ಕೂಡಿಗೆ, ಆ. ೨೫: ಕೊಡಗು ವಿಶ್ವ ವಿದ್ಯಾಲಯದ ಘಟಕ ಮತ್ತು ಸಂಯೋಜಿತ ಮಹಾ ವಿದ್ಯಾಲ ಯಗಳಲ್ಲಿ ೨೦೨೩-೨೪ನೇ ಶೈಕ್ಷಣಿಕ ಸಾಲಿನಲ್ಲಿ ವ್ಯಾಸಂಗ ಮಾಡುತ್ತಿರುವ ಬಿ.ಎ., ಬಿ.ಕಾಂ., ಬಿ.ಬಿ.ಎ., ಬಿ.ಸಿ.ಎ. ಮತ್ತು ಬಿ.ಎಸಿ.್ಸ ಪ್ರಥಮ ವರ್ಷದ ಸ್ನಾತಕ ವಿದ್ಯಾರ್ಥಿಗಳ ದ್ವಿತೀಯ ಸೆಮಿಸ್ಟರ್ನ ಜೂನ್ -ಜುಲೈ-೨೦೨೪ರ ಪರೀಕ್ಷಾ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ಮುಗಿದಿದ್ದು, ಫಲಿತಾಂಶವನ್ನು ತಾ. ೧೯ ರಂದು ಪ್ರಕಟಿಸಲಾಗಿದೆ.
ಪ್ರಥಮ ವರ್ಷದ ಸ್ನಾತಕ ವಿದ್ಯಾರ್ಥಿಗಳ ದ್ವಿತೀಯ ಸೆಮಿಸ್ಟರ್ ಪರೀಕ್ಷೆಗಳಿಗೆ ಸಂಬAಧಿಸಿದ ಎಲ್ಲಾ ಪ್ರಕ್ರಿಯೆಗಳನ್ನು ಸಮಗ್ರ ವಿಶ್ವವಿದ್ಯಾಲಯ ಮತ್ತು ಕಾಲೇಜು ನಿರ್ವಹಣಾ ವ್ಯವಸ್ಥೆ ಮೂಲಕ ಯಶಸ್ವಿಯಾಗಿ ಪೂರ್ಣಗೊಳಿಸ ಲಾಗಿದ್ದು, ಸ್ನಾತಕ ಪದವಿ ವಿದ್ಯಾರ್ಥಿಗಳು ಪರೀಕ್ಷಾ ಫಲಿತಾಂಶವನ್ನು ಕೊಡಗು ವಿಶ್ವವಿದ್ಯಾಲಯದ ವೆಬ್ಸೈಟ್ ಞuಞ.ಞಚಿಡಿಟಿಚಿಣಚಿಞಚಿ.gov.iಟಿ ಮುಖಾಂತರ ವಿದ್ಯಾರ್ಥಿಗಳ ನೋಂದಣಿ ಸಂಖ್ಯೆ ಮೂಲಕ ನೋಡಲು ಲಭ್ಯವಿದೆ.
೨೦೨೩-೨೦೨೪ನೇ ಶೈಕ್ಷಣಿಕ ಸಾಲಿನ ಪ್ರಥಮ ಸೆಮಿಸ್ಟರ್ನ ಪದವಿ ಪರೀಕ್ಷೆಗಳ ಫಲಿತಾಂಶವನ್ನು ಪ್ರಕಟಿಸಿದ ರಾಜ್ಯದ ಮೊದಲ ವಿಶ್ವ ವಿದ್ಯಾಲಯ ಎಂಬ ಹೆಗ್ಗಳಿಕೆಗೆ ನಮ್ಮ ಕೊಡಗು ವಿಶ್ವವಿದ್ಯಾಲಯವು ಭಾಜನವಾಗಿದ್ದು, ದ್ವಿತೀಯ ಸೆಮಿಸ್ಟರ್ ಫಲಿತಾಂಶವನ್ನು ಕೂಡ ಶೀಘ್ರವಾಗಿ ಪ್ರಕಟಿಸಿದ ಹಿರಿಮೆಯನ್ನು ಪಡೆದುಕೊಂಡಿದೆ. ಇದೇ ಸಂದರ್ಭದಲ್ಲಿ ಸ್ನಾತಕ ಪದವಿ ಪರೀಕ್ಷಾ ಫಲಿತಾಂಶಗಳನ್ನು ಕುರಿತು ಮಾತನಾಡಿದ ಕೊಡಗು ವಿಶ್ವ ವಿದ್ಯಾಲಯ ಕುಲಪತಿಗಳಾದ ಪ್ರೊ. ಅಶೋಕ ಸಂ ಆಲೂರ ಅವರು, ಕರ್ನಾಟಕ ಸರ್ಕಾರವು ೨೦೨೨-೨೩ನೇ ಸಾಲಿನಲ್ಲಿ ಕೊಡಗಿನಲ್ಲಿ ನೂತನವಾಗಿ ಕೊಡಗು ವಿಶ್ವ ವಿದ್ಯಾಲಯವನ್ನು ಸ್ಥಾಪನೆಗೊಂಡು, ವಿಶ್ವವಿದ್ಯಾಲಯ ಧನ ಸಹಾಯ ಆಯೋಗ ತನ್ನ ಅಧಿನಿಯಮ ೧೯೫೬ ರ ಪ್ರಕರಣ ೨ (ಎಫ್) ಅಡಿಯಲ್ಲಿ ೨೦೨೩ ರ ಜುಲೈ ೨೫ ರಂದು ಮಾನ್ಯತೆಯನ್ನು ನೀಡಿ ಪ್ರಕಟಣೆ ಹೊರಡಿಸಿತ್ತು. ಯುಜಿಸಿ ಮಾನ್ಯತೆ ಸಿಕ್ಕಿರುವುದರಿಂದ ಯುಜಿಸಿ ಅಡಿಯಲ್ಲಿ ಬರುವಂತಹ ವಿವಿಧ ಪದವಿಗಳನ್ನು ನೀಡಲು ಕೊಡಗು ವಿಶ್ವವಿದ್ಯಾಲಯವು ಅಧಿಕೃತ ಮಾನ್ಯತೆ ಪಡೆದುಕೊಂಡಿದೆ. ಕೊಡಗು ವಿಶ್ವವಿದ್ಯಾಲಯವು ಘಟಕ ಮತ್ತು ಸಂಯೋಜಿತ ಮಹಾ ವಿದ್ಯಾಲಯಗಳಲ್ಲಿ ೨೦೨೩-೨೪ನೇ ಶೈಕ್ಷಣಿಕ ಸಾಲಿನಲ್ಲಿ ಬಿಎ, ಬಿಕಾಂ, ಬಿಬಿಎ, ಬಿಸಿಎ ಮತ್ತು ಬಿಎಸ್ಸಿ ಪ್ರವೇಶಾತಿಗೆ ಅವಕಾಶವನ್ನು ಕಲ್ಪಿಸಿ ಕೊಟ್ಟಿತ್ತು. ನಮ್ಮ ವಿಶ್ವ ವಿದ್ಯಾಲಯ ದಲ್ಲಿ ವ್ಯಾಸಂಗ ಮಾಡಿದಂತಹ ವಿದ್ಯಾರ್ಥಿಗಳನ್ನು ಉದ್ಯೋಗಾಧಾರಿತ ಕೌಶಲ್ಯಾಭಿವೃದ್ಧಿ ತರಬೇತಿಗಳ ಜೊತೆಗೆ ಭವಿಷ್ಯದಲ್ಲಿ ತಮ್ಮ ಉನ್ನತ ವ್ಯಾಸಂಗ ಮತ್ತು ಉದ್ಯೋಗಗಳಿಗೆ ಹೋಗುವುದಕ್ಕೆ ಪೂರಕವಾದ ವಾತಾವರಣ ನಿರ್ಮಿಸುವ ಸದುದ್ದೇಶವನ್ನು ಹೊಂದಿದ್ದು, ಸ್ನಾತಕ ಪರೀಕ್ಷೆಗಳು ಮುಗಿದ ಕೆಲವೇ ದಿನಗಳ ಅಂತರದಲ್ಲಿ ಮೌಲ್ಯಮಾಪನ ಪ್ರಕ್ರಿಯೆಗೆ ತ್ವರಿತ ಚಾಲನೆ ನೀಡಿ, ಫಲಿತಾಂಶವನ್ನು ಕೂಡ ಅಷ್ಟೇ ಶೀಘ್ರವಾಗಿ ಪ್ರಕಟಿಸುತ್ತಿದ್ದೇವೆ ಎಂದು ತಿಳಿಸಿದರು.
ಕೊಡಗು ವಿಶ್ವವಿದ್ಯಾಲಯದ ಕುಲಸಚಿವರು (ಮೌಲ್ಯಮಾಪನ) ಆದ ಪ್ರೊ. ಸೀನಪ್ಪ ಅವರು ಮಾತನಾಡಿ, ಕೊಡಗು ವಿಶ್ವ ವಿದ್ಯಾಲಯದ ಪ್ರಥಮ ಸ್ನಾತಕೋತ್ತರ ಪದವಿಯ ವಿವಿಧ ಕೋರ್ಸ್ಗಳ ಪ್ರಥಮ ಸೆಮಿಸ್ಟರ್ ಫಲಿತಾಂಶವನ್ನು ಕೂಡ ಈಗಾಗಲೇ ಪ್ರಕಟಿಸಲಾಗಿದೆ. ನಮ್ಮ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳ ಉತ್ತಮ ಭವಿಷ್ಯಕ್ಕಾಗಿ ಹಾಗೂ ಸರ್ವತೋಮುಖ ಪ್ರಗತಿಗಾಗಿ ಇದು ಪೂರಕವಾಗಿದೆ ಎಂದು ತಿಳಿಸಿದರು.
ಈ ಸಂದರ್ಭ ಕೊಡಗು ವಿಶ್ವ ವಿದ್ಯಾಲಯದ ಸ್ನಾತಕ ಪದವಿ ಪರೀಕ್ಷೆಗಳ ಸಂಯೋಜಕ ಪ್ರೊ. ರವಿಶಂಕರ್, ಪರೀಕ್ಷಾ ಉಪ ಮೇಲ್ವಿಚಾರಕಿ ಡಾ. ಶೈಲಶ್ರೀ, ಕೊಡಗು ವಿಶ್ವವಿದ್ಯಾಲಯದ ಸಂಯೋಜಕ ಗಗನ್ ಹೆಚ್.ಎಸ್. ಮೊದಲಾದವರು ಉಪಸ್ಥಿತರಿದ್ದರು.