ಕಣಿವೆ, ಆ. ೨೪: ದನಗಳ ಗೊಬ್ಬರವನ್ನು ಸಾಗಿಸುತ್ತಿದ್ದ ಲಾರಿ ಹಾಗೂ ಪೆಟ್ರೋಲ್ ಟ್ಯಾಂಕರ್ ನಡುವೆ ಮುಖಾ ಮುಖಿ ಡಿಕ್ಕಿಯಾಗಿ ಗೊಬ್ಬರ ಸಾಗಿಸುತ್ತಿದ್ದ ಲಾರಿಯಲ್ಲಿದ್ದ ವ್ಯಕ್ತಿ ಮೃತಪಟ್ಟ ಘಟನೆ ಗುಡ್ಡೆಹೊಸೂರು ಕುಶಾಲನಗರ ರಾಷ್ಟಿçÃಯ ಹೆದ್ದಾರಿಯಲ್ಲಿ ಶನಿವಾರ ರಾತ್ರಿ ನಡೆದಿದೆ.

ಸುಂಟಿಕೊಪ್ಪದ ನಿವಾಸಿ ರಾಜಣ್ಣ (೫೦) ಮೃತ ದುರ್ದೈವಿ. ಲಾರಿ ಚಾಲಕ ಸುಂಟಿಕೊಪ್ಪದ ಜಬ್ಬಾರ್ ಎಂಬವರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು,

(ಮೊದಲ ಪುಟದಿಂದ) ಕುಶಾಲನಗರದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮಂಡ್ಯದಿAದ ಸುಳ್ಯಕ್ಕೆ ಗೊಬ್ಬರ ಸಾಗಾಟ ಮಾಡುತ್ತಿದ್ದ ಲಾರಿ ಗುಡ್ಡೆಹೊಸೂರು ಬಳಿಯ ಪೆಟ್ರೋಲ್ ಬಂಕ್ ಬಳಿ ಕುಶಾಲನಗರದತ್ತ ಬರುತ್ತಿದ್ದ ಪೆಟ್ರೋಲ್ ಟ್ಯಾಂಕರ್ ಲಾರಿಯ ನಡುವೆ ನಡೆದ ಮುಖಾಮುಖಿ ಡಿಕ್ಕಿಯಲ್ಲಿ ಈ ಘಟನೆ ನಡೆದಿದೆ. ಮೃತ ರಾಜಣ್ಣ ಗೊಬ್ಬರ ಲೋಡ್ ಮಾಡಲೆಂದು ತೆರಳಿದ್ದರು. ಅಪಘಾತದಲ್ಲಿ ೨ ಕಾಲುಗಳು ತುಂಡಾಗಿ ಗಂಭೀರ ಗಾಯಗೊಂಡು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

ಕುಶಾಲನಗರ ಸಂಚಾರಿ ಠಾಣಾ ಪೊಲೀಸರು ಸ್ಥಳಕ್ಕೆ ತೆರಳಿ ಮಹಜರು ನಡೆಸಿದರು. ಮೃತ ವ್ಯಕ್ತಿಯ ಶವವನ್ನು ಕುಶಾಲನಗರದ ಸರ್ಕಾರಿ ಆಸ್ಪತ್ರೆಯ ಶವಾಗಾರದಲ್ಲಿ ಇಡಲಾಗಿದೆ.