ಸೋಮವಾರಪೇಟೆ,ಆ.೨೩: ಯಂಗ್ ಇಂಡಿಯನ್ ಫಾಮರ‍್ಸ್ ಅಸೋಸಿಯೇಷನ್ ವತಿಯಿಂದ ತಾ. ೨೪ರಂದು (ಇಂದು) ಸಮೀಪದ ಗೌಡಳ್ಳಿ ಗ್ರಾಮದಲ್ಲಿ ೬ನೇ ವರ್ಷದ ನಾಟಿ ಕಾರ್ಯಕ್ರಮ ಹಾಗೂ ಕೆಸರುಗದ್ದೆ ಕ್ರೀಡಾಕೂಟ ಆಯೋಜಿಸಲಾಗಿದೆ ಎಂದು ಅಸೋಸಿಯೇಷನ್ ಕಾರ್ಯದರ್ಶಿ ಸಜನ್ ಮಂದಣ್ಣ ತಿಳಿಸಿದ್ದಾರೆ.

ಗೌಡಳ್ಳಿ ಗ್ರಾಮದ ಜಿ.ಎಸ್. ರಾಜು ಅವರ ಗದ್ದೆಯಲ್ಲಿ ಬೆಳಿಗ್ಗೆ ೧೦ ಗಂಟೆಗೆ ಕ್ರೀಡಾಕೂಟ ಆರಂಭಗೊಳ್ಳಲಿದೆ. ಹಗ್ಗಜಗ್ಗಾಟ, ಮಕ್ಕಳಿಗೆ ಆಟೋಟ, ಮಡಿಕೆ ಒಡೆಯುವ ಸ್ಪರ್ಧೆಗಳು ನಡೆಯಲಿವೆ. ೧೨ ಗಂಟೆಗೆ ನಾಟಿ ಕಾರ್ಯಕ್ರಮ ಆರಂಭಗೊಳ್ಳಲಿದೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಶ್ರೀನಿಧಿ ಲಿಂಗಪ್ಪ ವಹಿಸಲಿದ್ದಾರೆ ಎಂದರು.

ಕಾರ್ಯಕ್ರಮದಲ್ಲಿ ಶಾಸಕ ಮಂತರ್ ಗೌಡ, ಮಾಜಿ ಸಚಿವ ಅಪ್ಪಚ್ಚು ರಂಜನ್, ಒಕ್ಕಲಿಗರ ಸಂಘದ ರಾಜ್ಯ ನಿರ್ದೇಶಕ ಹರಪಳ್ಳಿ ರವೀಂದ್ರ, ಗೌಡಳ್ಳಿ ಗ್ರಾ.ಪಂ. ಅಧ್ಯಕ್ಷ ನಾಗರಾಜು, ಸಹಾಯಕ ಕೃಷಿ ನಿರ್ದೇಶಕ ವೀರಣ್ಣ, ಪ್ರಗತಿ ಪರ ಕೃಷಿಕ ಬಿ.ಪಿ. ರವಿಶಂಕರ್, ತಾಲೂಕು ಅಭಿವೃದ್ಧಿ ಹೋರಾಟ ಸಮಿತಿ ಅಧ್ಯಕ್ಷ ಅರುಣ್ ಕೊತ್ನಳ್ಳಿ, ಮಲ್ನಾಡ್ ಯೂತ್ ಅಸೋಸಿಯೇಷನ್ ಅಧ್ಯಕ್ಷ ಯಶ್ವಂತ್ ಬೆಳ್ಳಿಗೌಡ, ಗ್ರಾ.ಪಂ. ಮಾಜೀ ಅಧ್ಯಕ್ಷ ನವೀನ್ ಅಜ್ಜಳ್ಳಿ, ಉದ್ಯಮಿ ಗಿರೀಶ್ ಮಲ್ಲಪ್ಪ, ಸಹಕಾರ ಸಂಘದ ಅಧ್ಯಕ್ಷ ಸುರೇಶ್ ಸೇರಿದಂತೆ ಇತರರು ಭಾಗವಹಿಸಲಿದ್ದಾರೆ ಎಂದು ಸಜನ್ ಮಂದಣ್ಣ ಮಾಹಿತಿ ನೀಡಿದ್ದಾರೆ.