ಚೆಯ್ಯಂಡಾಣೆ, ಆ. ೨೪: ಸ್ಥಳೀಯ ಸರಕಾರಿ ಮಾದರಿ ಪ್ರಾಥಮಿಕ ಅರೋಗ್ಯ ಕೇಂದ್ರ, ಕೊಡಗು ರಕ್ತ ನಿಧಿ ಕೇಂದ್ರ ಮಡಿಕೇರಿ ಹಾಗೂ ನರಿಯಂದಡ ಗ್ರಾಮ ಪಂಚಾಯಿತಿ ಸಹಯೋಗದೊಂದಿಗೆ ತಾ. ೨೮ ರಂದು ರಕ್ತದಾನ ಶಿಬಿರ ಆಯೋಜಿಸಲಾಗಿದೆ.

ಪೂರ್ವಾಹ್ನ ೧೦ ಗಂಟೆಯಿAದ ಅಪರಾಹ್ನ ೨ ಗಂಟೆಯವರೆಗೆ ಚೆಯ್ಯಂಡಾಣೆ ಪ್ರಾಥಮಿಕ ಅರೋಗ್ಯ ಕೇಂದ್ರದಲ್ಲಿ ರಕ್ತದಾನ ಶಿಬಿರ ನಡೆಯಲಿದ್ದು ನರಿಯಂದಡ ಗ್ರಾಮ ಪಂಚಾಯಿತಿಗೆ ಒಳಪಟ್ಟ ಗ್ರಾಮಸ್ಥರು ಸ್ವಯಂ ಪ್ರೇರಿತ ರಕ್ತದಾನ ಶಿಬಿರದಲ್ಲಿ ಪಾಲ್ಗೊಂಡು ಶಿಬಿರವನ್ನು ಯಶಸ್ವಿ ಗೊಳಿಸಬೇಕೆಂದು ಪತ್ರಿಕಾ ಪ್ರಕಟಣೆಯಲ್ಲಿ ಕೊರಿಕೊಂಡಿದ್ದಾರೆ.