ಕುಶಾಲನಗರ, ಆ. ೨೫: ಕುಶಾಲನಗರ ಪಟ್ಟಣ ಮತ್ತು ಸುತ್ತಮುತ್ತ ಗ್ರಾಮಗಳ ವ್ಯಾಪ್ತಿಯಲ್ಲಿ ಶುಕ್ರವಾರ ಮುಂಜಾನೆ ಭಾರಿ ಪ್ರಮಾಣದ ಶಬ್ದದೊಂದಿಗೆ ಭೂಮಿ ಅಧುರಿದ ಘಟನೆ ಕುಶಾಲನಗರದ ಸುತ್ತಮುತ್ತ ಎಲ್ಲೆಡೆ ಆತಂಕಕ್ಕೆ ಮನೆ ಮಾಡಿದೆ. ಕುಶಾಲನಗರ ಸಮೀಪ ಹಾರಂಗಿ ಅಣೆಕಟ್ಟು ಬಳಿ ಕೂಗಳತೆ ದೂರದಲ್ಲಿ ಮತ್ತು ಸುತ್ತಮುತ್ತ ಎಲಕನೂರು ವ್ಯಾಪ್ತಿಯಲ್ಲಿ ಭಾರಿ ಪ್ರಮಾಣದ ಕಲ್ಲು ಗಣಿಗಾರಿಕೆ ನಡೆಯುತ್ತಿದ್ದು, ಇಲ್ಲಿ ಬೃಹತ್ ಬಂಡೆಗಳನ್ನು ಸ್ಫೋಟಿಸಲು ಭೂಮಿಯ ತಳ ಭಾಗದಲ್ಲಿ ನಿಯಮಬಾಹಿರವಾಗಿ ಬೃಹತ್ ಪ್ರಮಾಣದ ಸ್ಪೋಟಕಗಳನ್ನು ಬಳಸುತ್ತಿರುವ ಬಗ್ಗೆ ಜನರು ಸಂಶಯ ವ್ಯಕ್ತಪಡಿಸಿದ್ದಾರೆ. ಶುಕ್ರವಾರ ಬೆಳಿಗ್ಗೆ ನಡೆದ ಘಟನೆಗೂ ಈ ವ್ಯಾಪ್ತಿಯ ಕಲ್ಲು ಗಣಿಗಾರಿಕೆ ಪ್ರದೇಶದಲ್ಲಿ ನಡೆಯುತ್ತಿರುವ ಸ್ಫೋಟಗಳಿಗೂ ಸಂಬAಧವಿರುವ ಬಗ್ಗೆ ಊಹಾಪೋಹಗಳು ಕೇಳಿ ಬರುತ್ತಿದ್ದು ಈ ಬಗ್ಗೆ ಕೂಡಲೇ ಜಿಲ್ಲಾಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ ಮುಂದೆ ಉಂಟಾಗಲಿರುವ ಸಂಭಾವ್ಯ ಅನಾಹುತವನ್ನು ತಪ್ಪಿಸುವಂತಾಗಬೇಕೆAದು ಕುಶಾಲನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ವಿ.ಪಿ. ಶಶಿಧರ್ ಆಗ್ರಹಿಸಿದ್ದಾರೆ.