ನಾಪೋಕ್ಲು, ಆ. ೨೫: ಕೈಲ್ ಮುಹೂರ್ತ ಹಬ್ಬದ ಕ್ರೀಡಾಕೂಟವು ನಾಪೋಕ್ಲು ಭಗವತಿ ಯುವಕ ಸಂಘದ ಆಶ್ರಯದಲ್ಲಿ ತಾ. ೨೭ ರಂದು ಮಧ್ಯಾಹ್ನ ನಡೆಯಲಿದೆ.
ನಾಪೋಕ್ಲು ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ಆಟದ ಮೈದಾನದಲ್ಲಿ ಆಯೋಜಿಸಲಾಗಿರುವ ಕ್ರೀಡಾಕೂಟದ ಸಭೆಯ ಅಧ್ಯಕ್ಷತೆಯನ್ನು ಭಗವತಿ ಯುವಕ ಸಂಘದ ಅಧ್ಯಕ್ಷ ಕುಲ್ಲೇಟಿರ ದೇವಯ್ಯ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಕುಲ್ಲೇಟಿರ ಹೇಮಾ ಅರುಣ್, ನಿವೃತ್ತ ಜೆ.ಸಿ.ಓ. ಕಂಗಾAಡ ರೋಹನ್ ಈರಪ್ಪ ಪಾಲ್ಗೊಳ್ಳಲಿದ್ದಾರೆ.
* ಸಮೀಪದ ಬೇತು ಗ್ರಾಮದ ಶ್ರೀ ಮಕ್ಕಿ ಶಾಸ್ತಾವು ಯುವಕ ಸಂಘದ ಆಶ್ರಯದಲ್ಲಿ ಕೈಲ್ ಮುಹೂರ್ತ ಹಬ್ಬದ ಪ್ರಯುಕ್ತ ತಾ.೨೭ರಂದು ಬೇತು ಸರಕಾರಿ ಮಾದರಿ ಪ್ರಾಥಮಿಕ ಶಾಲೆಯ ಮೈದಾನದಲ್ಲಿ ಆಟೋಟಗಳನ್ನು ಆಯೋಜಿಸಲಾಗಿದೆ. ಸಭೆಯ ಅಧ್ಯಕ್ಷತೆಯನ್ನು ಯೂತ್ ಕ್ಲಬ್ ಅಧ್ಯಕ್ಷ ಕಾಳೆಯಂಡ ರಿನೇಶ್ ಪೊನ್ನಪ್ಪ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ವಿವೃತ್ತ ಎಸ್ಪಿ ಬಿ. ರವಿ ಮಾಚಯ್ಯ, ಕಾಫಿ ಬೆಳೆಗಾರ ಕುಟ್ಟಂಜೆಟ್ಟಿರ ಶ್ಯಾಂ ಬೋಪಣ್ಣ ಪಾಲ್ಗೊಳ್ಳಲಿದ್ದಾರೆ.
* ಸಮೀಪದ ಬಲ್ಲಮಾವಟಿ ಗ್ರಾಮದ ಅಪೋಲೋ ಯುವಕ ಸಂಘ ಮತ್ತು ಕಾವೇರಿ ಮಹಿಳಾ ಸಮಾಜದ ಸಂಯುಕ್ತ ಆಶ್ರಯದಲ್ಲಿ ಕೈಲ್ ಮುಹೂರ್ತ ಪ್ರಯುಕ್ತ ಆಟೋಟ ತಾ.೨೭ರಂದು ನಡೆಯಲಿದೆ. ನೇತಾಜಿ ಪ್ರೌಢಶಾಲೆಯ ಆಟದ ಮೈದಾನದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ಸದಸ್ಯ ಮುಕ್ಕಾಟಿರ ಕೆ. ಸುತನ್ ಸುಬ್ಬಯ್ಯ, ಶಿಕ್ಷಕಿ ಮೂವೆರ ಕಾವೇರಮ್ಮ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ. ರಾಷ್ಟಿçÃಯ ಹಾಕಿ ತೀರ್ಪುಗಾರರಾದ ಅಪ್ಪಚೆಟ್ಟೋಳಂಡ ಬಿ. ಹರ್ಷಿತ್ ಐಯ್ಯಪ್ಪ ಅವರನ್ನು ಕಾರ್ಯಕ್ರಮದಲ್ಲಿ ಸನ್ಮಾನಿಸಲಾಗುವುದು.