ಮಡಿಕೇರಿ, ಆ. ೨೬: ಜಿಲ್ಲೆಯ ವಿವಿಧೆಡೆ ಬೃಹತ್ ಭೂಪರಿವರ್ತನೆ ಮತ್ತು ಭೂವಿಲೇವಾರಿಯನ್ನು ಸ್ಥಗಿತಗೊಳಿಸಬೇಕೆಂದು ಒತ್ತಾಯಿಸಿ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆಯ ವತಿಯಿಂದ ತಾ.೨೯ ರಂದು ಮೂರ್ನಾಡಿನಲ್ಲಿ ಜನಜಾಗೃತಿ ಮಾನವ ಸರಪಳಿ ಕಾರ್ಯಕ್ರಮ ನಡೆಯಲಿದೆ ಎಂದು ಸಿಎನ್ಸಿ ಅಧ್ಯಕ್ಷ ಎನ್.ಯು.ನಾಚಪ್ಪ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಬೆಳಿಗ್ಗೆ ೧೦.೩೦ ಗಂಟೆಗೆ ಮೂರ್ನಾಡು ಪಟ್ಟಣದಲ್ಲಿ ಮಾನವ ಸರಪಳಿ ನಿರ್ಮಿಸಿ ಹಕ್ಕೊತ್ತಾಯ ಮಂಡಿಸಲಾಗುವುದು ಎಂದರು.