ಗೋಣಿಕೊಪ್ಪ, ಆ. ೨೨: ೭೮ನೇ ಸ್ವಾತಂತ್ರö್ಯ ದಿನಾಚರಣೆ ಅಂಗವಾಗಿ ಗೋಣಿಕೊಪ್ಪದ ಲಯನ್ಸ್ ಶಾಲೆಯಲ್ಲಿ ಪ್ರಾಥಮಿಕ ವಿಭಾಗದಿಂದ ಹಿಡಿದು ಪದವಿಪೂರ್ವ ವಿದ್ಯಾರ್ಥಿಗಳಿಗೆ ತಾಲೂಕು ಮಟ್ಟದ ದೇಶಭಕ್ತಿ ಗೀತೆ ಮತ್ತು ಭಾಷಣ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು. ವಿವಿಧ ಸ್ಪರ್ಧೆಗಳಲ್ಲಿ ಗೋಣಿಕೊಪ್ಪ ಕಾಪ್ಸ್ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ ಅತಿ ಹೆಚ್ಚಿನ ಬಹುಮಾನವನ್ನು ಪಡೆದುಕೊಂಡು ಸಮಗ್ರ ಪ್ರಶಸ್ತಿಯನ್ನು ತನ್ನ ಮುಡಿಗೇರಿಸಿಕೊಂಡಿತು.