ಸುಂಟಿಕೊಪ್ಪ, ಆ. ೨೩: ಜಿಲ್ಲಾ ರಸ್ತೆ ಸಾರಿಗೆ ಇಲಾಖೆ ಅಧಿಕಾರಿ ಶಿವರಾಮ್ ಸುಂಟಿಕೊಪ್ಪ ಆಟೋ ಚಾಲಕರ ನಿಲ್ದಾಣಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಸುಂಟಿಕೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ೨೫೦ಕ್ಕೂ ಹೆಚ್ಚು ಆಟೋಗಳಿದ್ದು, ರಸ್ತೆ ಸುರಕ್ಷತಾ ನಿಯಮಗಳನ್ನು ಪಾಲಿಸುವ ಕುರಿತು ಮಾಹಿತಿ ನೀಡಿದ ಅವರು, ಪ್ರತಿಯೊಬ್ಬರೂ ರಸ್ತೆ ಸಂಚಾರ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ತಿಳಿಸಿದರು. ಕೆಲವು ಆಟೋರಿಕ್ಷಾ ಮಾಲೀಕರು ತಮಗೆ ಬೇಕಾದಂತೆ ಆಟೋಗಳನ್ನು ವಿನ್ಯಾಸಗೊಳಿಸಿದ್ದು, ಅದನ್ನು ತೆರವುಗೊಳಿಸುವಂತೆ ಸೂಚಿಸಿದರು. ಪ್ರತಿಯೊಬ್ಬರೂ ಕೂಡ ವಾಹನ ಸಂಚಾರ ನಿಯಮ ಕಾನೂನನ್ನು ಪರಿಪಾಲಿಸುವ ಮೂಲಕ ವಾಹನ ಸಂಚಾರ ಮಾಡುವಾಗ ಹೆಚ್ಚಿನ ಜಾಗೃತೆ ವಹಿಸಬೇಕು. ವಾಹನ ಚಾಲನೆ ಮಾಡುವಾಗ ಚಾಲಕರು ಚಾಲನಾ ಪರವಾನಿಗೆ ಮತ್ತು ದಾಖಲಾತಿ ಸಮವಸ್ತç ಕಡ್ಡಾಯವಾಗಿ ಹೊಂದಿರಬೇಕು ಎಂದು ಎಚ್ಚರಿಸಿದರು.

ಈ ಸಂದರ್ಭ ಸಾರಿಗೆ ಇಲಾಖೆ ಸಿಬ್ಬಂದಿ, ಆಟೋ ಚಾಲಕರ ಸಂಘದ ಅಧ್ಯಕ್ಷ ಸುನೀಲ್ ಇತರರು ಹಾಜರಿದ್ದರು.