ಮಡಿಕೇರಿ, ಆ. ೨೨: ಕೊಡಗು ಜಿಲ್ಲಾ ಪಂಚಾಯತ್, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಸಹಯೋಗದಲ್ಲಿ, ಜಲ ಜೀವನ್ ಮಿಷನ್ ಹಾಗೂ ಸ್ವಚ್ಛ ಭಾರತ್ ಮಿಷನ್ (ಗ್ರಾಮೀಣ) ಯೋಜನೆಗಳ ಕುರಿತು ಗ್ರಾಮೀಣ ಪ್ರದೇಶದ ಜನರಲ್ಲಿ ಜಾಗೃತಿ ಮೂಡಿಸಲು ಆಟೋವಾಹಿನಿ ಮೂಲಕ ಪ್ರಚಾರ ಕಾರ್ಯ ಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ಈ ಕಾರ್ಯಕ್ರಮವನ್ನು ಉದ್ಭವ್ ಗ್ರಾಮೀಣಾಭಿವೃದ್ಧಿ ಮತ್ತು ಸೇವಾ ಸಂಸ್ಥೆ, ಬೆಂಗಳೂರು, ಜಲ ಜೀವನ್ ಮಿಷನ್ ಯೋಜನೆಯ ಅನುಷ್ಠಾನ ಬೆಂಬಲ ಸಂಪನ್ಮೂಲ ಸಂಸ್ಥೆಯಾಗಿ ಆಯೋಜಿಸಿದ್ದು, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಆನಂದ್ ಪ್ರಕಾಶ್ ಮೀನಾ ಅವರು ಜಿಲ್ಲಾ ಪಂಚಾಯತ್ ಆವರಣದಲ್ಲಿ ಹಸಿರು ನಿಶಾನೆ ತೋರಿ ಪ್ರಚಾರ ವಾಹನಕ್ಕೆ ಚಾಲನೆ ನೀಡಿದರು.

ಈ ಕಾರ್ಯಕ್ರಮವು ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ ಯಶಸ್ವಿಯಾಗಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಪ್ರಚಾರ ಕಾರ್ಯವನ್ನು ಮುಂದು ವರಿಸುತ್ತಿದ್ದು, ಗ್ರಾಮೀಣ ಜನಸಾಮಾನ್ಯರಲ್ಲಿ ಕುಡಿಯುವ ನೀರಿನ ಸುರಕ್ಷತೆ ಹಾಗೂ ನೈರ್ಮಲ್ಯದ ಬಗ್ಗೆ ಅರಿವು ಹೆಚ್ಚಿಸಲು ಗಮನಹರಿಸಿದೆ.