ಸೋಮವಾರಪೇಟೆ, ಆ. ೨೩: ಮಾಜಿ ಮುಖ್ಯಮಂತ್ರಿ, ಹಿಂದುಳಿದ ವರ್ಗಗಳ ಹರಿಕಾರ ದಿ. ದೇವರಾಜ ಅರಸು ಅವರು ತಮ್ಮ ಅಧಿಕಾರ ಅವಧಿಯಲ್ಲಿ ತಂದ ಭೂ ಸುಧಾರಣಾ ಕಾಯ್ದೆಗಳು ಸಮಾಜದಲ್ಲಿ ಸಮಾನತೆ ಕಂಡುಕೊಳ್ಳುವಲ್ಲಿ ಕ್ರಾಂತಿಕಾರಣ ಹೆಜ್ಜೆಯಾಗಿತ್ತು ಎಂದು ತಾಲೂಕು ತಹಶೀಲ್ದಾರ್ ಶ್ರೀಧರ್ ಕಂಕನವಾಡಿ ಬಣ್ಣಿಸಿದರು.

ತಾಲೂಕು ಆಡಳಿತ, ತಾಲೂಕು ಪಂಚಾಯಿತಿ ಹಾಗೂ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಇಲ್ಲಿನ ತಹಶೀಲ್ದಾರ್ ಕಚೇರಿ ಸಭಾಂಗಣದಲ್ಲಿ ನಡೆದ ಮಾಜಿ ಮುಖ್ಯಮಂತ್ರಿ ದೇವರಾಜು ಅರಸುರವರ ಜನ್ಮ ದಿನಾಚರಣೆ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿ ಅವರು ಮಾತನಾಡಿದರು.

ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸಾಮಾಜಿಕ ನ್ಯಾಯ ಸಿಗಬೇಕೆಂದು ಹೋರಾಡಿದ ಡಿ. ದೇವರಾಜು ಅರಸು ಅವರ ಆದರ್ಶ ಗುಣಗಳನ್ನು ಇಂದು ಎಲ್ಲರೂ ಪಾಲಿಸಬೇಕಿದೆ ಎಂದ ಅವರು, ಎಲ್ಲರಿಗೂ ಸಾಮಾಜಿಕ ನ್ಯಾಯ ಸಿಗಬೇಕು ಎಂದು ಪ್ರತಿಪಾದಿಸಿದ ಅರಸು ಅವರ ವ್ಯಕ್ತಿತ್ವ ರಾಜ್ಯದ ಜನರ ಹೃದಯದಲ್ಲಿ ಶಾಶ್ವತ ಸ್ಥಾನ ಸಿಗುವಂತೆ ಮಾಡಿದೆ ಎಂದರು.

ಮುಖ್ಯ ಭಾಷಣಕಾರರಾಗಿ ಪಾಲ್ಗೊಂಡಿದ್ದ ಉಪ ವಲಯ ಅರಣ್ಯಾಧಿಕಾರಿ ಭವ್ಯ ಮಾತನಾಡಿ, ದಿ. ದೇವರಾಜು ಅರಸು ಅವರು ತಮ್ಮ ಪರಿಕಲ್ಪನೆಯ ಹಿಂದುಳಿದ ವರ್ಗಗಳ ಶೈಕ್ಷಣಿಕ ಅಭಿವೃದ್ಧಿಗೆ ರಾಜ್ಯದಲ್ಲಿ ವಿದ್ಯಾರ್ಥಿ ನಿಲಯವನ್ನು ಪ್ರಾರಂಭಿಸಿದ್ದರು. ವಿದ್ಯಾರ್ಥಿ ನಿಲಯದಲ್ಲಿ ಇದ್ದು ವ್ಯಾಸಂಗ ಮಾಡಿದ ಅದೆಷ್ಟೋ ಸಂಖ್ಯೆಯ ಬಡವರ, ಶೋಷಿತರ, ದುರ್ಬಲ ವರ್ಗದ ಮಕ್ಕಳು ಇಂದು ಸಮಾಜದಲ್ಲಿ ಉನ್ನತ ಹುದ್ದೆಗಳನ್ನು ಅಲಂಕರಿಸಿದ್ದಾರೆ ಎಂದರು.

ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಪರಮೇಶ್ ಕುಮಾರ್ ಮಾತನಾಡಿ, ಇಂದಿನ ವಿದ್ಯಾರ್ಥಿ ನಿಲಯಗಳಲ್ಲಿ ಎಲ್ಲಾ ಅನುಕೂಲಗಳು ವಿದ್ಯಾರ್ಥಿಗಳಿಗೆ ಸಮರ್ಪಕವಾಗಿ ಸಿಗುತ್ತಿವೆ. ಉತ್ತಮ ವಿದ್ಯಾಭ್ಯಾಸವನ್ನು ಪಡೆಯುವ ಮೂಲಕ ಸರಕಾರದ ಯೋಜನೆಗಳನ್ನು ಉತ್ತಮ ರೀತಿಯಲ್ಲಿ ಬಳಸಿಕೊಳ್ಳಬೇಕೆಂದರು.

ವೇದಿಕೆಯಲ್ಲಿ ತಾಲೂಕು ಮಟ್ಟದ ಇಲಾಖಾಧಿಕಾರಿಗಳು, ರಾಷ್ಟಿçÃಯ ಹಬ್ಬಗಳ ಸಮಿತಿ ಸದಸ್ಯರು ಉಪಸ್ಥಿತರಿದ್ದರು. ಇದೇ ಸಂದರ್ಭ ಆಲೂರು ಸಿದ್ದಾಪುರ ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯದ ವಿದ್ಯಾರ್ಥಿಗಳಾದ ಪ್ರೀತಂ, ಸಾಕ್ಷಿ, ಮಹೇಶ್ ಹಾಗೂ ಸೋಮವಾರಪೇಟೆ ವಿದ್ಯಾರ್ಥಿ ನಿಲಯದ ವನಿತಾ ಇವರಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು.

ಬೆಂಗಳೂರಿನಲ್ಲಿ ನಡೆದ ಹಾಕಿ ಪಂದ್ಯಾಟದಲ್ಲಿ ಜಯಗಳಿಸಿ ರಾಷ್ಟçಮಟ್ಟದ ಕ್ರೀಡಾಕೂಟಕ್ಕೆ ಅರ್ಹತೆ ಪಡೆದ ಕರ್ನಾಟಕ ರಾಜ್ಯ ಸರಕಾರಿ ನೌಕರರ ಹಾಕಿ ತಂಡದಲ್ಲಿ ಪಾಲ್ಗೊಂಡಿದ್ದ ಸೋಮವಾರಪೇಟೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ದ್ವಿತೀಯ ದರ್ಜೆ ಸಹಾಯಕ ಮಂಜುನಾಥ್ ಅವರನ್ನು ಅಭಿನಂದಿಸಲಾಯಿತು. ಉಪ ವಲಯ ಅರಣ್ಯಾಧಿಕಾರಿ ಭವ್ಯ ಅವರನ್ನು ಸನ್ಮಾನಿಸಲಾಯಿತು.