ಸಿದ್ದಾಪುರ, ಆ. ೨೭: ಸಿದ್ದಾಪುರದ ಬಸ್ ನಿಲ್ದಾಣದಲ್ಲಿ ಪರಿಸರ ಪ್ರೇಮಿ ರಾಜೇಂದ್ರ ಸಿಂಗ್ ನೇತೃತ್ವದಲ್ಲಿ ಪ್ರಕೃತಿ ವಂದನೆ ದಿನಾಚರಣೆಯ ಅಂಗವಾಗಿ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಪ್ರಕೃತಿ ದೇವತೆಗೆ ಪೂಜೆ ಮಾಡುವ ಮೂಲಕ ಆಚರಿಸಲಾಯಿತು.
ಈ ಸಂದರ್ಭ ಪ್ರಕೃತಿ ವಂದನೆ ದಿನಾಚರಣೆ ಕುರಿತು ಪರಿಸರ ಪ್ರೇಮಿ ರಾಜೇಂದ್ರ ಸಿಂಗ್ ಮಾತನಾಡಿ, ಎಲ್ಲರೂ ಮರ ಗಿಡಗಳನ್ನು ಬೆಳೆಸುವ ಮೂಲಕ ಪರಿಸರವನ್ನು ಉಳಿಸಿ ಬೆಳೆಸಬೇಕೆಂದು ಸಲಹೆ ನೀಡಿದರು. ಇತ್ತೀಚಿನ ದಿನಗಳಲ್ಲಿ ಪ್ರಕೃತಿ ವಿಕೋಪದಿಂದಾಗಿ ಹಲವಾರು ಘಟನೆಗಳು ನಡೆಯುತ್ತಿದ್ದು, ಈ ನಿಟ್ಟಿನಲ್ಲಿ ಪರಿಸರವನ್ನು ಸಂರಕ್ಷಣೆ ಮಾಡುವ ಮೂಲಕ ಮುಂದಿನ ಪೀಳಿಗೆಗೆ ಪ್ರತಿಯೊಬ್ಬರು ಗಿಡನೆಡುವ ಮೂಲಕ ಮರಗಳನ್ನು ಬೆಳೆಸಬೇಕೆಂದು ಕರೆ ನೀಡಿದರು ಈ ಸಂದರ್ಭ ಸಿದ್ದಾಪುರ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷೆ ರೀನಾ ತುಳಸಿ, ಕರಡಿಗೋಡು ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕಿ ರುಕ್ಮಣಿ ಗಂಗಾಧರ್ ಇನ್ನಿತರರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.