ಸೋಮವಾರಪೇಟೆ, ಆ. ೨೭: ಯಂಗ್ ಇಂಡಿಯನ್ ಫಾಮರ‍್ಸ್ ಅಸೋಸಿಯೇಷನ್ ವತಿಯಿಂದ ಸಮೀಪದ ಗೌಡಳ್ಳಿ ಗ್ರಾಮದಲ್ಲಿ ಆಯೋಜಿಸಿದ್ದ ೬ನೇ ವರ್ಷದ ಗದ್ದೆ ನಾಟಿ ಕಾರ್ಯಕ್ರಮದ ಅಂಗವಾಗಿ ಕೆಸರು ಗದ್ದೆ ಕ್ರೀಡಾಕೂಟ ನಡೆಸಲಾಯಿತು.

ಪುರುಷರ ವಿಭಾಗದ ಹಗ್ಗ ಜಗ್ಗಾಟ ಸ್ಪರ್ಧೆಯಲ್ಲಿ ತಾಕೇರಿಯ ರಾಕ್ ಸ್ಟಾರ್ ತಂಡ ಪ್ರಥಮ, ತಾಲೂಕು ಅಭಿವೃದ್ಧಿ ಹೋರಾಟ ಸಮಿತಿ ದ್ವಿತೀಯ ಸ್ಥಾನ ಪಡೆಯಿತು. ಮಹಿಳೆಯರ ವಿಭಾಗದಲ್ಲಿ ಹೆಗ್ಗುಳ ಗ್ರಾಮದ ಹೆಚ್.ಡಿ. ಫ್ರೆಂಡ್ಸ್ ಪ್ರಥಮ, ಗೌಡಳ್ಳಿಯ ಫ್ರೆಂಡ್ಸ್ ಗ್ರೂಪ್ ದ್ವಿತೀಯ ಸ್ಥಾನ ಪಡೆಯಿತು.

ವಿಜೇತ ತಂಡಗಳಿಗೆ ಪಾರಿತೋಷಕ ಹಾಗೂ ನಗದು ಬಹುಮಾನ ವಿತರಿಸಲಾಯಿತು. ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಅಸೋಸಿಯೇಷನ್ ಅಧ್ಯಕ್ಷ ಶ್ರೀನಿಧಿ ಲಿಂಗಪ್ಪ ವಹಿಸಿದ್ದರು. ತಾಲೂಕು ಅಭಿವೃದ್ಧಿ ಹೋರಾಟ ಸಮಿತಿ ಅಧ್ಯಕ್ಷ ಅರುಣ್ ಕೊತ್ನಳ್ಳಿ, ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ಕೆ.ಎನ್. ದೀಪಕ್, ಕೆಟಿಡಿಓ ಸಂಘಟನೆಯ ತಾಲೂಕು ಅಧ್ಯಕ್ಷ ಪ್ರಸನ್ನ, ಅಸೋಸಿಯೆಷನ್ ಕಾರ್ಯದರ್ಶಿ ಸಜನ್ ಮಂದಣ್ಣ, ಗ್ರಾ.ಪಂ. ಸದಸ್ಯ ನವೀನ್ ಅಜ್ಜಳ್ಳಿ ಅವರುಗಳು ಉಪಸ್ಥಿತರಿದ್ದರು.