ಸೋಮವಾರಪೇಟೆ, ಆ. ೨೬: ರಾಷ್ಟಿçÃಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ನಿರ್ದೇಶನದಂತೆ ಕಾನೂನು ಸೇವಾ ಪ್ರಾಧಿಕಾರ, ತಾಲೂಕು ಆಡಳಿತ, ಕಾರ್ಮಿಕ ಇಲಾಖೆ, ಶಿಕ್ಷಣ ಇಲಾಖೆ, ತಾಲೂಕು ಪಂಚಾಯಿತಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಆರೋಗ್ಯ ಇಲಾಖೆ ಮತ್ತು ಪೊಲೀಸ್ ಇಲಾಖೆ ಗಳ ಸಹಯೋಗದೊಂದಿಗೆ ಪಟ್ಟಣ ದಲ್ಲಿ ಜಾಗೃತಿ ಜಾಥಾ ಮತ್ತು ಕಾನೂನು ಅರಿವು ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಅಂಗವಾಗಿ ಬಾಲ ಕಾರ್ಮಿಕ ನಿರ್ಮೂಲನಾ ಅಭಿಯಾನ ಜಾಥಾ, ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ ಕಾನೂನು ಅರಿವು ಹಾಗೂ ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳಲ್ಲಿ ಬಾಲ ಕಾರ್ಮಿಕರ ತಪಾಸಣೆ ನಡೆಯಿತು. ಪ್ರಧಾನ ಸಿವಿಲ್ ನ್ಯಾಯಾಧೀಶ ರಾದ ಕೆ. ಗೋಪಾಲಕೃಷ್ಣ ಮಾತನಾಡಿ, ಅಂಗಡಿಗಳಲ್ಲಿ ೧೪ ವರ್ಷದ ಒಳಗಿನ ಮಕ್ಕಳನ್ನು ಕೆಲಸಕ್ಕೆ ನೇಮಿಸಿಕೊಳ್ಳು ವವರಿಗೆ ರೂ. ೨೦ ಸಾವಿರದಿಂದ ೫೦ ಸಾವಿರದವರೆಗೆ ದಂಡ ಅಥವಾ ೬ ತಿಂಗಳಿನಿAದ ೨ ವರ್ಷಗಳವರೆಗೆ ಜೈಲುಶಿಕ್ಷೆ ಅಥವಾ ಎರಡನ್ನೂ ವಿಧಿಸಲು ಅವಕಾಶವಿರು ತ್ತದೆ. ೧೪ ರಿಂದ ೧೮ ವರ್ಷದ ಮಕ್ಕಳನ್ನು ಅಪಾಯಕಾರಿ ಕೆಲಸಕ್ಕೆ ನೇಮಿಸಿಕೊಳ್ಳುವುದು ಕಾನೂನು ಬಾಹಿರವಾಗಿರುತ್ತದೆ. ಇಂತಹ ಪ್ರಕರಣಗಳಿದ್ದ ಸಾರ್ವಜನಿಕರು ಚೈಲ್ಡ್ಲೈನ್(ಮಕ್ಕಳ ಸಹಾಯವಾಣಿ)ಗೆ ಉಚಿತ ದೂರವಾಣಿ ಸಂಖ್ಯೆ ೧೦೯೮ಕ್ಕೆ ಕರೆ ಮಾಡಬೇಕಾಗಿ ತಿಳಿಸಿದರು. ಕಾರ್ಯಕ್ರಮದಲ್ಲಿ ವಕೀಲರ ಸಂಘದ ಅಧ್ಯಕ್ಷ ಕೆ.ಹೆಚ್. ವಿಠಲ್, ತಾಲೂಕು ತಹಶೀಲ್ದಾರ್ ಶ್ರೀಧರ್ ಸೇರಿದಂತೆ ವಿವಿಧ ಇಲಾಖಾಧಿಕಾರಿಗಳು, ಸಾರ್ವಜನಿಕರು ಭಾಗವಹಿಸಿದ್ದರು.