ಉಕ್ರೇನ್-ಭಾರತ ನಡುವೆ ೪ ಒಪ್ಪಂದಗಳಿಗೆ ಸಹಿ

ಕೀವ್, ಆ. ೨೩: ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝಲೆನ್‌ಸ್ಕಿ ಅವರೊಂದಿಗೆ ಭಾರತ ಪ್ರಧಾನಿ ಅವರು ಶುಕ್ರವಾರ ಸಭೆ ನಡೆಸಿದರು. ಈ ವೇಳೆ ಭಾರತ ಮತ್ತು ಉಕ್ರೇನ್ ನಾಲ್ಕು ಒಪ್ಪಂದಗಳಿಗೆ ಸಹಿ ಹಾಕಿವೆ. ಈ ಒಪ್ಪಂದಗಳು ಕೃಷಿ, ಆಹಾರ ಉದ್ಯಮ, ಔಷಧ ಮತ್ತು ಸಂಸ್ಕೃತಿ ಹಾಗೂ ಮಾನವೀಯ ನೆರವು ಕ್ಷೇತ್ರಗಳಲ್ಲಿ ಸಹಕಾರವನ್ನು ಒದಗಿಸುತ್ತವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸದ್ಯ ನಡೆಯುತ್ತಿರುವ ಸಂಘರ್ಷದ ಕುರಿತು ಚರ್ಚಿಸಿದೆವು. ಶಾಂತಿ ಕಾಪಾಡುವುದೇ ಈ ಸಭೆಯ ಪ್ರಮುಖ ನಿರ್ಧಾರವಾಗಿತ್ತು. ಮಾನವೀಯತೆಯ ಒಳಿತಿಗಾಗಿ ಸಂಘರ್ಷವನ್ನು ಶಾಂತಿಯುತವಾಗಿ ಬಗೆಹರಿಸಬೇಕಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಕೀವ್‌ನಲ್ಲಿ ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝಲೆನ್‌ಸ್ಕಿ ಅವರೊಂದಿಗೆ ಫಲಪ್ರದ ಚರ್ಚೆ ನಡೆಸಿದ್ದೇನೆ. ಉಕ್ರೇನ್ ಜೊತೆ ಆರ್ಥಿಕ ಸಂಬAಧ ಗಾಢವಾಗಿಸಲು ಭಾರತ ಉತ್ಸುಕವಾಗಿದೆ. ಕೃಷಿ, ತಂತ್ರಜ್ಞಾನ, ಫಾರ್ಮಾ ಮತ್ತು ಇತರೆ ಕ್ಷೇತ್ರಗಳಲ್ಲಿ ಸಹಕಾರವನ್ನು ಉತ್ತೇಜಿಸಲು ಮಾತುಕತೆ ನಡೆಸಿದ್ದೇವೆ. ಸಾಂಸ್ಕೃತಿಕ ಕ್ಷೇತ್ರದಲ್ಲೂ ಸಂಬAಧ ಗಟ್ಟಿ ಮಾಡಲು ಚರ್ಚೆ ನಡೆಸಿದ್ದೇವೆ ಎಂದು ಪ್ರಧಾನಿ ಮೋದಿ ತಿಳಿಸಿದ್ದಾರೆ.

ಸಂಸದ ಶ್ರೇಯಸ್‌ಗೆ ನೋಟಿಸ್

ಬೆಂಗಳೂರು, ಆ. ೨೩: ಹಾಸನ ಲೋಕಸಭಾ ಕ್ಷೇತ್ರದ ಸಂಸದ ಶ್ರೇಯಸ್ ಎಂ.ಪಟೇಲ್ ಆಯ್ಕೆ ಅಸಿಂಧು ಕೋರಿ ಹೈಕೋರ್ಟ್ ವಕೀಲ ಜಿ.ದೇವರಾಜೇಗೌಡ ಪುತ್ರ ಡಿ. ಚರಣ್ ಗೌಡ ಸಲ್ಲಿಸಿರುವ ಅರ್ಜಿಗೆ ಸಂಬAಧಿಸಿದAತೆ ಶ್ರೇಯಸ್ ಪಟೇಲ್‌ಗೆ ನೋಟಿಸ್ ಜಾರಿಗೊಳಿಸಲು ಹೈಕೋರ್ಟ್ ಆದೇಶಿಸಿದೆ. ಈ ಕುರಿತಾದ ಚುನಾವಣಾ ತಕರಾರು ಅರ್ಜಿಯನ್ನು ನ್ಯಾಯಮೂರ್ತಿ ಅಶೋಕ್ ಎಸ್. ಕಿಣಗಿ ಅವರಿದ್ದ ಏಕಸದಸ್ಯ ನ್ಯಾಯಪೀಠ ಶುಕ್ರವಾರ ವಿಚಾರಣೆ ನಡೆಸಿತು. ಪ್ರತಿವಾದಿ ಸಂಸದ ಶ್ರೇಯಸ್ ಎಂ. ಪಟೇಲ್ ಅವರಿಗೆ ನೋಟಿಸ್ ಜಾರಿಗೊಳಿಸಲು ಆದೇಶಿಸಿ ವಿಚಾರಣೆಯನ್ನು ಸೆಪ್ಟೆಂಬರ್ ೩೦ಕ್ಕೆ ಮುಂದೂಡಿತು. ಶ್ರೇಯಸ್ ಪಟೇಲ್ ಚುನಾವಣೆ ವೇಳೆ ಸಲ್ಲಿಸಿರುವ ಪ್ರಮಾಣ ಪತ್ರದಲ್ಲಿ ತಮ್ಮ ಆಸ್ತಿ ವಿವರಗಳನ್ನು ಪ್ರಾಮಾಣಿಕವಾಗಿ ನಮೂದಿಸಿಲ್ಲ. ಐದು ವರ್ಷಗಳ ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಸಿಲ್ಲ. ಅವರ ನಾಮಪತ್ರ ಕ್ರಮಬದ್ಧವಾಗಿಲ್ಲ. ಚುನಾವಣಾ ವೆಚ್ಚದ ಬಗ್ಗೆ ತಪ್ಪು ಮಾಹಿತಿ ನೀಡಿದ್ದಾರೆ. ಹಾಗಾಗಿ, ಅವರ ಆಯ್ಕೆ ರದ್ದುಗೊಳಿಸಬೇಕು ಎಂದು ಅರ್ಜಿದಾರರು ಕೋರಿದ್ದಾರೆ.

ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರಿಗೆ ಮತ್ತೊಂದು ದೂರು

ಬೆಂಗಳೂರು, ಆ. ೨೩: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಭೂ ಹಗರಣದ ಆರೋಪ ಎದುರಿಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಮತ್ತೊಂದು ಆರೋಪ ತಳಕು ಹಾಕಿಕೊಂಡಿದೆ. ಜಿಲ್ಲಾ ಮತ್ತು ತಾಲೂಕು ಪಂಚಾಯಿತಿಯಲ್ಲಿ ಬಾಕಿ ಉಳಿದಿರುವ ೧,೪೯೪ ಕೋಟಿ ರೂ. ಹಣ ದುರುಪಯೋಗದ ಬಗ್ಗೆ ವಿಧಾನಪರಿಷತ್ ಬಿಜೆಪಿ ಸದಸ್ಯ ಅರುಣ್ ರಾಜ್ಯಪಾಲ ತಾವರಚಂದ್ ಗೆಹ್ಲೋಟ್ ಅವರಿಗೆ ದೂರು ನೀಡಿದ್ದಾರೆ. ಹಣಕಾಸು ಅವ್ಯವಹಾರ, ರಾಜ್ಯದ ಕ್ರೋಢೀಕೃತ ನಿಧಿ ದುರ್ಬಳಕೆ ಹಾಗೂ ಸಾಂವಿಧಾನಿಕ ಬಾಧ್ಯತೆಯ ಉಲ್ಲಂಘನೆ ಕುರಿತು ತನಿಖೆ ನಡೆಸುವಂತೆ ಕೋರಿದ್ದಾರೆ. ಅಲ್ಲದೆ ಅಸಂವಿಧಾನಿಕ ಹಣಕಾಸು ವ್ಯವಹಾರ ನಡೆಸಿರುವ ಸಿಎಂ ಸಿದ್ದರಾಮಯ್ಯ ಅವರನ್ನು ವಜಾಗೊಳಿಸಬೇಕು ಎಂದು ಒತ್ತಾಯಿಸಿದರು. ೨೦೨೩ರ ಬೆಳಗಾವಿ ಅಧಿವೇಶನದಲ್ಲಿ ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿಗಳ ನಿಧಿಯಲ್ಲಿ ವ್ಯಯವಾಗದೆ ಬಾಕಿ ಉಳಿದ ಹಣಕ್ಕೆ ಸಂಬAಧಿಸಿದAತೆ ಪ್ರಶ್ನೆ ಮಾಡಲಾಗಿತ್ತು. ಅದಕ್ಕೆ ಸಿಎಂ ಸಿದ್ದರಾಮಯ್ಯ ಅವರು, ಬಳಕೆಯಾಗದ ಜಿಲ್ಲಾ ಪಂಚಾಯಿತಿಗಳ ೪೫೯ ಕೋಟಿ ಹಾಗೂ ತಾಲೂಕು ಪಂಚಾಯಿತಿಗಳ ೧,೪೯೪ ಕೋಟಿ ರೂ.ಗಳನ್ನು ಸಂಚಿತ ನಿಧಿಗೆ ಜಮಾ ಮಾಡಲಾಗಿದೆ ಎಂದು ಲಿಖಿತ ಉತ್ತರ ನೀಡಿದ್ದರು. ಆದರೆ, ಇದನ್ನು ಪರಿಶೀಲಿಸಿದ ಬಳಿಕ ಮುಖ್ಯಮಂತ್ರಿಯವರು ನೀಡಿದ ಉತ್ತರ ಸುಳ್ಳು ಎಂದು ಸಾಬೀತಾಗಿದೆ ಎಂದು ಅರುಣ್ ಹೇಳಿದ್ದಾರೆ.

ನೇಪಾಳದ ನದಿಗೆ ಉರುಳಿದ ಬಸ್ - ೧೪ ಭಾರತೀಯರ ಸಾವು

ಕಠ್ಮಂಡು, ಆ. ೨೩: ಭಾರತ ಮೂಲದ ಪ್ರವಾಸಿ ಬಸ್ ಶುಕ್ರವಾರ ನೇಪಾಳದ ತನಹುನ್ ಜಿಲ್ಲೆಯ ಆಯಿನಾ ಪಹಾರದ ಹೆದ್ದಾರಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ, ೧೫೦ ಅಡಿ ಆಳದ ಮಾರ್ಸ್ಯಾಂಗಡಿ ನದಿಗೆ ಉರುಳಿದ್ದು, ಒಟ್ಟು ೧೪ ಮಂದಿ ಮೃತಪಟ್ಟಿದ್ದಾರೆ. ಬಸ್‌ನಲ್ಲಿದ್ದ ಇತರ ೧೬ ಮಂದಿ ಗಾಯಗೊಂಡಿದ್ದಾರೆ. ಬಸ್‌ನಲ್ಲಿದ್ದವರು ಪೋಖರಾ ಪಟ್ಟಣದ ರೆಸಾರ್ಟ್ನಿಂದ ರಾಜಧಾನಿ ಕಂಡುವಿಗೆ ತೆರಳುತ್ತಿದ್ದರು. ಬಸ್‌ನಲ್ಲಿ ಚಾಲಕ, ಸಹ ಚಾಲಕ ಸೇರಿ ೪೩ ಜನರಿದ್ದರು. ಈ ಬಸ್ ಉತ್ತರ ಪ್ರದೇಶದಲ್ಲಿ ನೋಂದಣಿ ಆಗಿದೆ. ಭಾರತೀಯ ರಾಯಭಾರ ಕಚೇರಿ ಈ ಬಗ್ಗೆ ‘ಎಕ್ಸ್'ನಲ್ಲಿ ಮಾಹಿತಿ ಹಂಚಿಕೊAಡಿದೆ. ಪರಿಹಾರ ಮತ್ತು ರಕ್ಷಣಾ ಕಾರ್ಯ ಕುರಿತಂತೆ ಸ್ಥಳೀಯ ಅಧಿಕಾರಿಗಳ ಜೊತೆಗೆ ಸಂಪರ್ಕದಲ್ಲಿ ಇರುವುದಾಗಿ ತಿಳಿಸಿದೆ. ಪೊಲೀಸ್ ಅಧಿಕಾರಿ ಶೈಲೇಂದ್ರ ಥಾಪಾ ಅವರು, ಅಪಘಾತ ಸ್ಥಳದಿಂದ ೧೪ ಶವ ಹೊರತೆಗೆದಿದ್ದು, ರಕ್ಷಣೆಗೆ ಸೇನೆ ಹೆಲಿಕಾಪ್ಟರ್ ನೆರವು ಪಡೆಯಲಾಗಿದೆ ಎಂದರು. ಹಿಮಾಲಯ ಪರ್ವತ ಶ್ರೇಣಿ ವ್ಯಾಪ್ತಿಯ ನೇಪಾಳದಲ್ಲಿ ಸಾಮಾನ್ಯವಾಗಿ ನದಿಗಳಲ್ಲಿ ನೀರು ಹರಿವಿನ ವೇಗ ಹೆಚ್ಚಿರುತ್ತದೆ. ಜೂನ್-ಸೆಪ್ಟೆಂಬರ್ ಮಳೆಗಾಲವಾಗಿದ್ದು, ಈ ಅವಧಿಯಲ್ಲಿ ನೀರಿನ ಹರಿವು ಸಾಮಾನ್ಯಕ್ಕಿಂತಲೂ ಹೆಚ್ಚಿರುತ್ತದೆ. ಅಪಘಾತ ಸ್ಥಳದಲ್ಲಿದ್ದು, ಪರಿಹಾರ ಕಾರ್ಯಗಳಿಗೆ ನೆರವಾಗಲು ಉತ್ತರ ಪ್ರದೇಶ ಸರ್ಕಾರವು ಉಪ ವಿಭಾಗೀಯ ಅಧಿಕಾರಿ (ಎಸ್‌ಡಿಎಂ) ದರ್ಜೆಯ ಒಬ್ಬರನ್ನು ನಿಯೋಜಿಸಿದೆ. ಉತ್ತರ ಪ್ರದೇಶದ ಪರಿಹಾರ ಆಯುಕ್ತರು ಈ ಕುರಿತು ಹೇಳಿಕೆ ನೀಡಿದ್ದು, ಎಸ್‌ಡಿಎಂ ಮಹಾರಾಜ್ ಗಂಜ್ ಅವರನ್ನು ನೆರವು ಕಾರ್ಯಕ್ಕೆ ನಿಯೋಜಿಸಲಾಗಿದೆ. ವಿದೇಶಾಂಗ ಸಚಿವಾಲಯವು ನೇಪಾಳದ ಸ್ಥಳೀಯ ಅಧಿಕಾರಿಗಳ ಜೊತೆ ಸಂಪರ್ಕದಲ್ಲಿದೆ ಎಂದು ತಿಳಿಸಿದ್ದಾರೆ.