ಸುಂಟಿಕೊಪ್ಪ, ಆ. ೨೭: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಹೊಟೇಲ್ ಮುಂಭಾಗದಲ್ಲಿ ನಿಲ್ಲಿಸಿದ್ದ ೩ ಬೈಕುಗಳಿಗೆ ಡಿಕ್ಕಿ ಹೊಡೆದ ಪರಿಣಾಮ ಮೂವರಿಗೆ ಗಾಯಗೊಂಡ ಘಟನೆ ಕೊಡಗರಹಳ್ಳಿಯ ರಾಷ್ಟೀಯ ಹೆದ್ದಾರಿಯಲ್ಲಿ ಮಂಗಳವಾರ ಸಂಜೆ ಸಂಭವಿಸಿದೆ.
ಮೈಸೂರು ಕಡೆಯಿಂದ ಮಡಿಕೇರಿಯತ್ತ ಬರುತ್ತಿದ್ದ ವೈದ್ಯರೊಬ್ಬರಿಗೆ ಸೇರಿದ ಇನೋವಾ ಕ್ರಿಸ್ಟ ಕಾರು (ಕೆಎಲ್ ೧೩ಎಎನ್೨೯೯೮) ಚಾಲಕನ ನಿಯಂತ್ರಣ ತಪ್ಪಿ ಏಕಾಏಕಿ ರಸ್ತೆ ಬದಿ ನಿಲ್ಲಿಸಿದ್ದ ಬೈಕುಗಳಿಗೆ ಡಿಕ್ಕಿ ಹೊಡೆದಿದೆ.
ಡಿಕ್ಕಿಯ ರಭಸಕ್ಕೆ ರಾಮಣ್ಣ, ವಿನೋದ್ ಹಾಗೂ ಮತ್ತೋರ್ವರ ಮೂರು ದ್ವಿಚಕ್ರ ವಾಹನಗಳು ಸಂಪೂರ್ಣ ಜಖಂಗೊAಡಿದ್ದು, ರಸ್ತೆ ಬದಿಯಲ್ಲಿ ನಿಂತಿದ್ದ ಮೂವರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಸುಂಟಿಕೊಪ್ಪ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.