ಸಿದ್ದಾಪುರ, ಆ. ೨೩: ವಾಲ್ನೂರು - ತ್ಯಾಗತ್ತೂರಿನಲ್ಲಿ ಹರಿಯುವ ಕಾವೇರಿ ನದಿಯಲ್ಲಿ ಅಪರಿಚಿತ ವ್ಯಕ್ತಿಯ ಶವವೊಂದು ಪತ್ತೆಯಾಗಿದೆ. ತ್ಯಾಗತ್ತೂರು ಗ್ರಾಮದ ತಿರುವಣಗುಂಡಿ ಎಂಬಲ್ಲಿ ಕೊಳೆತ ಸ್ಥಿತಿಯಲ್ಲಿ ಪುರುಷನ ಶವ ನದಿಯಲ್ಲಿ ಪತ್ತೆಯಾಗಿದ್ದು, ಸ್ಥಳೀಯರು ಸಿದ್ದಾಪುರದ ಪೊಲೀಸರಿಗೆ ಮಾಹಿತಿ ನೀಡಿದ ಮೇರೆಗೆ ಸ್ಥಳಕ್ಕೆ ಸಿದ್ದಾಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ. ಮೃತದೇಹವು ಕೊಳೆತು ದುರ್ನಾಥ ಬೀರುತ್ತಿದ್ದು ವ್ಯಕ್ತಿ ಯಾರೆಂಬುದು ಪತ್ತೆಹಚ್ಚಲು ಸಾಧ್ಯವಾಗುತ್ತಿಲ್ಲ.