ಮಡಿಕೇರಿ, ಆ. ೨೩ : ಮಡಿಕೇರಿ ಕೊಡವ ಸಮಾಜ ಕಟ್ಟಡದಲ್ಲಿರುವ ಕೊಡವ ಸೌಹಾರ್ದ ಪತ್ತಿನ ಸಹಕಾರಿ ಸಂಘಕ್ಕೆ ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ಮೂಲಕ ಉತ್ತಮ ಸೌಹಾರ್ದ ಸಹಕಾರಿ ಪ್ರಶಸ್ತಿ ಲಭ್ಯವಾಗಿದೆ.
ಬೆಂಗಳೂರಿನಲ್ಲಿ ಶುಕ್ರವಾರ ಕರ್ನಾಟಕ ರಾಜ್ಯ ಸೌಹಾರ್ದ ಸಂಯಕ್ತ ಸಹಕಾರಿಯ ೨೩ನೇಯ ವಾರ್ಷಿಕ ಮಹಾಸಭೆ ನಡೆದಿದ್ದು, ಈ ಸಂದರ್ಭ ಕೊಡಗು ಸೌಹಾರ್ದ ಪತ್ತಿನ ಸಹಕಾರಿ ಸಂಘದ ಪದಾಧಿಕಾರಿಗಳು ಪ್ರಶಸ್ತಿ ಸ್ವೀಕರಿಸಿದರು.
ಸಂಸ್ಥೆಯ ಅಧ್ಯಕ್ಷ ಮಂಡುವAಡ ಪಿ. ಮುತ್ತಪ್ಪ, ಪದಾಧಿಕಾರಿಗಳಾದ ಚೋವಂಡ ಡಿ. ಕಾಳಪ್ಪ, ಅಂಜಪರವAಡ ಉಷಾ ಉತ್ತಯ್ಯ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪಿ.ಸಿ. ನೀಮಾ ಪಾಲ್ಗೊಂಡಿದ್ದರು.
ಸAಸ್ಥೆಯ ವಾರ್ಷಿಕ ಮಹಾಸಭೆ ತಾ. ೨೪ರಂದು (ಇಂದು) ಬೆಳಿಗ್ಗೆ ೧೦.೩೦ಕ್ಕೆ ಮಡಿಕೇರಿ ಕೊಡವ ಸಮಾಜ ಸಭಾಂಗಣದಲ್ಲಿ ನಡೆಯಲಿದೆ.