ಗೋಣಿಕೊಪ್ಪಲು.ಆ.೨೫ : ಅಮ್ಮತ್ತಿಯ ಶ್ರೀ ಬಸವೇಶ್ವರ ದೇವಾಲಯ ಟ್ರಸ್ಟ್ ವತಿಯಿಂದ ಈ ಭಾರಿ ಸ್ವರ್ಣಗೌರಿ ಹಾಗೂ ಗಣೇಶೋತ್ಸವವನ್ನು ಯಶಸ್ವಿಯಾಗಿ ನಡೆಸಲು ದೇವಾಲಯ ಸಮಿತಿಯ ಆಡಳಿತ ಮಂಡಳಿ ನಿರ್ಧಾರ ಕೈಗೊಂಡಿದೆ.

ದೇವಾಲಯದ ಆವರಣದಲ್ಲಿ ಸಮಿತಿಯ ಅಧ್ಯಕ್ಷ ಮಾಚಿಮಂಡ ಮಧುಮಾದಪ್ಪ ಅಧ್ಯಕ್ಷತೆಯಲ್ಲಿ ಜರುಗಿದ ಆಡಳಿತ ಮಂಡಳಿಯ ಪೂರ್ವಭಾವಿ ಸಭೆಯಲ್ಲಿ ಈ ನಿರ್ಧಾರ ಕೈಗೊಂಡಿದ್ದು ಸೆ.೬ರಂದು ಬೆಳಿಗ್ಗೆ ೬ ಗಂಟೆಗೆ ಸ್ವರ್ಣಗೌರಿಯನ್ನು ಸಾಂಪ್ರದಾಯಿಕವಾಗಿ ಕರೆ ತರುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುವುದು ಸೆ.೭ರಂದು ಗಣೇಶಮೂರ್ತಿಯನ್ನು ಕುಳ್ಳಿರಿಸಿ ಗಣಪತಿ ಹೋಮದೊಂದಿಗೆ ಪೂಜಾ ಕಾರ್ಯಕ್ರಮವನ್ನು ಆರಂಭಿಸಲಾಗುವುದು.

ಭಕ್ತರಿಗಾಗಿ ಪ್ರತಿದಿನ ಅಲಂಕಾರಿಕ ಪೂಜೆಯನ್ನು ಏರ್ಪಡಿಸಲಾಗಿದೆ. ಸೆ.೨೧ರಂದು ಗೌರಿಗಣೇಶ ಮೂರ್ತಿಯನ್ನು ಅಲಂಕೃತ ಮಂಟಪದಲ್ಲಿ ಕುಳ್ಳಿರಿಸಿ ನಗರದ ಮುಖ್ಯ ಬೀದಿಯಲ್ಲಿ ಮೆರವಣಿಗೆ ಸಾಗಿ ಸೆ.೨೨ರ ಮುಂಜಾನೆ ೫ ಗಂಟೆಗೆ ನಗರದ ಮದ್ರಿರ ಗಣೇಶ್ ಅವರ ಕೆರೆಯಲ್ಲಿ ಮೂರ್ತಿಯನ್ನು ವಿಸರ್ಜನೆ ಮಾಡಲಾಗುವ ನಿರ್ಧಾರವನ್ನು ಆಡಳಿತ ಮಂಡಳಿಯು ಕೈಗೊಂಡಿದೆ. ಅಂತಿಮ ದಿನದಂದು ಅಮ್ಮತ್ತಿಯ ಬಸ್ ನಿಲ್ದಾಣದಲ್ಲಿ ಸಭಾ ಕಾರ್ಯಕ್ರಮ ನಡೆಯಲಿದ್ದು ಅನೇಕ ಗಣ್ಯರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

ಸ್ಥಳೀಯ ಕಲಾವಿದರಿಂದ ವಿವಿಧ ರೀತಿಯ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದ್ದು ರಾತ್ರಿ ಪ್ರಖ್ಯಾತ ರಸಮಂಜರಿ ತಂಡದಿAದ ಆರ್ಕೆಸ್ಟಾç ನಡೆಯಲಿದೆ. ಶಾಂತಿ ಸೌಹಾರ್ಧತೆಯನ್ನು ಕಾಪಾಡುವ ನಿಟ್ಟಿನಲ್ಲಿ ನಾಗರಿಕರು ಗ್ರಾಮದ ಜನತೆ ದೇವಾಲಯ ಸಮಿತಿಯೊಂದಿಗೆ ಸಹಕರಿಸುವಂತೆ ಸಮಿತಿಯ ಅಧ್ಯಕ್ಷರಾದ ಮಾಚಿಮಂಡ ಮಧು ಮಾದಪ್ಪ ತಿಳಿಸಿದರು.ಸಭೆಯಲ್ಲಿ ಆಡಳಿತ ಮಂಡಳಿಯ ಉಪಾಧ್ಯಕ್ಷರು, ಕಾರ್ಯದರ್ಶಿ, ಸದಸ್ಯರು ಉಪಸ್ಥಿತರಿದ್ದರು.