ಬಳ್ಳಾರಿ ಜೈಲಿಗೆ ನಟ ದರ್ಶನ್ ಸ್ಥಳಾಂತರಕ್ಕೆ ಕೋರ್ಟ್ ಅನುಮತಿ
ಬೆಂಗಳೂರು, ಆ. ೨೭: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹ ಜೈಲಿನಲ್ಲಿ ನಟ ದರ್ಶನ್ಗೆ ರಾಜಾತಿಥ್ಯ ಫೋಟೋ ವೈರಲ್ ಆದ ಬೆನ್ನಲ್ಲೇ ಇದೀಗ ನಟನಿಗೆ ಸಂಕಷ್ಟ ಎದುರಾಗಿದೆ. ಹೌದು ದರ್ಶನ್ರನ್ನು ಪರಪ್ಪನ ಅಗ್ರಹಾರ ಜೈಲಿನಿಂದ ಬಳ್ಳಾರಿ ಜೈಲಿಗೆ ಸ್ಥಳಾಂತರಿಸುವAತೆ ಕೋರ್ಟ್ ಆದೇಶ ನೀಡಿದೆ. ನಟ ದರ್ಶನ್ ಸೇರಿದಂತೆ ರೇಣುಕಾಸ್ವಾಮಿ ಕೊಲೆ ಪ್ರಕರಣದ ಹಲವು ಆರೋಪಿಗಳನ್ನು ಸಹ ಇದೀಗ ಬೇರೆ ಬೇರೇ ಜೈಲಿಗೆ ಸ್ಥಳಾಂತರಿಸುವAತೆ ಬೆಂಗಳೂರಿನ ೨೪ನೇ ಎಸಿಎಂಎA ಕೋರ್ಟ್ ಆದೇಶಿಸಿದೆ. ಅದರಂತೆ ದರ್ಶನ್ ರನ್ನು ಬಳ್ಳಾರಿ ಜೈಲಿಗೆ ಸ್ಥಳಾಂತರಿಸಲಾಗುತ್ತದೆ. ದರ್ಶನ್ ಶಿಫ್ಟ್ ಆಗಲಿರುವ ಬಳ್ಳಾರಿ ಜೈಲಿನಲ್ಲಿ ವೀಡಿಯೋ ಕಾನ್ಫರೆನ್ಸ್ ವ್ಯವಸ್ಥೆ ಇದೆ. ಹೀಗಾಗಿ ಮುಂದೆ ನ್ಯಾಯಾಲಯದ ವಿಚಾರಣೆಗಳಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಒಳಪಡಿಸಲಾಗುತ್ತದೆ. ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿನ ಪವನ್, ರಾಘವೇಂದ್ರ, ನಂದೀಶ್ ಮೈಸೂರು ಜೈಲಿಗೆ ಶಿಫ್ಟ್ ಆಗಬೇಕಿದೆ. ಜಗದೀಶ್, ಲಕ್ಷ್ಮಣ ಶಿವಮೊಗ್ಗ ಜೈಲು, ಧನರಾಜ್ಗೆ ಧಾರವಾಡ ಜೈಲು ಗತಿಯಾಗಿದೆ. ವಿಜಯಪುರ ಜೈಲಿಗೆ ವಿನಯ್ ಸ್ಥಳಾಂತರ ಆಗಬೇಕಿದೆ. ನಾಗರಾಜ್ ಕಲಬುರಗಿ ಜೈಲು, ಪ್ರದೂಶ್ ಬೆಳಗಾವಿ ಜೈಲಿಗೆ ಶಿಫ್ಟ್ ಆಗಲಿದ್ದಾರೆ. ಇನ್ನುಳಿದ ಆರೋಪಿಗಳಾದ ಪವಿತ್ರಾ ಗೌಡ, ಅನುಕುಮಾರ್, ದೀಪಕ್ ಪರಪ್ಪನ ಅಗ್ರಹಾರದಲ್ಲೇ ಇರಲಿದ್ದಾರೆ. ಅದಾಗಲೇ ಆರೋಪಿಗಳಾದ ರವಿ, ಕಾರ್ತಿಕ್, ನಿಕಿಲ್, ಕೇಶವಮೂರ್ತಿ ತುಮಕೂರು ಜೈಲಿನಲ್ಲಿದ್ದಾರೆ. ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬAಧ ಜೈಲು ಸೇರಿಸುವ ನಟ ದರ್ಶನ್ ಸ್ವಾತಂತ್ರ್ಯ ಹೋರಾಟಗಾರನಲ್ಲ. ಕೊಲೆ ಮಾಡಿ ಜೈಲು ಸೇರಿರುವ ಕ್ರಿಮಿನಲ್. ಆತನಿಗೆ ರಾಜೋಪಚಾರ ಮಾಡಬಾರದು ಎಂದು ವಿಧಾನಪರಿಷತ್ ಸದಸ್ಯ ಹೆಚ್. ವಿಶ್ವನಾಥ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪ್ರತಿಭಟನಾಕಾರರ ಮೇಲೆ ಲಾಠಿ ಚಾರ್ಜ್ ಖಂಡಿಸಿ ಬಂದ್ಗೆ ಬಿಜೆಪಿ ಕರೆ
ಕೋಲ್ಕತ್ತಾ, ಆ. ೨೭: ‘ನಬಣ್ಣ ಅಭಿಜನ್’ ರ್ಯಾಲಿಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರ ಮೇಲೆ ಲಾಠಿಚಾರ್ಜ್ ನಡೆಸಿದ ಪೊಲೀಸರ ಕ್ರಮ ಖಂಡಿಸಿ ಪ್ರತಿಪಕ್ಷ ಬಿಜೆಪಿ ಬುಧವಾರ ೧೨ ಗಂಟೆಗಳ ಕಾಲ ಪಶ್ಚಿಮ ಬಂಗಾಳ ಬಂದ್ಗೆ ಕರೆ ನೀಡಿದೆ. ವೈದ್ಯೆಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಸಂಬAಧ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ರಾಜೀನಾಮೆಗೆ ಆಗ್ರಹಿಸಿ ಇಂದು ನಡೆದ ಪ್ರತಿಭಟನೆ ಹಿಂಸಾರೂಪಕ್ಕೆ ತಿರುಗಿದ್ದು, ಪ್ರತಿಭಟನಕಾರರು ಮತ್ತು ಪೊಲೀಸರ ನಡುವೆ ತೀವ್ರ ಘರ್ಷಣೆ ನಡೆದಿದೆ. ಪ್ರತಿಭಟನಾಕಾರರನ್ನು ಚದುರಿಸಲು ಪೊಲೀಸರು ಲಾಠಿ ಚಾರ್ಜ್, ಅಶ್ರುವಾಯು ಹಾಗೂ ಜಲಫಿರಂಗಿಗಳನ್ನು ಪ್ರಯೋಗಿಸಿದ್ದಾರೆ. ಈ ನಿರಂಕುಶ ಆಡಳಿತವು ಜನರ ನೋವಿಗೆ ಸ್ಪಂದಿಸುತ್ತಿಲ್ಲ. ಹೀಗಾಗಿ ನಾವು ಸಾರ್ವತ್ರಿಕ ಮುಷ್ಕರಕ್ಕೆ ಕರೆ ನೀಡಬೇಕಾಗಿದೆ. ಮೃತ ವೈದ್ಯ ಸಹೋದರಿಯ ನ್ಯಾಯಕ್ಕಾಗಿ ಧ್ವನಿ ಎತ್ತಬೇಕಾಗಿದೆ. ನ್ಯಾಯ ಒದಗಿಸುವ ಬದಲು, ಮಮತಾ ಬ್ಯಾನರ್ಜಿ ಅವರ ಪೊಲೀಸರು ರಾಜ್ಯದ ಶಾಂತಿಪ್ರಿಯ ಜನರ ಮೇಲೆ ಲಾಠಿ ಚಾರ್ಜ್ ಮಾಡುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಸುಕಾಂತ ಮಜುಂದಾರ್ ಅವರು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಬೆಳಿಗ್ಗೆ ೬ ರಿಂದ ಸಂಜೆ ೬ ರವರೆಗೆ ನಡೆಯಲಿರುವ ಸಾರ್ವತ್ರಿಕ ಮುಷ್ಕರದಲ್ಲಿ ಎಲ್ಲರೂ ಭಾಗವಹಿಸುವಂತೆ ಪಶ್ಚಿಮ ಬಂಗಾಳ ಜನತೆಗೆ ಮಜುಂದಾರ್ ಮನವಿ ಮಾಡಿದ್ದಾರೆ.
ಶಾಲೆಯ ಛಾವಣಿ ಕುಸಿದು ನಾಲ್ವರು ವಿದ್ಯಾರ್ಥಿಗಳಿಗೆ ಗಾಯ
ಮಂಗಳೂರು, ಆ. ೨೭: ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕುಂತೂರಿನಲ್ಲಿ ಮಂಗಳವಾರ ಸರ್ಕಾರಿ ಶಾಲೆಯ ಮೇಲ್ಛಾವಣಿ ಕುಸಿದು ನಾಲ್ವರು ಮಕ್ಕಳು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ತರಗತಿ ನಡೆಯುತ್ತಿರುವಾಗಲೇ ಶಾಲೆಯ ಛಾವಣಿ ಕುಸಿದು ನಾಲ್ವರು ಮಕ್ಕಳು ಗಾಯಗೊಂಡಿದ್ದಾರೆ. ಈ ವೇಳೆ ಹಲವು ಮಕ್ಕಳು ಮೈದಾನದಲ್ಲಿ ಆಟವಾಡುತ್ತಿದ್ದರು ಎಂದು ಅಧಿಕಾರಿಗಳು ಹೇಳಿದ್ದಾರೆ. ಕಟ್ಟಡದ ದುರಸ್ತಿ ಕಾರ್ಯ ನಡೆಯುತ್ತಿದ್ದು, ಕಾಮಗಾರಿ ನಡೆಯುತ್ತಿರುವಾಗಲೇ ಮೇಲ್ಛಾವಣಿ ಕುಸಿದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಗಾಯಗೊಂಡ ವಿದ್ಯಾರ್ಥಿಗಳನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನು ದುರಸ್ತಿ ಕಾರ್ಯ ನಡೆಯುತ್ತಿದ್ದ ಕಟ್ಟಡದೊಳಗೆ ವಿದ್ಯಾರ್ಥಿಗಳನ್ನು ಕೂರಿಸಿದ ಶಿಕ್ಷಕರ ಬೇಜವಾಬ್ದಾರಿತನಕ್ಕೆ ಪೋಷಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಪೋಷಕರು ಪುತ್ತೂರು ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೂ ದೂರು ನೀಡಿದ್ದಾರೆ.
ಅಕ್ಕ ವಿಶ್ವ ಕನ್ನಡ ಸಮ್ಮೇಳನಕ್ಕೆ ಸಭಾಪತಿ ಬಸವರಾಜ ಹೊರಟ್ಟಿ
ಬೆಂಗಳೂರು, ಆ. ೨೭: ಅಮೇರಿಕಾದ ವರ್ಜೀನಿಯಾದ ರಿಚ್ಮಂಡ್ನಲ್ಲಿ ತಾ. ೩೦ ರಿಂದ ಸೆಪ್ಟೆಂಬರ್ ೧ ರವರೆಗೆ ನಡೆಯಲಿರುವ ೧೨ನೇ ಅಕ್ಕ ವಿಶ್ವ ಕನ್ನಡ ಸಮ್ಮೇಳನದಲ್ಲಿ ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ ಪಾಲ್ಗೊಳ್ಳಲಿದ್ದಾರೆ. ಗ್ರೇಟರ್ ರಿಚ್ಮಂಡ್ ಕನ್ವೆನ್ಷನ್ ಸೆಂಟರ್ನಲ್ಲಿ ಸಮ್ಮೇಳನ ನಡೆಯಲಿದ್ದು ಬಸವರಾಜ ಹೊರಟ್ಟಿ ಅವರು ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಅಮೇರಿಕಾ ಸೇರಿದಂತೆ ಸುತ್ತಲಿನ ದೇಶಗಳಲ್ಲಿ ವಾಸಿಸುವ ಕನ್ನಡಿಗರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಕನ್ನಡ ನಾಡು, ನುಡಿ, ಭಾಷಾ ಬೆಳವಣಿಗೆ, ಕನ್ನಡದ ಅಸ್ಮಿತೆ, ಕನ್ನಡ ಭಾಷೆಯ ಪ್ರಚಾರಕ್ಕೆ ಕೈಗೊಳ್ಳಬೇಕಾದ ಇಂದಿನ ತುರ್ತು ಅವಶ್ಯಕತೆಗಳು ಸೇರಿದಂತೆ ಹಲವಾರು ಮಹತ್ವದ ವಿಷಯಗಳ ಕುರಿತು ಬಸವರಾಜ ಹೊರಟ್ಟಿ ಅವರು ತಮ್ಮ ನಾಲ್ಕು ದಶಗಳಿಗಿಂತಲೂ ಹೆಚ್ಚು ಕಾಲದ ಅನುಭವ, ವಿಚಾರಗಳನ್ನು ಹಂಚಿಕೊಳ್ಳಲಿದ್ದಾರೆ.