ನಾಪೋಕ್ಲು, ಆ. ೨೫: ನಾಪೋಕ್ಲು ವಿನಲ್ಲಿ ಕಿರಿದಾದ ರಸ್ತೆಯಿಂದಾಗಿ ಟ್ರಾಫಿಕ್ ಸಮಸ್ಯೆ ವಿಪರೀತವಾಗಿದೆ ರಸ್ತೆ ಅಗಲೀಕರಣಕ್ಕೆ ಕೂಡಲೆ ಕ್ರಮ ಕೈಗೊಳ್ಳಬೇಕು. ಕುಡಿಯುವ ನೀರಿನ ಶುದ್ಧೀಕರಣ ಘಟಕವನ್ನು ಸ್ಥಾಪನೆ ಕೆಲಸ ಪ್ರಾರಂಭವಾಗಿ ಹತ್ತು ವರ್ಷಗಳಾಗಿದ್ದರು. ಇನ್ನು ಶುದ್ಧ ಕುಡಿಯುವ ನೀರು ಸಾರ್ವಜನಿಕರಿಗೆ ದೊರಕುತ್ತಿಲ್ಲ. ಕಾವೇರಿ ಹೊಳೆಯಿಂದ ನೇರವಾಗಿ ಸಾರ್ವಜನಿಕರಿಗೆ ನೀರು ಸರಬರಾಜು ಮಾಡಲಾಗುತ್ತಿದೆ, ಬೀದಿ ನಾಯಿ ಮತ್ತು ಜಾನುವಾರುಗಳು ಪಟ್ಟಣದಲ್ಲಿ ಸಮಸ್ಯೆ ಉಂಟುಮಾಡುತ್ತಿª.ೆ ಈ ಹಿಂದಿನAತೆ ಜಾನುವಾರಗಳನ್ನು ದೊಡ್ಡಿಗೆ ಹಾಕಿ ಕಾನೂನು ಕ್ರಮ ಕೈಗೊಳ್ಳಿ.ಎಂದು ಸ್ಥಳೀಯ ಕೊಡವ ಸಮಾಜದಲ್ಲಿ ಜರುಗಿದ ಗ್ರಾಮ ಸಭೆಯಲ್ಲಿ ಸಾರ್ವಜನಿಕರಿಂದ ಪ್ರಶ್ನೆಗಳ ಸುರಿಮಳೆ ಆರೋಪ, ಒತ್ತಾಯಗಳು ಪ್ರತಿಧ್ವನಿಸಿತು. ವಿದ್ಯುತ್ ಸಮಸ್ಯೆ ಅಧಿಕವಾಗುತ್ತಿದೆ ಕೂಡಲೇ ವಿದ್ಯುತ್ ಸ್ಟೇಷನ್ ಗೆ ಜಾಗ ಗುರುತಿಸಿ ಸಮಸ್ಯೆ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸಭೆಯಲ್ಲಿ ಪಾಲ್ಗೊಂಡಿದ್ದ ಸಾರ್ವಜನಿಕರು ಒತ್ತಾಯಿಸಿದರು.
ಗ್ರಾಮ ಸಭೆಯಲ್ಲಿ ಪಂಚಾಯಿತಿ ಸದಸ್ಯರು ಎಲ್ಲರೂ ಹಾಜರಾಗಿಲ್ಲ. ಇಲ್ಲಿ ಇಲಾಖೆ ಸಿಬ್ಬಂದಿಗಳ ಹಾಜರಾತಿ ಹೆಚ್ಚಿದೆ. ಸರಿಯಾದ ಮಾಹಿತಿ ಇಲ್ಲದ ಕಾರಣ ೧೭ ಸಾರ್ವಜನಿಕರು ಮಾತ್ರ ಉಪಸ್ಥಿತರಿದ್ದಾರೆ ಎಂದು ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಬಿದ್ದಾಟಂಡ ರೋಜಿ ಚಿಣ್ಣಪ್ಪ ಆರೋಪಿಸಿದರು.
ನಮ್ಮ ಸಮಸ್ಯೆ ಪರಿಹರಿಸಲು ನಮ್ಮ ಇಲಾಖೆ ಅಧಿಕಾರಿಗಳು ಬಂದಿಲ್ಲ. ಅವರಿಗೆ ನಾವು ಮಾಹಿತಿ ನೀಡಿದ್ದೇವೆ. ಆದಕಾರಣ ಪಂಚಾಯಿತಿ ದಯವಿಟ್ಟು ನಮ್ಮ ಇಲಾಖೆ ಅಧಿಕಾರಿಗಳಿಗೆ ನೋಟಿಸ್ ಕಳಿಸಬೇಕು ಎಂದು ಅಂಗನವಾಡಿ ಶಿಕ್ಷಕಿ ಆಶಾಲತಾ ಒತ್ತಾಯಿಸಿದ್ದು ವಿಶೇಷವಾಗಿತ್ತು.
ಗ್ರಾಮ ಸಭೆಯಲ್ಲಿ ಪಾಲ್ಗೊಂಡಿದ್ದ ವಿವಿಧ ಇಲಾಖೆಯ ಅಧಿಕಾರಿಗಳು ತಮ್ಮ ಇಲಾಖೆಯಲ್ಲಿ ದೊರೆಯುವ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಿ ಸಾರ್ವಜನಿಕರ ಪ್ರಶ್ನೆಗಳಿಗೆ ಉತ್ತರಿಸಿದರು. ಗ್ರಾಮ ಪಂಚಾಯಿತಿ ಅಧ್ಯಕ್ಷ ವನಜಾಕ್ಷಿ ರೇಣುಕೇಶ್ ಅವರ ಅಧ್ಯಕ್ಷತೆಯಲ್ಲಿ ಜರುಗಿದ ಸಭೆಯಲ್ಲಿ ನೋಡಲ್ ಅಧಿಕಾರಿಯಾಗಿ ಮಡಿಕೇರಿ ತಾಲೂಕು ಶಿಕ್ಷಣಾಧಿಕಾರಿ ಡಾ. ದೊಡ್ಡೇಗೌಡ ಪಾಲ್ಗೊಂಡಿದ್ದರು. ಈ ಸಂದರ್ಭ ಪಿಡಿಓ ಚೋಂದಕ್ಕಿ, ಗ್ರಾಮ ಪಂಚಾಯಿತಿ ಸದಸ್ಯ ಕುಲ್ಲೇಟಿರ ಅರುಣ್ ಬೇಬ, ಗ್ರಾಮಸ್ಥರ ಪ್ರಶ್ನೆಗಳಿಗೆ ಸಮಜಾಯಿಕೆ ನೀಡಿ ಸೂಕ್ತ ಕ್ರಮ ಕೈಗೊಳ್ಳುವ ಭರವಸೆಯನ್ನು ನೀಡಿದರು.
ಗ್ರಾಮಸ್ಥರಾದ ಕೊಂಡಿರ ನಾಣಯ್ಯ , ಶಿವಚಳಿಯಂಡ ಅಂಬಿ ಕಾರ್ಯಪ್ಪ, ಕುಂಡ್ಯೋಳAಡ ವಿಶುಪೂವಯ್ಯ, ಕೇಟೋಳಿರ ಡಾಲಿ ಅಪ್ಪಚ್ಚ, ಕಲಿಯಂಡ ಹ್ಯಾರಿ ಮಂದಣ್ಣ ಸೇರಿದಂತೆ ಇನ್ನಿತರರು ಸಮಸ್ಯೆಗಳ ಬಗ್ಗೆ ಬೆಳಕು ಚೆಲ್ಲಿ ಸಲಹೆ ಸೂಚನೆಗಳನ್ನು ನೀಡಿ ಸೂಕ್ತ ಕ್ರಮಕ್ಕೆ ಆಗ್ರಹಿಸಿದರು.
ಈ ಸಂದರ್ಭ ಪಂಚಾಯಿತಿ ಉಪಾಧ್ಯಕ್ಷೆ ಕುಲ್ಲೇಟಿರ ಹೇಮಾ ಅರುಣ್, ಪಂಚಾಯಿತಿ ಸದಸ್ಯ ಪ್ರತಿನಿಧಿಗಳು, ಸಿಬ್ಬಂದಿಗಳು ಹಾಗೂ ಅಂಗನವಾಡಿ, ಆಶಾ ಹಾಗೂ ಆರೋಗ್ಯ ಕಾರ್ಯಕರ್ತರು ಸ್ವಸಹಾಯ ಸಂಘದ ಪದಾಧಿಕಾರಿಗಳು, ಸಾರ್ವಜನಿಕರು ಪಾಲ್ಗೊಂಡಿದ್ದರು.