ಮಡಿಕೇರಿ, ಆ. ೨೬: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಸತ್ಯ ಶೋಧನಾ ಸಮಿತಿಯ ಸದಸ್ಯರು ಕೊಡಗು ಜಿಲ್ಲಾ ಕಾಂಗ್ರೆಸ್ ಮುಖಂಡರಿAದ ಅಭಿಪ್ರಾಯ ಸಂಗ್ರಹಿಸಿದರು.

ಮಡಿಕೇರಿಯ ಖಾಸಗಿ ಹೊಟೇಲ್ ಸಭಾಂಗಣದಲ್ಲಿ ಸಮಿತಿಯ ಪ್ರಮುಖರಾದ ವಿಧಾನ ಪರಿಷತ್ ಮಾಜಿ ಸಭಾಪತಿ ವಿ. ಸುದರ್ಶನ್, ದೊಡ್ಡಬಳ್ಳಾಪುರ ಕ್ಷೇತ್ರದ ಮಾಜಿ ಶಾಸಕ ವೆಂಕಟರಮಣಯ್ಯ ಹಾಗೂ ಗ್ಯಾರಂಟಿ ಅನುಷ್ಠಾನ ಸಮಿತಿಯ ರಾಜ್ಯ ಉಪಾಧ್ಯಕ್ಷ ಸೂರಜ್ ಹೆಗ್ಡೆ ನೇತೃತ್ವದ ತಂಡ ಪ್ರತ್ಯೇಕವಾಗಿ ಮುಖಂಡರಿAದ ೨೦೨೪ ರ ಲೋಕಸಭಾ ಚುನಾವಣೆಯ ಹಿನ್ನಡೆ ಮತ್ತು ಪಕ್ಷ ಸಂಘಟನೆಯ ಕುರಿತು ಮಾಹಿತಿ ಸಂಗ್ರಹಿಸಿದರು.

ಕೊಡಗು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ತೀತಿರ ಧರ್ಮಜ ಉತ್ತಪ್ಪ, ಶಾಸಕದ್ವಯರಾದ ಎ.ಎಸ್. ಪೊನ್ನಣ್ಣ, ಡಾ. ಮಂತರ್ ಗೌಡ, ಕೊಡಗು ಮೈಸೂರು ಲೋಕಸಭಾ ಕ್ಷೇತ್ರದ ಸ್ಪರ್ಧೆ ಮಾಡಿದ್ದ ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷö್ಮಣ್, ವಿಧಾನ ಪರಿಷತ್ ಮಾಜಿ ಸದಸ್ಯೆ ವೀಣಾ ಅಚ್ಚಯ್ಯ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಕೆ.ಪಿ. ಚಂದ್ರಕಲಾ, ಹೆಚ್.ಎಸ್.ಚಂದ್ರಮೌಳಿ, ಬ್ಲಾಕ್ ಅಧ್ಯಕ್ಷರಾದ ವಿ.ಪಿ. ಶಶಿಧರ್, ಪಟ್ಟಡ ರಂಜಿ ಪೂಣಚ್ಚ, ಹಂಸ, ಸತೀಶ್ ಕುಮಾರ್, ಇಸ್ಮಾಯಿಲ್, ಮುಖಂಡರಾದ ಟಿ.ಪಿ. ರಮೇಶ್, ಹೆಚ್.ಎಂ. ನಂದಕುಮಾರ್, ಕೆ.ಎಂ. ಲೋಕೇಶ್, ಕೊಲ್ಯದ ಗಿರೀಶ್, ರಾಜೇಶ್ ಯಲ್ಲಪ್ಪ, ತೆನ್ನಿರ ಮೈನಾ, ಟಾಟು ಮೊಣ್ಣಪ್ಪ, ಯಾಕುಬ್, ಬೇಕಲ್ ರಮಾನಾಥ್, ಹನೀಫ್, ಜಯರಾಜ್ ಸೇರಿದಂತೆ ಇನ್ನಿತರರು ಹಾಜರಿದ್ದರು.