ಕೂಡಿಗೆ, ಆ. ೨೬: ಮಕ್ಕಳ ಪ್ರತಿಭಾ ಕಾರಂಜಿ ಸಾಂಸ್ಕೃತಿಕ ಸ್ಪರ್ಧೆಯು ಮಕ್ಕಳ ಪ್ರತಿಭೆಯನ್ನು ಅನಾವರಣಗೊಳಿಸಲು ಒಂದು ವಿನೂತನ ಕಾರ್ಯಕ್ರಮವಾ ಗಿದ್ದು, ಇದು ಶೈಕ್ಷಣಿಕ ಬಲವರ್ಧನೆಗೆ ಸಹಕಾರಿಯಾಗಿದೆ ಎಂದು ಸೋಮ ವಾರಪೇಟೆ ತಾಲೂಕು ಕ್ಷೇತ್ರ ಶಿಕ್ಷಣಾ ಧಿಕಾರಿ ಎಸ್. ಭಾಗ್ಯಮ್ಮ ಹೇಳಿದರು.

ಶಾಲಾ ಶಿಕ್ಷಣ ಇಲಾಖೆಯ ಕೂಡಿಗೆ ಕ್ಲಸ್ಟರ್ ಕೇಂದ್ರದ ವತಿಯಿಂದ ಕೂಡುಮಂಗಳೂರು ಸಮೀಪದ ಚಿಕ್ಕತ್ತೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಎಸ್‌ಡಿಎಂಸಿ, ಎಸ್.ಎಲ್.ಎನ್. ಕಾಫಿ ಪ್ರೆöÊವೇಟ್ ಲಿಮಿಟೆಡ್ ಹಾಗೂ ಸ್ಥಳೀಯ ಸಮುದಾಯದ ಸಹಭಾಗಿತ್ವದಲ್ಲಿ ಮಂಗಳವಾರ ಏರ್ಪಡಿಸಿದ್ದ ಕೂಡಿಗೆ ಕ್ಲಸ್ಟರ್ ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳ ಪ್ರತಿಭಾ ಕಾರಂಜಿ ಸಾಂಸ್ಕೃತಿಕ ಸ್ಪರ್ಧಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಹಾಗೂ ಪೋಷಕರನ್ನು ಉದ್ದೇಶಿಸಿ ಮಾತನಾಡಿದರು.

ಪ್ರತಿಭಾ ಕಾರಂಜಿ ಸ್ಪರ್ಧೆಯು ಮಕ್ಕಳಲ್ಲಿ ಶಿಕ್ಷಣ, ಮನರಂಜನೆ ಹಾಗೂ ಅಭಿವೃದ್ಧಿಗೆ ಉತ್ತೇಜಿಸುವುದರೊಂದಿಗೆ ಮಕ್ಕಳಲ್ಲಿನ ಗುಪ್ತ ಪ್ರತಿಭೆಯನ್ನು ಹೊರತರುತ್ತದೆ. ವಿದ್ಯಾರ್ಥಿಗಳ ಕಲಿಕೆಗೆ ಹಾಗೂ ಹೊಸದಾದ ಜೀವನ ಕೌಶಲ್ಯವನ್ನು ಹೊಂದಲು ವೇದಿಕೆಯಾಗಿದೆ ಎಂದರು.

ಸ್ಪರ್ಧಾ ಕಾರ್ಯಕ್ರಮ ಉದ್ಘಾಟಿಸಿದ ಕ್ಷೇತ್ರ ಸಂಪನ್ಮೂಲ ಕೇಂದ್ರದ ಎಂ.ವಿ. ಮಂಜೇಶ್ ಮಾತನಾಡಿ, ಮಕ್ಕಳಲ್ಲಿ ಉತ್ತಮ ಪ್ರತಿಭೆಯನ್ನು ಅನಾವರಣಗೊಳಿಸಲು ಉತ್ತಮ ವೇದಿಕೆ ಕಲ್ಪಿಸುವ ಮಕ್ಕಳ ಇಂತಹ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಶಿಕ್ಷಕರೊಂದಿಗೆ ಪೋಷಕರು ಹೆಚ್ಚಿನ ಪ್ರೋತ್ಸಾಹ ನೀಡಬೇಕು ಎಂದರು.

ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಟಿ.ಕೆ. ಬಸವರಾಜ್ ಮಾತನಾಡಿ, ಸ್ಥಳೀಯ ಜನರ ಸಹಭಾಗಿತ್ವದಲ್ಲಿ ಮಕ್ಕಳ ಕಾರ್ಯಕ್ರಮವನ್ನು ಉತ್ತಮವಾಗಿ ಸಂಘಟಿಸಿರುವುದನ್ನು ಶ್ಲಾಘಿಸಿದರು.

ಸಿಆರ್‌ಪಿಕೆ ಶಾಂತಕುಮಾರ್, ಮಕ್ಕಳ ಪ್ರತಿಭೆಯ ಸ್ಪರ್ಧೆಗಳ ಕುರಿತು ಮಾಹಿತಿ ನೀಡಿದರು. ಶಾಲಾ ಎಸ್‌ಡಿಎಂಸಿ ಅಧ್ಯಕ್ಷ ಎಸ್.ಎ. ಹರೀಶ್ ಅಧ್ಯಕ್ಷತೆ ವಹಿಸಿದ್ದರು. ಶಾಲಾ ಮುಖ್ಯ ಶಿಕ್ಷಕಿ ಎಚ್.ಆರ್. ಶಶಿಕಲಾ, ಶಿಕ್ಷಕರ ಸಂಘಟನೆಯ ಪ್ರಮುಖರಾದ ಎಸ್.ಎ.ಯೋಗೇಶ್, ಎಚ್.ಎಸ್.ಉಮಾದೇವಿ, ಎಸ್‌ಡಿಎಂಸಿ ಉಪಾಧ್ಯಕ್ಷ , ಸದಸ್ಯರಾದ ಜ್ಯೋತಿ ಪ್ರಕಾಶ್, ನಾಗೇಂದ್ರ, ಶಿವಕುಮಾರ್, ಅರುಣ, ಜಯಮ್ಮ, ನಿವೃತ್ತ ಶಿಕ್ಷಕರಾದ ಸಿ.ಎಂ. ಸುಲೋಚನ, ಎಚ್.ಟಿ. ವಸಂತ, ತಮ್ಮಯ್ಯ, ಸಿ.ಆರ್.ಪಿ.ಗಳಾದ ಟಿ.ಈ. ವಿಶ್ವನಾಥ ಸುಂಟಿಕೊಪ್ಪ, ಸೀಮಾ, ಹೆಬ್ಬಾಲೆ ಆದರ್ಶ್ ಸೇರಿದಂತೆ ಕ್ಲಸ್ಟರ್ ವ್ಯಾಪ್ತಿಯ ವಿವಿಧ ಶಾಲೆಗಳ ಶಿಕ್ಷಕರು, ಗ್ರಾಮಸ್ಥರು ಪಾಲ್ಗೊಂಡಿದ್ದರು.

ಅನಾವರಣಗೊAಡ ಮಕ್ಕಳ ಪ್ರತಿಭಾ ಪ್ರದರ್ಶನ. ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಅನಾವರಣಗೊಂಡ ಮಕ್ಕಳ ಪ್ರತಿಭಾ ಪ್ರದರ್ಶನ ಪ್ರೇಕ್ಷಕರ ಗಮನ ಸೆಳೆಯಿತು.

ಮಕ್ಕಳು ವಿವಿಧ ವೈಯಕ್ತಿಕ ಹಾಗೂ ಗುಂಪು ಸ್ಪರ್ಧೆಗಳಲ್ಲಿ ಭಾಗವಹಿಸಿ ಉತ್ತಮ ಪ್ರದರ್ಶನ ನೀಡಿದ ಮಕ್ಕಳಿಗೆ ಬಹುಮಾನ ನೀಡಿ ಗೌರವಿಸಲಾಯಿತು. ಮಕ್ಕಳು ಕಂಠಪಾಠ, ಧಾರ್ಮಿಕ ಪಠಣ, ಛದ್ಮವೇಷ ಸ್ಪರ್ಧೆ, ರಸಪ್ರಶ್ನೆ, ರಂಗೋಲಿ, ಜಾನಪದ ಗೀತೆ, ಕವ್ವಾಲಿ, ಕ್ಲೇ ಮಾಡಲಿಂಗ್, ಭಾಷಣ ಮತ್ತು ಪ್ರಬಂಧ ಸ್ಪರ್ಧೆ ಸೇರಿದಂತೆ ಮುಂತಾದ ಸ್ಪರ್ಧೆಗಳಲ್ಲಿ ಭಾಗವಹಿಸಿ ಪ್ರತಿಭೆ ಅನಾವರಣಗೊಳಿಸಿದರು.