್ಲಿ ವಯಸ್ಸಿನ ಶ್ರೇಷ್ಠತೆ ಆಧಾರದ ಮೇಲೆ ಆಯ್ಕೆ ಮಾಡುವುದು.
ಯಾತ್ರಾರ್ಥಿಗಳು ಕನಿಷ್ಟ ೧೮ ವರ್ಷ ಮೇಲ್ಪಟ್ಟವರಾಗಿಬೇಕು. ಯಾತ್ರಾರ್ಥಿಗಳು ಬಿಪಿಎಲ್ ಕಾರ್ಡ್ ಹೊಂದಿರಬೇಕು ಯಾತ್ರಾರ್ಥಿಗಳು ಸಮಾಜ ಕಲ್ಯಾಣ ಇಲಾಖಾ ವೆಬ್ಸೈಟ್ ತಿತಿತಿ.sತಿ.ಞಚಿಡಿ.ಟಿiಛಿ.iಟಿ ನಲ್ಲಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಯಾತ್ರಾರ್ಥಿಗಳು ಕಡ್ಡಾಯವಾಗಿ ಆಧಾರ್ ಕಾರ್ಡ್ ಹೊಂದಿರಬೇಕು. ಮೊದಲು ಅರ್ಜಿ ಸಲ್ಲಿಸಿದವರಿಗೆ ಮೊದಲ ಆದ್ಯತೆ ನೀಡಲಾಗುವುದು. ನಿಗದಿಪಡಿಸಿದ ಗುರಿಗಳಿಗಿಂತ ಹೆಚ್ಚಿನ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ. ಯಾತ್ರಾರ್ಥಿಗಳು ಆಧಾರ್ ಕಾರ್ಡ್, ರೇಷನ್ ಕಾರ್ಡ್ಗಳ ಪ್ರತಿಗಳನ್ನು ಅರ್ಜಿಯೊಂದಿಗೆ ಅಪ್ಲೋಡ್ ಮಾಡುವುದು. ಯಾತ್ರಾರ್ಥಿಗಳು ಎಸ್ಸಿ-ಎಸ್ಟಿ ಸಮುದಾಯಕ್ಕೆ ಸೇರಿದವರಾಗಿರಬೇಕು. ಇತರೆ ಸಮುದಾಯದ ಜನರು ಬಾಬಾ ಸಾಹೇಬ್ ಡಾ. ಬಿ.ಆರ್. ಅಂಬೇಡ್ಕರ್ ಅನುಯಾಯಿಗಳು ಸಹ ಯಾತ್ರೆ ಕೈಗೊಳ್ಳಬಹುದು.
ಆಯ್ಕೆಯಾದ ಯಾತ್ರಾರ್ಥಿಗಳು ಒಂದುವೇಳೆ ಸ್ವಂತ ವಾಹನದಲ್ಲಿ ಪ್ರಯಾಣ ಮಾಡಿದ್ದಲ್ಲಿ ಈ ಪ್ರಯಾಣ ಕೈಗೊಂಡAತೆ ಧೃಢೀಕರಿಸಿ ಅಫಿಡವಿಟ್ ಸಲ್ಲಿಸಬೇಕು ಹಾಗೂ ಪೆಟ್ರೋಲ್, ಡೀಸಲ್ ಬಿಲ್ಲುಗಳನ್ನು ಸಹ ಸಲ್ಲಿಸತಕ್ಕದ್ದು ಹಾಗೂ ಅಲ್ಲಿಗೆ ಪ್ರಯಾಣ ಮಾಡಿದ್ದಕ್ಕೆ ಸೂಕ್ತ ದಾಖಲಾತಿಗಳನ್ನು ಸಲ್ಲಿಸುವುದು.
ಡಾ. ಬಿ.ಆರ್. ಅಂಬೇಡ್ಕರ್ ರವರ ಚಿಂತನೆಗಳ ಬಗ್ಗೆ ಅರಿವು ಹೊಂದಿದ್ದು, ಸಮಾಜ ಸೇವೆ ಮಾಡಿದ ಅನುಭವ ಹೊಂದಿರಬೇಕು. ಈಗಾಗಲೇ ಸರ್ಕಾರದ ವೆಚ್ಚದಲ್ಲಿ ಒಮ್ಮೆ ನಾಗಪುರದ ದೀಕ್ಷಾ ಭೂಮಿಗೆ ಪ್ರವಾಸ ಮಾಡಿದವರು ೨ನೇ ಬಾರಿ ಈ ಸೌಲಭ್ಯಕ್ಕೆ ಅರ್ಹರಲ್ಲ. ಸರ್ಕಾರಿ ಮತ್ತು ಅದರ ಅಂಗ ಸಂಸ್ಥೆಗಳಲ್ಲಿ ಸೇವೆಯಲ್ಲಿರುವವರು ಅರ್ಹರಲ್ಲ. ರಾಜ್ಯದಲ್ಲಿ ಆಯಾಯ ಜಿಲ್ಲೆಗಳಿಂದಲೇ ನಾಗಪುರಕ್ಕೆ ಹೋಗಿ ಬರಲು ತಗಲುವ ಪ್ರಯಾಣದ ವೆಚ್ಚವನ್ನು ಮಾತ್ರ ಸರ್ಕಾರದಿಂದ ಭರಿಸಲಾಗುವುದು ವಸತಿ ಮತ್ತು ಭೋಜನಾ ವೆಚ್ಚವನ್ನು ಯಾತ್ರಾರ್ಥಿಗಳೇ ಭರಿಸತಕ್ಕದ್ದು. ಯಾತ್ರಾರ್ಥಿಗಳು ತಮ್ಮ ಹೆಸರಿನಲ್ಲಿರುವ ಉಳಿತಾಯ ಖಾತೆಯ ಸಂಖ್ಯೆ ಬ್ಯಾಂಕಿನ ಹೆಸರು, ವಿಳಾಸ ಮತ್ತು ಐಎಫ್ಎಸ್ಸಿ ಕೋಡ್ ಅನ್ನು ಕಡ್ಡಾಯವಾಗಿ ಆನ್ಲೈನ್ನಲ್ಲಿ ಭರ್ತಿ ಮಾಡತಕ್ಕದ್ದು.
ಹೆಚ್ಚಿನ ಮಾಹಿತಿಗೆ ಉಪನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಕೊಡಗು ಜಿಲ್ಲೆ, ಮಡಿಕೇರಿ ೯೪೮೦೮೪೩೦೩೭, ಸಹಾಯಕ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಮಡಿಕೇರಿ ೦೮೨೭೨-೨೨೩೫೫೨, ಸಹಾಯಕ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಸೋಮವಾರಪೇಟೆ ೦೮೨೭೬-೨೮೧೧೧೫, ಸಹಾಯಕ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಪೊನ್ನಂಪೇಟೆ- ೦೮೨೭೪-೨೪೯೪೭೬ ನ್ನು ಸಂಪರ್ಕಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಶೇಖರ್ ತಿಳಿಸಿದ್ದಾರೆ.
ವಿದ್ಯಾರ್ಥಿ ವೇತನಕ್ಕೆ
ಭಾರತೀಯ ಅಂಚೆ ಇಲಾಖೆಯು ಶಾಲಾ ಮಕ್ಕಳಲ್ಲಿ ಅಂಚೆ ಚೀಟಿ ಸಂಗ್ರಹಣೆ ಉತ್ತೇಜಿಸಲು ‘ದೀನ್ ದಯಾಳ್ ಸ್ಪರ್ಶ್ ಯೋಜನೆ’ ಅಡಿಯಲ್ಲಿ ವಿದ್ಯಾರ್ಥಿ ವೇತನವನ್ನು ನೀಡುವುದಕ್ಕಾಗಿ ೬ನೇ ತರಗತಿಯಿಂದ ೯ನೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
ಸ್ಪರ್ಶ್ ಎಂದರೆ ಸ್ಟಾö್ಯಂಪ್ಗಳಲ್ಲಿ ಅಭಿರುಚಿ ಮತ್ತು ಸಂಶೋಧನೆಯನ್ನು ಹವ್ಯಾಸವಾಗಿ ಉತ್ತೇಜಿಸಲು ವಿದ್ಯಾರ್ಥಿ ವೇತನ, ಶೈಕ್ಷಣಿಕ ಪಠ್ಯಕ್ರಮ ಬಲಪಡಿಸಲು ಮತ್ತು ಪೂರಕವಾಗಿ ಸಮರ್ಥನೀಯ ರೀತಿಯಲ್ಲಿ, ಚಿಕ್ಕ ವಯಸ್ಸಿನ ಮಕ್ಕಳಲ್ಲಿ ಅಂಚೆ ಚೀಟಿಗಳ ಸಂಗ್ರಹದ ಹವ್ಯಾಸ ಉತ್ತೇಜಿಸುವುದು ವಿದ್ಯಾರ್ಥಿ ವೇತನದ ಉದ್ದೇಶವಾಗಿದೆ.
ಈ ಹವ್ಯಾಸವು ಅವರಿಗೆ ವಿಶ್ರಾಂತಿ ಮತ್ತು ಒತ್ತಡ ನಿವಾರಿಸಲು ಸಹಾಯ ಮಾಡುತ್ತದೆ. ಈ ಯೋಜನೆಯಡಿ, ೨೦೨೩-೨೪ ಶೈಕ್ಷಣಿಕ ವರ್ಷದಲ್ಲಿ ಕನಿಷ್ಟ ಶೇ. ೬೦ ಅಂಕಗಳನ್ನು ಹೊಂದಿರುವ ಮತ್ತು ಅಂಚೆ ಚೀಟಿಗಳ ಸಂಗ್ರಹದ ಠೇವಣಿ ಖಾತೆ/ ಫಿಲಾಟೆಲಿಕ್ ಕ್ಲಬ್ನ ಸದಸ್ಯರು ಮತ್ತು ಅಂಚೆ ಚೀಟಿ ಸಂಗ್ರಹವನ್ನು ಹವ್ಯಾಸವಾಗಿ ಮುಂದುವರಿಸುವ ೬ನೇ ತರಗತಿಯಿಂದ ೯ನೇ ತರಗತಿಯ ವಿದ್ಯಾರ್ಥಿಗಳಿಗೆ ರೂ. ೬ ಸಾವಿರಗಳ ವಿದ್ಯಾರ್ಥಿ ವೇತನ ನೀಡಲಾಗುತ್ತದೆ.
ಅಂಚೆ ಚೀಟಿಗಳ ಸಂಗ್ರಹದ ರಸಪ್ರಶ್ನೆ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ. ಅಂಚೆ ಚೀಟಿಗಳ ಸಂಗ್ರಹದ ರಸಪ್ರಶ್ನೆಯಲ್ಲಿ ಆಯ್ಕೆಯಾದ ವಿದ್ಯಾರ್ಥಿಗಳು ಅಂಚೆ ಇಲಾಖೆಯು ನೀಡುವ ಅಂಚೆ ಚೀಟಿಗಳ ಸಂಗ್ರಹ ಯೋಜನೆಯಲ್ಲಿ ಯಶಸ್ವಿಯಾಗಿ ಸ್ಪರ್ಧಿಸಬೇಕಿದೆ.
ಹಂತ-೧ ಅಂಚೆಚೀಟಿಗಳ ಸಂಗ್ರಹದ ರಸಪ್ರಶ್ನೆಯಲ್ಲಿ ಭಾಗವಹಿಸಲು ಅರ್ಜಿ ಸಲ್ಲಿಸಲು/ಪೋಸ್ಟ್ ಮಾಡಲು ತಾ. ೩೧ ಕೊನೆಯ ದಿನವಾಗಿದೆ. ಕೊಡಗು ಜಿಲ್ಲೆಯ ಎಲ್ಲಾ ಶಾಲೆಗಳು ತಮ್ಮ ವಿದ್ಯಾರ್ಥಿಗಳನ್ನು ವಿದ್ಯಾರ್ಥಿ ವೇತನದ ಈ ಯೋಜನೆಯಲ್ಲಿ ಭಾಗವಹಿಸಲು ಪ್ರೋತ್ಸಾಹಿಸಲಾಗುತ್ತಿದೆ. ಹೆಚ್ಚಿನ ಮಾಹಿತಿಗೆ ಬಿ.ಎಸ್. ಸುದರ್ಶನ, ಮಾರ್ಕೆಟಿಂಗ್ ಎಕ್ಸಿಕ್ಯೂಟಿವ್, ಕೊಡಗು ಅಂಚೆ ವಿಭಾಗ ದೂ. ೯೪೪೮೨೯೧೦೪೪ ನ್ನು ಸಂಪರ್ಕಿಸಬಹುದು ಎಂದು ಕೊಡಗು ವಿಭಾಗದ ಅಂಚೆ ಅಧೀಕ್ಷಕರು ತಿಳಿಸಿದ್ದಾರೆ.
ಬಾಲಕ-ಬಾಲಕಿಯರ ವಿದ್ಯಾರ್ಥಿ ನಿಲಯಗಳಿಗೆ ಪ್ರವೇಶಕ್ಕಾಗಿ
ಪ್ರಸಕ್ತ ಸಾಲಿಗೆ ಕೊಡಗು ಜಿಲ್ಲೆಯಲ್ಲಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕ-ಬಾಲಕಿಯರ ವಿದ್ಯಾರ್ಥಿ ನಿಲಯಗಳಿಗೆ ಹಿಂದುಳಿದ ವರ್ಗಗಳ ಪ್ರವರ್ಗ-೧, ೨ಎ, ೨ಬಿ, ೩ಎ ಹಾಗೂ ೩ಬಿ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಮತ್ತು ಇತರೆ ಜನಾಂಗಗಳಿಗೆ ಸೇರಿದ ಸಾಮಾನ್ಯ ಪದವಿ ಕೋರ್ಸಿನ ಅರ್ಹ ವಿದ್ಯಾರ್ಥಿಗಳಿಂದ ಪ್ರವೇಶಕ್ಕಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಸೆಪ್ಟೆಂಬರ್ ೪ ಕೊನೆಯ ದಿನವಾಗಿದೆ. ಅರ್ಜಿ ಸಲ್ಲಿಸಬೇಕಾದ ವೆಬ್ಸೈಟ್ ವಿಳಾಸ: hಣಣಠಿs://shಠಿ.ಞಚಿಡಿಟಿಚಿಣಚಿಞಚಿ.gov.iಟಿ/ bಛಿತಿಜ ವಿದ್ಯಾರ್ಥಿಯ ಪೋಷಕರ ವಾರ್ಷಿಕ ಆದಾಯ ಮಿತಿ:- ಪ್ರವರ್ಗ-೧, ಎಸ್.ಸಿ ಮತ್ತು ಎಸ್.ಟಿ. ರೂ. ೨.೫೦ ಲಕ್ಷ, ಪ್ರವರ್ಗ-೨ಎ,೨ಬಿ,೩ಎ,೩ಬಿ, ಇತರೆ ಹಿಂದುಳಿದ ವರ್ಗ ರೂ. ೧ ಲಕ್ಷ ಆಗಿರುತ್ತದೆ.
ತಾಲೂಕುವಾರು ವಿದ್ಯಾರ್ಥಿ ನಿಲಯಗಳ ವಿವರ, ವಿದ್ಯಾರ್ಥಿ ನಿಲಯದ ಪ್ರವೇಶಕ್ಕೆ ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳ ವಿವರ ಮತ್ತು ಸರ್ಕಾರದ ಆದೇಶಕ್ಕಾಗಿ ಇಲಾಖೆಯ ವೆಬ್ಸೈಟ್ hಣಣಠಿs://.bಛಿತಿಜ.ಞಚಿಡಿಟಿಚಿಣಚಿಞಚಿ.gov.iಟಿ/ ಅನ್ನು ನೋಡಬಹುದು. ಅರ್ಜಿ ಸಲ್ಲಿಸಲು ತಾಂತ್ರಿಕ ತೊಂದರೆಗಳಾದಲ್ಲಿ bಛಿತಿಜ.heಟಠಿಟiಟಿe@gmಚಿiಟ.ಛಿom ಈ ಇ-ಮೇಲ್ ಮುಖಾಂತರ ಅಗತ್ಯ ದಾಖಲೆಗಳೊಂದಿಗೆ ಸಂಪರ್ಕಿಸುವುದು.
ಹೆಚ್ಚಿನ ಮಾಹಿತಿಗೆ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಮೊಬೈಲ್ ಸಂಖ್ಯೆ ಮಡಿಕೇರಿ ತಾಲೂಕು ಮೊ.ಸಂಖ್ಯೆ: ೮೭೬೨೪೭೬೭೯೦, ವೀರಾಜಪೇಟೆ ತಾಲೂಕು ಮೊ.ಸಂಖ್ಯೆ:೯೪೪೮೨೦೫೯೧೯ ಹಾಗೂ ಸೋಮವಾರಪೇಟೆ ತಾಲೂಕು ಮೊ.ಸಂಖ್ಯೆ: ೯೪೮೧೭೭೨೧೪೩ ನ್ನು ಸಂಪರ್ಕಿಸಿ ಕಚೇರಿ ವೇಳೆಯಲ್ಲಿ ಮಾಹಿತಿ ಪಡೆಯಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಹೊನ್ನೆಗೌಡ ಅವರು ತಿಳಿಸಿದ್ದಾರೆ.