ನಾಪೋಕ್ಲು, ಆ. ೨೪: ಇತ್ತೀಚೆಗೆ ನಿಧನರಾದ ಬೆಟ್ಟಗೇರಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮಾಜಿ ಅಧ್ಯಕ್ಷ, ಹಾಲಿ ಸದಸ್ಯರಾಗಿದ್ದ ಪಾಲೂರು ಗ್ರಾಮದ ಎಡಿಕೇರಿ ಕೆ.ವಾಸುದೇವ ಅವರಿಗೆ ಸಂತಾಪ ಸೂಚಿಸಲಾಯಿತು.
ಬೆಟ್ಟಗೇರಿ ವಿಎಸ್ಎಸ್ಎನ್ ಸಭಾಂಗಣದಲ್ಲಿ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ತಳೂರು ಕಿಶೋರ್ ಕುಮಾರ್ ಅಧ್ಯಕ್ಷತೆಯಲ್ಲಿ ಜರುಗಿದ ಸಂತಾಪ ಸಭೆಯಲ್ಲಿ ಮಾಜಿ ಶಾಸಕ ಕೆ.ಜಿ. ಬೋಪಯ್ಯ ಭಾಗವಹಿಸಿ ಮಾತನಾಡಿ, ವಾಸುದೇವ ಅವರು ವಿವಿಧ ಸಂಘ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸಿ ಸಮಾಜ ಸೇವಕರಾಗಿ ಸಮಾಜಕ್ಕೆ ಅತ್ಯುತ್ತಮ ಕೊಡುಗೆಯನ್ನು ನೀಡಿದ್ದಾರೆ ಅವರ ಅಗಲಿಕೆ ಸಾರ್ವಜನಿಕ ಕ್ಷೇತ್ರಕ್ಕೆ ತುಂಬಲಾರದ ನಷ್ಟವಾಗಿದೆ ಎಂದರು.
ಜಿಲ್ಲಾ ಬಿಜೆಪಿ ಅಧ್ಯಕ್ಷ ನಾಪಂಡ ರವಿ ಕಾಳಪ್ಪ, ಶಕ್ತಿಕೇಂದ್ರದ ಪ್ರಮುಖರಾದ ಕಡ್ಯದ ವಿಜಯ, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ನಾಪಂಡ ರ್ಯಾಲಿ ಮಾದಯ್ಯ ಹಾಗೂ ಸಂಘದ ನಿರ್ದೇಶಕರು ಸಿಬ್ಬಂದಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.