ನಾಪೋಕ್ಲು, ಆ. ೨೫: ನಾಲ್ಕುನಾಡು ವ್ಯಾಪ್ತಿಯಲ್ಲಿ ಕೈಲ್ ಮುಹೂರ್ತ (ಕೈಲ್ ಪೋಳ್ದ್) ಹಬ್ಬದ ಸಂಭ್ರಮಕ್ಕೆ ರೈತರು ಅಣಿಯಾಗುತ್ತಿದ್ದಾರೆ. ನಾಪೋಕ್ಲು, ಕಕ್ಕಬೆ, ಕುಂಜಿಲ, ಬಲ್ಲಮಾವಟ್ಟಿ ಗ್ರಾಮ ವ್ಯಾಪ್ತಿಯ ಬಹುತೇಕ ಕಡೆ ತಾ. ೨೭ ರಂದು ಕೈಲ್ ಮುಹೂರ್ತ ಹಬ್ಬವನ್ನು ಆಚರಿಸಲಾಗುತ್ತದೆ.
ಕೈಲ್ ಮುಹೂರ್ತ ಹಿನ್ನೆಲೆಯಲ್ಲಿ ಕಕ್ಕಬೆ ಪಾಡಿ ಶ್ರೀ ಇಗ್ಗುತಪ್ಪ ಹಾಗೂ ನೆಲಜಿ ಗ್ರಾಮದ ಶ್ರೀ ಇಗ್ಗುತಪ್ಪ ದೇವಾಲಯದಲ್ಲಿ ಆಗಸ್ಟ್ ೨೬ ರಂದು ಸೋಮವಾರ ಉತ್ಸವ ನಡೆಯಲಿದ್ದು, ಉತ್ಸವದ ಅಂಗವಾಗಿ ತುಲಾಭಾರ ಸೇವೆ, ಎತ್ತುಪೋರಾಟ, ಮಹಾಪೂಜೆ, ದೇವರ ನೃತ್ಯ ಬಲಿ, ಅನ್ನಸಂತರ್ಪಣೆ ನಡೆಯಲಿದೆ.
ಕ್ರೀಡಾಕೂಟ
ನಾಪೋಕ್ಲು ಭಗವತಿ ಯುವಕ ಸಂಘದ ಆಶ್ರಯದಲ್ಲಿ ಮಂಗಳವಾರ. ನಾಪೋಕ್ಲು ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ಆಟದ ಮೈದಾನದಲ್ಲಿ ಹಾಗೂ ಬೇತು ಗ್ರಾಮದ ಶ್ರೀ ಮಕ್ಕಿ ಶಾಸ್ತಾವು ಯುವಕ ಸಂಘದ ವತಿಯಿಂದ ಬೇತು ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ಆಟದ ಮೈದಾನದಲ್ಲಿ, ಬಲ್ಲಮಾವಟಿ ಗ್ರಾಮದ ಅಪೋಲೋ ಯುವಕ ಸಂಘ ಮತ್ತು ಕಾವೇರಿ ಮಹಿಳಾ ಸಮಾಜದ ಸಂಯುಕ್ತ ಆಶ್ರಯದಲ್ಲಿ ಬಲ್ಲಮಾವಟಿ ನೇತಾಜಿ ಪ್ರೌಢಶಾಲೆಯ ಆಟದ ಮೈದಾನದಲ್ಲಿ ನಾಡಹಬ್ಬ ಕೈ ಮುಹೂರ್ತ ಪ್ರಯುಕ್ತ ವಿವಿಧ ಕ್ರೀಡಾ ಕೂಟವನ್ನು ಆಯೋಜಿಸಲಾಗಿದೆ. -ದುಗ್ಗಳ ಸದಾನಂದ