ಮಡಿಕೇರಿ, ಆ. ೨೩: ಮಡಿಕೇರಿ ನಗರದ ಶಾಂತಿನಿಕೇತನ ಯುವಕ ಸಂಘದ ನೂತನ ಅಧ್ಯಕ್ಷರಾಗಿ ಕೆ.ಹೆಚ್.ಚೇತನ್ ಆಯ್ಕೆಯಾಗಿದ್ದಾರೆ. ೪೬ನೇ ವರ್ಷದ ಗಣೇಶೋತ್ಸವವನ್ನು ಅದ್ದೂರಿಯಾಗಿ ನಡೆಸಲು ಸಂಘ ನಿರ್ಧರಿಸಿದೆ.

ನಗರದÀಲ್ಲಿ ನಡೆದ ಸಂಘದ ಮಹಾಸಭೆಯಲ್ಲಿ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಕಾರ್ಯದರ್ಶಿಯಾಗಿ ಯೋಗೇಶ್ ಕುಮಾರ್, ಸಹಕಾರ್ಯದರ್ಶಿಯಾಗಿ ತಿಮ್ಮಯ್ಯ, ಪ್ರಧಾನ ಕಾರ್ಯದರ್ಶಿಗಳಾಗಿ ಸತೀಶ್ ರೈ, ಲೋಕೇಶ್ ರೈ, ಖಜಾಂಚಿಯಾಗಿ ಪ್ರಮೋದ್ ರಾಜ, ಸಹ ಖಜಾಂಚಿಯಾಗಿ ಪ್ರದೀಪ್ ಕುಟ್ಟಪ್ಪ ಹಾಗೂ ಇತರ ಉಪ ಸಮಿತಿಗಳಿಗೆ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.

೪೬ನೇ ವರ್ಷದ ಗಣೇಶೋತ್ಸವವನ್ನು ೧೫ ದಿನಗಳ ಕಾಲ ಗಣಪತಿ ಮೂರ್ತಿಯನ್ನು ಪ್ರತಿಷ್ಠಾಪಿಸಿ ವಿಜೃಂಭಣೆಯಿAದ ಆಚರಿಸಲು ಸಭೆಯಲ್ಲಿ ನಿರ್ಧರಿಸಲಾಯಿತು. ಗಣೇಶೋತ್ಸವ ಪ್ರಯುಕ್ತ ಪ್ರತಿದಿನ ರಾತ್ರಿ ೮ ಗಂಟೆಗೆ ಮಹಾಪೂಜೆಯ ನಂತರ ಭಜನೆ ಕಾರ್ಯಕ್ರಮ ಹಾಗೂ ಸೆ. ೧೫ ರಂದು ಸಾರ್ವಜನಿಕರಿಗಾಗಿ ಕ್ರೀಡಾಕೂಟವನ್ನು ಏರ್ಪಡಿಸಲಾಗಿದೆ.

ಗಣೇಶೋತ್ಸವ : ಸೆ.೭ ರಂದು ಬೆಳಿಗ್ಗೆ ೧೧ ಗಂಟೆಗೆ ಶಾಂತಿನಿಕೇತನ ಬಡಾವಣೆಯಲ್ಲಿ ಗಣಪತಿ ಹೋಮದೊಂದಿಗೆ ಶ್ರೀ ಮಹಾಗಣಪತಿಯ ಪ್ರತಿಷ್ಠಾಪನೆ ಮತ್ತು ಮಹಾಪೂಜೆ ನಡೆಯಲಿದೆ. ಸೆ.೧೯ ರಂದು ಸಂಜೆ ೭ ಗಂಟೆಗೆ ಸಾಮೂಹಿಕ ರಂಗಪೂಜೆ, ಸೆ.೨೧ ರಂದು ಮಹಾಪೂಜೆಯ ನಂತರ ನಗರದಲ್ಲಿ ಶ್ರೀ ಮಹಾಗಣಪತಿ ಮೂರ್ತಿಯ ಶೋಭಾಯಾತ್ರೆ ಸಾಗಲಿದೆ. ಈ ಬಾರಿ "ಲೋಕ ಕಲ್ಯಾಣಕ್ಕಾಗಿ ಮಯೂರೇಶನಿಂದ ಸಿಂಧು ದೈತ್ಯ ರಾಜನ ಸಂಹಾರ" ಎಂಬ ಕಥಾವಸ್ತುವನ್ನು ಅಳವಡಿಸಿಕೊಳ್ಳಲಾಗುತ್ತಿದೆ.