ಮಡಿಕೇರಿ, ಆ. ೨೪: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಹಯೋಗದೊಂದಿಗೆ ಶ್ರೀಕೃಷ್ಣ ಜನ್ಮಾಷ್ಠಮಿ ೨೦೨೪ ತಾ. ೨೬ ರಂದು ಬೆಳಿಗ್ಗೆ ೧೦.೩೦ ಗಂಟೆಗೆ ನಗರದ ಗಾಂಧಿ ಭವನದಲ್ಲಿ ನಡೆಯಲಿದೆ.

ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು, ಶಾಸಕರಾದ ಡಾ.ಮಂತರ್ ಗೌಡ, ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ಶಾಸಕರಾದ ಎ.ಎಸ್.ಪೊನ್ನಣ್ಣ, ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ವಿಧಾನ ಪರಿಷತ್ ಸದಸ್ಯರಾದ ಎಂ.ಪಿ.ಸುಜಾ ಕುಶಾಲಪ್ಪ, ಎಸ್.ಎಲ್.ಭೋಜೇಗೌಡ, ಡಾ.ಧನಂಜಯ ಸರ್ಜಿ, ಕಂಚಿ ಕಾಮಾಕ್ಷಿಯಮ್ಮ ದೇವಾಲಯ ಸಮಿತಿಯ ಅಧ್ಯಕ್ಷರಾದ ಪವನ್ ಜಿ.ಬಿ, ಗೌರವಾಧ್ಯಕ್ಷರಾದ ಜಿ.ಜಿ.ಬಾಲಕೃಷ್ಣ, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಜಿ.ಪಂ. ಸಿಇಒ ಆನಂದ್ ಪ್ರಕಾಶ್ ಮೀನಾ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಕುಮಾರ ಇತರರು ಪಾಲ್ಗೊಳ್ಳಲಿದ್ದಾರೆ. ಚಿ.ನಾ.ಸೋಮೇಶ್ ಅವರು ಉಪನ್ಯಾಸ ನೀಡಲಿದ್ದಾರೆ.