ಮಡಿಕೇರಿ, ಆ. ೨೩: ಭಾಗಮಂಡಲ ಪೊಲೀಸ್ ಠಾಣಾ ವ್ಯಾಪ್ತಿಯ ಚೇರಂಬಾಣೆ ಬಳಿಯ ತೊಟ್ಲುಕುಂಞÂ ಎಂಬಲ್ಲಿ ಒಂಟಿಯಾಗಿದ್ದ ವೃದ್ಧೆ ಮಹಿಳೆಯ ಮನೆಗೆ ನುಗ್ಗಿ ಚಿನ್ನಾಭರಣ ದೋಚಿದ್ದ ಆರೋಪಿಯನ್ನು ಘಟನೆ ನಡೆದ ಕೇವಲ ಆರು ಗಂಟೆ ಅವಧಿಯೊಳಗಾಗಿ ಪೊಲೀಸರು ಬಂದಿಸಿದ್ದಾರೆ.

ಮಡಿಕೇರಿ ನಗರ ಪೊಲೀಸ್ ವೃತ್ತ ನಿರೀಕ್ಷಕರ ಕಚೇರಿಯಲ್ಲಿ ಏರ್ಪಡಿಸಿದ್ದ ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್ ಅವರು; ತಾ. ೨೨ ರಂದು ಗೋಪಾಲಕೃಷ್ಣ ಎಂಬವರ ತಾಯಿ ಪುಷ್ಪಾ (೭೫) ಎಂಬವರು ಒಬ್ಬರೇ ಇದ್ದ ಸಂದರ್ಭದಲ್ಲಿ ನೆರೆಮನೆ ನಿವಾಸಿ ಸುದರ್ಶನ್ (೨೪) ಎಂಬಾತ ಮನೆಗೆ ನುಗ್ಗಿ ಚಾಕು ತೋರಿಸಿ, ಹೆದರಿಸಿ, ಆಕೆಯ ಮೇಲೆ ಹಲ್ಲೆ ಮಾಡಿ ಕುತ್ತಿಗೆಯಲ್ಲಿದ್ದ ಚಿನ್ನದ ಸರ ಹಾಗೂ ಕಪಾಟಿನಲ್ಲಿದ್ದ ಚಿನ್ನಾಭರಗಳನ್ನು ದರೋಡೆ ಮಾಡಿದ್ದ. ಈ ಬಗ್ಗೆ ದೂರು ದಾಖಲಿಸಿಕೊಂಡು ಆರೊಪಿಯನ್ನು ಪತ್ತೆಹಚ್ಚಲು ಡಿವೈಎಸ್‌ಪಿ ಮಹೇಶ್‌ಕುಮಾರ್, ಗ್ರಾಮಾಂತರ ವಿಭಾಗ

ಮನೆಗೆ ನುಗ್ಗಿ ಚಿನ್ನಾಭರಣ ಕಳವು

(ಮೊದಲ ಪುಟದಿಂದ) ವೃತ್ತ ನಿರೀಕ್ಷಕ ಅನೂಪ್ ಮಾದಪ್ಪ, ಭಾಗಮಂಡಲ ಠಾಣಾಧಿಕಾರಿ ಶೋಭಾ ಲಮಾಣಿ, ನಾಪೋಕ್ಲು ಠಾಣಾಧಿಕಾರಿ ಮಂಜುನಾಥ್ ಅವರುಗಳನ್ನೊಳಗೊಂಡ ತನಿಖಾ ತಂಡವನ್ನು ರಚಿಸಲಾಗಿತ್ತು. ಘಟನೆ ಬೆಳಿಗ್ಗೆ ೧೧.೩೦ರ ವೇಳೆಗೆ ನಡೆದಿದ್ದು, ಕಾರ್ಯಾಚರಣೆ ಕೈಗೊಂಡ ತಂಡವು ಸಂಜೆ ೫ ಗಂಟೆ ವೇಳೆಗಾಗಲೇ ಆರೋಪಿಯನ್ನು ಬಂದಿಸುವಲ್ಲಿ ಯಶಸ್ವಿಯಾಗಿದೆ ಎಂದು ತಿಳಿಸಿದರು. ಬಂದಿತ ಆರೋಪಿಯಿಂದ ೬೦.೫೩೦ ಮಿಲಿ ಚಿನ್ನಾಭರಣ ರೂ. ೬೨೦ ನಗದು ಹಾಗೂ ಕೃತ್ಯಕ್ಕೆ ಬಳಸಿದ್ದ ಚಾಕೂವನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿ ಈ ಹಿಂದೆ ಕೂಡ ಅಪರಾಧ ಪ್ರಕರಣದಲ್ಲಿ ಭಾಗಿಯಾಗಿರುವುದಾಗಿ ಎಸ್‌ಪಿ ತಿಳಿಸಿದರು.