ನಾಪೋಕ್ಲು, ಆ. ೨೬: ನಾಪೋಕ್ಲು ವಲಯ ಮಟ್ಟದ ಪ್ರೌಢಶಾಲಾ ವಿಭಾಗದ ಕ್ರೀಡಾಕೂಟದ ಉದ್ಘಾಟನಾ ಸಮಾರಂಭ ಸಮೀಪದ ನರಿಯಂದಡ ಕೇಂದ್ರ ಪ್ರೌಢಶಾಲೆ ಯಲ್ಲಿ ಬುಧವಾರ ಜರುಗಿತು.
ಆಡಳಿತ ಮಂಡಳಿ ಅಧ್ಯಕ್ಷ ಚೇನಂಡ ಈ. ಗಿರೀಶ್ ಪೂಣಚ್ಚ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕ್ರೀಡಾ ಧ್ವಜಾರೋಹಣವನ್ನು ನೆರವೇರಿಸಿದ ಬಳಿಕ ಮಾತನಾಡಿ ತಮ್ಮ ಅನಿಸಿಕೆ ವ್ಯಕ್ತಪಡಿಸಿ ಕ್ರೀಡಾಪಟುಗಳಿಗೆ ಶುಭ ಹಾರೈಸಿದರು. ಕಾರ್ಯದರ್ಶಿ ಬಿದ್ದಂಡ ಎಂ. ರಾಜೇಶ್ ಅಚ್ಚಯ್ಯ ಕ್ರೀಡಾ ಜ್ಯೋತಿಯನ್ನು ಬೆಳಗಿಸಿ ಮಾತನಾಡಿದರು. ಪ್ರತಿಜ್ಞಾವಿಧಿಯನ್ನು ವಿದ್ಯಾರ್ಥಿ ಕವನ್ ಕ್ರೀಡಾಪಟುಗಳಿಗೆ ಬೋಧಿಸಿದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ನರಿಯಂದಡ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪೆಮ್ಮಂಡ ಕೌಶಿ ಕಾವೇರಮ್ಮ ಕ್ರೀಡಾಪಟುಗಳ ಪಥ ಸಂಚಲನದಲ್ಲಿ ವಂದನೆ ಸ್ವೀಕರಿಸಿದರು.
ಅತಿಥಿಗಳಾಗಿ ನರಿಯಂದಡ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಕೋಡಿರ ವಿನೋದ್ ನಾಣಯ್ಯ, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಆಶಾ ಕುಮಾರಿ, ಸ್ಥಳದಾನಿ ಬೊವ್ವೇರಿಯಂಡ ಮತ್ತು ಬಟ್ಟಿಯಂಡ ಕುಟುಂಬದ ಅಧ್ಯಕ್ಷರು, ವಿವಿಧ ಶಾಲೆಗಳ ದೈಹಿಕ ಶಿಕ್ಷಣ ಶಿಕ್ಷಕರು, ವ್ಯವಸ್ಥಾಪಕರು, ಶಿಕ್ಷಕರು, ಸಿಬ್ಬಂದಿ ವರ್ಗ ಪಾಲ್ಗೊಂಡಿದ್ದರು. ಕ್ರೀಡಾಕೂಟದ ಉಸ್ತುವಾರಿಯನ್ನು ನರಿಯಂದಡ ಕೇಂದ್ರ ಪ್ರೌಢಶಾಲೆಯ ಮುಖ್ಯ ಶಿಕ್ಷಕಿ ಭವ್ಯ ಬಿ.ಎಸ್, ದೈಹಿಕ ಶಿಕ್ಷಣ ಶಿಕ್ಷಕ ಪಿ.ಬಿ ಪೊನ್ನಪ್ಪ ಮತ್ತು ಸಹ ಶಿಕ್ಷಕರು ವಹಿಸಿದ್ದರು.