ಮಡಿಕೇರಿ, ಆ. ೨೩: ಮಡಿಕೇರಿ ನಗರದ ನಾಲ್ಕು ಶಕ್ತಿ ದೇವತೆಗಳಲ್ಲೊಂದಾದ, ಐತಿಹಾಸಿಕ ಹಿನ್ನೆಲೆಯಿರುವ ಶ್ರೀ ಕೋಟೆ ಮಾರಿಯಮ್ಮ ದೇವಾಯದಲ್ಲಿ ನಡೆದ ಕಳವು ಪ್ರಕರಣಕ್ಕೆ ಸಂಬAಧಿಸಿದAತೆ ಪೊಲೀಸರು ಈರ್ವರು ಅಸ್ಸಾಂ ಮೂಲದ ಆರೋಪಿಗಳನ್ನು ಬಂದಿಸಿದ್ದಾರೆ.

ಮಡಿಕೇರಿ ನಗರ ವೃತ್ತ ನಿರೀಕ್ಷಕರ ಕಚೇರಿಯಲ್ಲಿ ಏರ್ಪಡಿಸಿದ್ದ ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್ ಈ ಬಗ್ಗೆ ಮಾಹಿತಿ ನೀಡಿದರು. ಕಳೆದ ತಾ. ೧೬ರಂದು ಮಧ್ಯರಾತ್ರಿ ಅಪರಿಚಿತ ವ್ಯಕ್ತಿಗಳು ಶ್ರೀ ಕೋಟೆ ಮಾರಿಯಮ್ಮ ದೇವಾಲಯದ ಬೀಗ ಮುರಿದು ಭಂಡಾರದ ಹುಂಡಿಗಳನ್ನು ಒಡೆದು ರೂ. ಎರಡೂವರೆ ಲಕ್ಷ ನಗದು, ದೇವಿಗೆ ಅಳವಡಿಸಲಾಗಿದ್ದ ೬,೦೦೦ ಬೆಲೆ ಬಾಳುವ ಚಿನ್ನ ಹಾಗೂ ಬೆಳ್ಳಿಯ ಆಭರಣಗಳನ್ನು ಕಳವು ಮಾಡಿದ್ದರು. ಈ ಬಗ್ಗೆ ದೇವಾಲಯದ ಮ್ಯಾನೇಂಜಿAಗ್ ಟ್ರಸ್ಟಿ ಟಿ.ಪಿ. ಸೋಮಯ್ಯ ನೀಡಿದ್ದ ದೂರಿನನ್ವಯ ಮಡಿಕೇರಿ ನಗರ ಠಾಣೆಯಲ್ಲಿ ಮೊಕದ್ದಮೆ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿತ್ತು.