ಉಗ್ರರ ಅಟ್ಟಹಾಸ - ೩೧ ಪ್ರಯಾಣಿಕರ ಸಾವು
ಇಸ್ಲಾಮಾಬಾದ್, ಆ. ೨೬: ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ ಮತ್ತೆ ಉಗ್ರರು ಅಟ್ಟಹಾಸ ಮೆರೆದಿದ್ದು ಗುರುತಿನ ಚೀಟಿ ತಪಾಸಣೆ ನೆಪದಲ್ಲಿ ಬಸ್ನಲ್ಲಿದ್ದ ಪ್ರಯಾಣಿಕರ ಇಳಿಸಿ ಗುಂಡಿನ ದಾಳಿ ನಡೆಸಿ ೩೧ ಮಂದಿಯನ್ನು ಕೊಂದು ಹಾಕಿದ್ದಾರೆ. ಪಾಕಿಸ್ತಾನದ ಬಲೂಚಿಸ್ತಾನದ ರಾರಶಮ್ ಜಿಲ್ಲೆಯಲ್ಲಿ ಈ ಘಟನೆ ವರದಿಯಾಗಿದ್ದು, ಬಸ್ ನಿಲ್ಲಿಸಿ ಗುರುತಿನ ಚೀಟಿ ತಪಾಸಣೆ ನೆಪದಲ್ಲಿ ಪ್ರಯಾಣಿಕರನ್ನು ಬಸ್ಸಿನಿಂದ ಕೆಳಗಿಳಿಸಿದ ಬಂದೂಕುಧಾರಿಗಳು ೩೧ ಪ್ರಯಾಣಿಕರನ್ನು ಕೊಲೆ ಮಾಡಿದ್ದಾರೆ. ಆಕ್ರಮಣಕಾರರು ಅಂತರ-ಪ್ರಾAತೀಯ ಬಸ್ಗಳು ಮತ್ತು ಟ್ರಕ್ಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿದ್ದು, ಶಸ್ತçಸಜ್ಜಿತ ಪುರುಷರು ಹೆದ್ದಾರಿಯನ್ನು ತಡೆದು, ವಾಹನಗಳನ್ನು ಅಡ್ಡಿಪಡಿಸಿ ಪ್ರಯಾಣಿಕರನ್ನು ಕೆಳಗಿಳಿಸಿ ಗುರುತಿನ ಚೀಟಿ ತಪಾಸಣೆ ಮಾಡಿ ಗುಂಡಿಟ್ಟು ಪ್ರಯಾಣಿಕರನ್ನು ಕೊಂದು ಹಾಕಿದ್ದಾರೆ. ಅಲ್ಲದೆ ಹತ್ಯೆಯ ನಂತರ, ದಾಳಿಕೋರರು ಸ್ಥಳದಿಂದ ಪಲಾಯನ ಮಾಡುವ ಮೊದಲು ಹತ್ತು ವಾಹನಗಳಿಗೆ ಬೆಂಕಿ ಹಚ್ಚಿದ್ದಾರೆ. ದಾಳಿಯನ್ನು ಭಯೋತ್ಪಾದಕ ಕೃತ್ಯ ಎಂದು ಬಲೂಚಿಸ್ತಾನ ಮುಖ್ಯಮಂತ್ರಿ ಸರ್ಫರಾಜ್ ಬುಗ್ತಿ ಕರೆದಿದ್ದು, ಸೂಕ್ತ ಕ್ರಮದ ಎಚ್ಚರಿಕೆ ನೀಡಿದ್ದಾರೆ.
ದರ್ಶನ್ಗೆ ರಾಜಾತಿಥ್ಯ : ಸ್ಥಳಾಂತರಕ್ಕೆ ಸೂಚನೆ
ಬೆಂಗಳೂರು, ಆ. ೨೬: ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ಆರೋಪಿ ದರ್ಶನ್ಗೆ ರಾಜಾತಿಥ್ಯ ನೀಡುತ್ತಿರುವ ವಿಚಾರ ಎಲ್ಲೆಡೆ ಚರ್ಚೆಗೆ ಗ್ರಾಸವಾಗಿದ್ದು. ಜೈಲಿನ ಅವ್ಯವಸ್ಥೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೆಂಡಾಮAಡಲಗೊAಡಿದ್ದಾರೆ. ಪ್ರಸ್ತುತ ಬೆಳವಣಿಗೆಯನ್ನು ಗಂಭೀರವಾಗಿ ಪರಿಗಣಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಇದಕ್ಕೆ ಕಾರಣರಾದ ಅಧಿಕಾರಿಗಳನ್ನು ಕೂಡಲೇ ಅಮಾನತು ಮಾಡುವಂತೆ ಹಾಗೂ ದರ್ಶನ್ ಮತ್ತು ಅವರ ಸಹಚರರನ್ನು ರಾಜ್ಯದ ವಿವಿಧ ಜೈಲುಗಳಿಗೆ ಸ್ಥಳಾಂತರಿಸುವAತೆ ಸೂಚನೆ ನೀಡಿದ್ದಾರೆ. ಅಲ್ಲದೆ, ಕಾರಾಗೃಹಕ್ಕೆ ಭೇಟಿ ನೀಡಿ ವರದಿ ಸಲ್ಲಿಸುವಂತೆ ಡಿಜಿಪಿಗೂ ಸೂಚಿಸಿದ್ದಾರೆ.
ಪರಪ್ಪನ ಅಗ್ರಹಾರದ ೭ ಅಧಿಕಾರಿಗಳ ಅಮಾನತು
ಬೆಂಗಳೂರು, ಆ. ೨೬: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಅವರಿಗೆ ರಾಜಾತಿಥ್ಯ ನೀಡಲಾಗುತ್ತಿದ್ದು, ಈ ಕುರಿತ ಫೋಟೋಗಳು ವೈರಲ್ ಆದ ಬೆನ್ನಲ್ಲೇ ಪರಪ್ಪನ ಅಗ್ರಹಾರದ ೭ ಅಧಿಕಾರಿಗಳನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ. ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಪರಮೇಶ್ವರ್ ಅವರು, ರಾಜ್ಯದ ಎಲ್ಲಾ ಜೈಲುಗಳಲ್ಲಿ ಸಿಸಿಟಿವಿ, ಜಾಮರ್ ಅಳವಡಿಸಲಾಗಿದೆ. ಹೀಗಿದ್ದರೂ ಇಂತಹ ಘಟನೆಗಳು ನಡೆಯುತ್ತವೆ ಎಂದಾದರೆ ಅಧಿಕಾರಿಗಳು ಕಟ್ಟುನಿಟ್ಟಾಗಿ ಕೆಲಸ ಮಾಡಬೇಕಾಗಿದೆ. ಇಂತಹ ಘಟನೆಗಳಿಗೆ ಕಾರಣರಾದವರ ವಿರುದ್ಧ ಕ್ರಮ ಕೈಗೊಂಡು, ಇಂತಹ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ವಹಿಸಲಾಗುವುದು ಎಂದು ಹೇಳಿದರು. ಪ್ರಸ್ತುತದ ಬೆಳವಣಿಗೆ ಸಂಬAಧ ೭ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. ಜೈಲರ್ ಶರಣಬಸವ ಅಮೀನಗಡ, ಪ್ರಭು ಎಸ್ ಕಂದೇವಾಲ್, ತಿಪ್ಪೇಸ್ವಾಮಿ, ಶ್ರೀಕಾಂತ್, ವೆಂಕಪ್ಪ ಕೊರ್ತಿ, ಸಂಪತ್ ಕುಮಾರ್ ಕಡಪಟ್ಟಿ, ಬಸಪ್ಪ ತೇಲಿ ಅಮಾನತುಗೊಂಡವರು.
ಕೆಪಿಎಸ್ಸಿ ಪರೀಕ್ಷೆ ಮುಂದೂಡಿಕೆ ಇಲ್ಲ
ಬೆಂಗಳೂರು, ಆ. ೨೬: ಕೆಪಿಎಸ್ಸಿ ಗೆಜೆಟೆಡ್ ಪ್ರೊಬೇಷನರ್ಸ್ ಪರೀಕ್ಷೆ ಮುಂದೂಡಬೇಕೆAಬ ಬೇಡಿಕೆಯನ್ನು ರಾಜ್ಯ ಸರ್ಕಾರ ತಿರಸ್ಕರಿಸಿದ್ದು, ತಾ. ೨೭ ರಂದೆ (ಇಂದು) ಪರೀಕ್ಷೆ ನಡೆಸುವುದಾಗಿ ಹೇಳಿದೆ. ಈ ಕುರಿತು ಸುದೀರ್ಘ ಪತ್ರಿಕಾ ಹೇಳಿಕೆ ನೀಡಿರುವ ಮುಖ್ಯಮಂತ್ರಿಗಳ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್ ಅವರು, ಕೆಪಿಎಸ್ಸಿ ಮೂಲಕ ಆಗಸ್ಟ್ ೨೭ರಂದು ನಿಗದಿಪಡಿಸಿರುವ ಗೆಜೆಟೆಡ್ ಪ್ರೊಬೇಷನರ್ಸ್ ಪರೀಕ್ಷೆಯನ್ನು ಮುಂದೂಡಲು ಆಗ್ರÀ್ರಹಿಸಿ ಕೆಎಎಸ್ ಆಕಾಂಕ್ಷಿಗಳ ಸಣ್ಣ ಗುಂಪೊAದು ಲಾಬಿ ನಡೆಸುತ್ತಿದೆ. ಈಗಾಗಲೇ ಸಾಕಷ್ಟು ಕಾಲಾವಕಾಶ ನೀಡಿದ್ದು, ನಿಗದಿತ ದಿನದಂದೇ ಪರೀಕ್ಷೆ ನಡೆಸಲು ಆಯೋಗ ನಿರ್ಧಾರ ತೆಗೆದುಕೊಂಡಿದೆ ಎಂದು ಸ್ಪಷ್ಟಪಡಿಸಿದ್ದಾರೆ.
ವಯನಾಡ್ : ಸ್ಥಳಾಂತರಗೊAಡ ಸಂತ್ರಸ್ತರು
ವಯನಾಡ್, ಆ. ೨೬: ಕೇರಳದ ವಯನಾಡ್ ಜಿಲ್ಲೆಯ ಮುಂಡಕ್ಕೆ, ಚೂರಲ್ಮಲ ಹಾಗೂ ಪುಂಜಿರಿಮಟ್ಟAನಲ್ಲಿ ನಡೆದ ಭಾರಿ ಭೂಕುಸಿತದಿಂದಾಗಿ ನಿರಾಶ್ರಿತರಾಗಿದ್ದ ೨ ಸಾವಿರಕ್ಕೂ ಅಧಿಕ ಮಂದಿಯನ್ನು ಕಾಳಜಿ ಕೇಂದ್ರಗಳಿAದ ಸ್ಥಳಾಂತರಿಸಲಾಗಿದೆ. ಕೆಲವರು ಸಂಬAಧಿಕರ ಮನೆಗೆ ತೆರಳಿದರೆ, ಇನ್ನು ಕೆಲವರು ಸರ್ಕಾರ ವ್ಯವಸ್ಥೆ ಮಾಡಿರುವ ಬಾಡಿಗೆ ಮನೆಗೆ ತೆರಳಿದ್ದಾರೆ. ಕಾಳಜಿ ಕೇಂದ್ರಗಳಾಗಿದ್ದ ಶಾಲೆಗಳಲ್ಲಿ ಮಂಗಳವಾರದಿAದ ತರಗತಿಗಳು ಅರಂಭವಾಗಲಿದೆ. ಭೂಕುಸಿತ ಸಂತ್ರಸ್ತರಿಗೆ ಪುನರ್ವಸತಿ ಕಲ್ಪಿಸುವ ಪ್ರಕ್ರಿಯೆ ಶನಿವಾರ ಪೂರ್ಣಗೊಂಡಿದೆ ಎಂದು ಸರ್ಕಾರ ಹೇಳಿದೆ. ಕಾಳಜಿ ಕೇಂದ್ರದಲ್ಲಿದ್ದ ೭೨೮ ಕುಟುಂಬಗಳನ್ನು ಬಾಡಿಗೆ ಮನೆಗಳಿಗೆ ಸ್ಥಳಾಂತರಿಸಲಾಗಿದೆ. ೨,೫೬೯ ಮಂದಿ ಸರ್ಕಾರದ ವಿವಿಧ ವಸತಿ ಸಮುಚ್ಚಯ ಹಾಗೂ ಇತರೆ ಬಾಡಿಗೆ ಮನೆಗಳಿಗೆ ತೆರಳಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ದುರಂತ ನಡೆದ ಸ್ಥಳದಲ್ಲಿ ಕಾಣೆಯಾದವರ ಪತ್ತೆಗೆ ಸೋಮವಾರದಿಂದ ಕಾರ್ಯಾಚರಣೆ ಆರಂಭವಾಗಿದೆ. ಪುನರ್ವಸತಿ ಕಲ್ಪಿಸಿರುವ ಬಗ್ಗೆ ಪರಿಶೀಲನೆ ನಡೆಸಲು ಕೇಂದ್ರ ಸರ್ಕಾರದ ತಂಡವೊAದು ಆಗಮಿಸುವ ಸಾಧ್ಯತೆಯೂ ಇದೆ. ಭೂಕುಸಿತ ಸಂತ್ರಸ್ತರಿಗೆ ಪುನರ್ವಸತಿ ಕಲ್ಪಿಸುವ ಬಗ್ಗೆ ಚರ್ಚೆ ಮಾಡಲು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಆಗಸ್ಟ್ ೨೯ರಂದು ಸರ್ವಪಕ್ಷ ಸಭೆ ಕರೆದಿದ್ದಾರೆ.
೧೨ ಮನೆಗಳಿಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಅಗರ್ತಲಾ, ಆ. ೨೬: ಪಶ್ಚಿಮ ತ್ರಿಪುರಾದ ರಾಣಿಬಜಾರ್ ಪ್ರದೇಶದ ದೇವಸ್ಥಾನವೊಂದರಲ್ಲಿ ವಿಗ್ರಹವನ್ನು ವಿರೂಪಗೊಳಿಸಲಾಗಿದ್ದು, ಈ ಸುದ್ದಿ ಹರಡಿದ ಬಳಿಕ ಅಪರಿಚಿತ ವ್ಯಕ್ತಿಗಳು ಕನಿಷ್ಟ ೧೨ ಮನೆಗಳು ಮತ್ತು ಕೆಲವು ವಾಹನಗಳಿಗೆ ಬೆಂಕಿ ಹಚ್ಚಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಜಿರಾನಿಯಾ ಉಪವಿಭಾಗದಲ್ಲಿ ಈ ಘಟನೆ ನಡೆದಿದೆ. ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಹೀಗಾಗಿ ಈ ಪ್ರದೇಶದಲ್ಲಿ ನಿಷೇದಾಜ್ಞೆ ಹೇರಲಾಗಿದೆ. ಕಾಳಿ ದೇವಿಯ ವಿಗ್ರಹ ವಿರೂಪಗೊಂಡಿದೆ. ಬಳಿಕ ಭಾನುವಾರ ತಡರಾತ್ರಿ ರಾಣಿರ್ಬಜಾರ್ನಲ್ಲಿ ಸುಮಾರು ೧೨ ಮನೆಗಳಿಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದಾರೆ. ಕೆಲವು ಬೈಕ್ಗಳು ಮತ್ತು ಪಿಕ್- ಅಪ್ ವ್ಯಾನ್ಗಳು ಬೆಂಕಿಯಲ್ಲಿ ಸುಟ್ಟುಹೋಗಿವೆ ಎಂದು ಪೊಲೀಸ್ ಅಧಿಕಾರಿ ಅನಂತ ದಾಸ್ ತಿಳಿಸಿದ್ದಾರೆ. ಘಟನೆಯಲ್ಲಿ ಯಾವುದೇ ಸಾವು ನೋವು ಸಂಭವಿಸಿಲ್ಲ. ಉದ್ರಿಕ್ತ ಗುಂಪನ್ನು ನೋಡಿದ ನಿವಾಸಿಗಳು ತಮ್ಮ ವಾಸಸ್ಥಳದಿಂದ ಓಡಿಹೋದರು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಉದ್ವಿಗ್ನತೆಯನ್ನು ಶಮನಗೊಳಿಸಲು ಭದ್ರತಾ ಪಡೆಗಳನ್ನು ನಿಯೋಜಿಸಲಾಗಿದೆ ಎಂದು ಅನಂತ ದಾಸ್ ತಿಳಿಸಿದ್ದಾರೆ.
ಸಂಸದ ವಸಂತ ಚವ್ಹಾಣ್ ವಿಧಿವಶ
ನಾಂದೇಡ್, ಆ. ೨೬: ಅನಾರೋಗ್ಯದಿಂದ ಬಳಲುತ್ತಿದ್ದ ಮಹಾರಾಷ್ಟçದ ನಾಂದೇಡ್ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಸಂಸದ ವಸಂತ ಚವ್ಹಾಣ್ (೬೯) ಅವರು ಹೈದರಾಬಾದ್ನ ಖಾಸಗಿ ಆಸ್ಪತ್ರೆಯಲ್ಲಿ ಸೋಮವಾರ ನಿಧನರಾದರು. ಕಳೆದೊಂದು ವಾರದಿಂದ ಮೂತ್ರಪಿಂಡದ ಸಮಸ್ಯೆಗೆ ಚಿಕಿತ್ಸೆ ಪಡೆಯುತ್ತಿದ್ದ ಚವಾಣ್ ಅವರು ಚಿಕಿತ್ಸೆ ಫಲಕಾರಿಯಾಗದೆ ಇಂದು ನಿಧನರಾಗಿದ್ದಾರೆ. ೨೦೨೪ ರಲ್ಲಿ ಮರಾಠವಾಡ ಪ್ರದೇಶದ ನಾಂದೇಡ್ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಪ್ರಬಲ ನಾಯಕ ಮತ್ತು ಹಾಲಿ ಸಂಸದರಾಗಿದ್ದ ಪ್ರತಾಪ್ ಪಾಟೀಲ್ ಚಿಖ್ಲಿಕರ್ ಅವರನ್ನು ಸೋಲಿಸುವ ಮೂಲಕ ರಾಜಕೀಯ ಜೀವನದಲ್ಲಿ ಮೊದಲ ಬಾರಿಗೆ ಲೋಕಸಭೆ ಪ್ರವೇಶಿಸಿದ್ದರು.