ಕೂಡಿಗೆ, ಆ. ೨೭: ಕುಶಾಲನಗರ ತಾಲೂಕಿನ ಕೂಡುಮಂಗಳೂರು ಗ್ರಾ.ಪಂ. ಸಹಕಾರದೊಂದಿಗೆ ಕೂಡುಮಂಗಳೂರು-ಕೂಡ್ಲೂರು ಸರ್ಕಾರಿ ಪ್ರೌಢಶಾಲೆಯ ವತಿಯಿಂದ ಕೂಡ್ಲೂರು ಗ್ರಾಮದ ದೇವಾಲಯ ಸಮಿತಿಯ ಆಶ್ರಯದಲ್ಲಿ ಕೂಡ್ಲೂರು ಗ್ರಾಮದ ಪ್ರಗತಿಪರ ರೈತ ಕೆ.ಎಸ್. ರಾಜಾಚಾರಿ ಅವರ ಗದ್ದೆಯಲ್ಲಿ ಶನಿವಾರ ಮೂರನೇ ವರ್ಷದ ಜನಪದ ಶೈಲಿಯ ಗ್ರಾಮೀಣ ಕೆಸರು ಗದ್ದೆ ಕ್ರೀಡಾಕೂಟ ಸಂಭ್ರಮ, ಸಡಗರದಿಂದ ಜರುಗಿತು.

ಶಾಲೆಯ ರಾಷ್ಟಿçÃಯ ಹಸಿರು ಪಡೆ ಇಕೋ ಕ್ಲಬ್, ಸ್ಕೌಟ್ಸ್ ಮತ್ತು ಗೈಡ್ಸ್ ಘಟಕ, ರಾಷ್ಟಿçÃಯ ಸೇವಾ ಯೋಜನೆ (ಎನ್.ಎಸ್.ಎಸ್.) ಹಾಗೂ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ನ ಕುಶಾಲನಗರ ಸ್ಥಳೀಯ ಸಂಸ್ಥೆಯ ವತಿಯಿಂದ ಶಾಲಾ ವಿದ್ಯಾರ್ಥಿ ಸಂಘ, ಎಸ್.ಡಿ.ಎಂ.ಸಿ., ಶಾಲೆಯ ಸ್ಕೌಟ್ಸ್ ಮತ್ತು ಗೈಡ್ಸ್ ಘಟಕ ಹಾಗೂ ಗ್ರಾಮದ ಬಸವೇಶ್ವರ ಸಮಿತಿ, ಕುಶಾಲನಗರ ತಾಲೂಕು ಕನ್ನಡ ಸಾಹಿತ್ಯ ಪರಿಷತ್, ಸುಂಟಿಕೊಪ್ಪ ಜೆ.ಸಿ.ಐ. ಸಂಸ್ಥೆ ಹಾಗೂ ಕುಶಾಲನಗರ ಕಾವೇರಿ ಜೆ.ಸಿ.ಐ. ಸಂಸ್ಥೆಯ ಸಂಯುಕ್ತಾಶ್ರಯದಲ್ಲಿ ೭೮ನೇ ಸ್ವಾತಂತ್ರ‍್ಯೋತ್ಸವ-೨೦೨೪ ಹಾಗೂ ಗೋ ಗ್ರೀನ್ ಅಭಿಯಾನದ ಅಂಗವಾಗಿ ಏರ್ಪಡಿಸಿದ್ದ ಗ್ರಾಮೀಣ ಕೆಸರು ಗದ್ದೆ ಕ್ರೀಡಾಕೂಟವು ಗ್ರಾಮಸ್ಥರ ಗಮನ ಸೆಳೆಯಿತು.

ಕ್ರೀಡಾಕೂಟದಲ್ಲಿ ಶಾಲಾ ವಿದ್ಯಾರ್ಥಿಗಳು ಕೆಸರು ಗದ್ದೆಯಲ್ಲಿ ಮಿಂದೆದ್ದು, ಆಟವಾಡುತ್ತಾ ಕುಣಿದು ಕುಪ್ಪಳಿಸಿದರು.

ಕೆಸರು ಗದ್ದೆಯಲ್ಲಿ ಮಕ್ಕಳ ಓಟದ ಸ್ಪರ್ಧೆ, ಹಗ್ಗ ಜಗ್ಗಾಟ, ವಾಲಿಬಾಲ್, ಥ್ರೋಬಾಲ್ ಟೂರ್ನಿ, ಬೊಗಸೆಯಿಂದ ಲೋಟಕ್ಕೆ ಸ್ಪರ್ಧೆ ಸೇರಿದಂತೆ ಇನ್ನಿತರ ಕ್ರೀಡಾ ಸ್ಪರ್ಧೆಗಳಲ್ಲಿ ಮಕ್ಕಳು ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು.

ಮಕ್ಕಳೊAದಿಗೆ ಕ್ರೀಡೆಯಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದ ಶಾಲಾ ಮುಖ್ಯೋಪಾಧ್ಯಾಯರೂ ಆದ ರಾಷ್ಟಿçÃಯ ಹಸಿರು ಪಡೆಯ ಇಕೋ ಕ್ಲಬ್‌ನ ಜಿಲ್ಲಾ ಸಂಚಾಲಕ ಟಿ.ಜಿ. ಪ್ರೇಮಕುಮಾರ್, ಕೆಸರು ಗದ್ದೆ ಕ್ರೀಡೆಯ ಮಹತ್ವದ ಕುರಿತು ಮಾಹಿತಿ ನೀಡಿದರು. ಜನಪದ ಶೈಲಿಯ ಗ್ರಾಮೀಣ ಕೆಸರು ಗದ್ದೆ ಕ್ರೀಡಾಕೂಟವನ್ನು ವಿದ್ಯಾರ್ಥಿಗಳಲ್ಲಿ ಕೃಷಿ ಚಟುವಟಿಕೆ ಗಳು, ರೈತರ ಕೃಷಿ ಬದುಕು, ದೇಶದ ಕೃಷಿ ಜೀವನ ಬಗ್ಗೆ ಅರ್ಥಮಾಡಿ ಕೊಳ್ಳುವ ದಿಸೆಯಲ್ಲಿ ಇಂತಹ ಕ್ರೀಡಾಕೂಟವನ್ನು ನಮ್ಮ ಶಾಲೆಯ ವತಿಯಿಂದ ಸತತವಾಗಿ ೩ನೇ ವರ್ಷ ಕೆಸರುಗದ್ದೆ ಕ್ರೀಡಾಕೂಟವನ್ನು ಕೂಡ್ಲೂರು ಗ್ರಾಮದ ದೇವಾಲಯ ಸಮಿತಿ ಮತ್ತು ಜನರ ಸಹಕಾರದೊಂದಿಗೆ ಸಂಘಟಿಸಲಾಗಿದೆ ಎಂದರು.

ಭತ್ತದ ಕೃಷಿ ಪ್ರಧಾನವಾದ ಕೊಡಗಿನಲ್ಲಿ ಮಳೆಗಾಲದಲ್ಲಿ ಗ್ರಾಮೀಣ ಕೆಸರುಗದ್ದೆ ಕ್ರೀಡಾ ಕೂಟಗಳು ಸಾಂಪ್ರದಾಯಿಕವಾಗಿ ನಡೆಯುತ್ತಿವೆ.

ಭತ್ತದ ಗದ್ದೆ ನಾಟಿ ಸಂದರ್ಭ ರೈತಾಪಿ ಜನರು ಒಂದೆಡೆ ಸೇರಿ ಸಹಬಾಳ್ವೆ ಹಾಗೂ ಮನೋರಂಜನೆ ಗಾಗಿ ನಡೆಸಿಕೊಂಡು ಬರುತ್ತಿರುವ ಕೆಸರುಗದ್ದೆ ಕ್ರೀಡೆಯು ಜನಜನಿತ ವಾಗಿದ್ದು ಜನಪ್ರಿಯತೆ ಗಳಿಸಿದೆ ಎಂದರು. ಎಸ್.ಡಿ.ಎಂ.ಸಿ. ಅಧ್ಯಕ್ಷ ಎ.ಎಂ. ಜವರಯ್ಯ ಮಾತನಾಡಿ, ನಮ್ಮ ಶಾಲಾ ಶಿಕ್ಷಕರ ತಂಡದ ಪ್ರೇರೇಪಣೆಯಿಂದ ಇಂತಹ ಕ್ರೀಡಾಕೂಟ ಸಂಘಟಿಸುವ ಮೂಲಕ ಮಕ್ಕಳಿಗೆ ಕೃಷಿ ಪಾಠದ ಮಹತ್ವ ತಿಳಿಸುತ್ತಿರುವುದು ಹೆಮ್ಮೆಯ ಸಂಗತಿ ಎಂದರು. ಕ್ರೀಡಾಕೂಟಕ್ಕೆ ಚಾಲನೆ ನೀಡಿದ ಕೂಡ್ಲೂರು ಗ್ರಾಮದ ಪ್ರಗತಿಪರ ರೈತ ಕೆ.ಎಸ್. ರಾಜಾಚಾರಿ ಮಾತನಾಡಿ, ಪೂರ್ವಜರ ಕಾಲದಿಂದ ಬಂದಿರುವ ಇಂತಹ ದೇಸಿ ಕ್ರೀಡೆಗಳನ್ನು ಪರಿಚಯಿಸುವ ಕಾರ್ಯವನ್ನು ಶಾಲಾ ಮುಖ್ಯೋಪಾಧ್ಯಾಯ ಟಿ.ಜಿ. ಪ್ರೇಮಕುಮಾರ್, ವಿಶೇಷ ಆಸಕ್ತಿ ವಹಿಸಿ ತಮ್ಮ ಶಿಕ್ಷಕರ ತಂಡದೊAದಿಗೆ ೩ ನೇ ವರ್ಷದಲ್ಲಿ ಈ ಕ್ರೀಡಾಕೂಟ ಸಂಘಟಿಸಿರುವುದು ಬಹಳ ಸಂತಸ ತಂದಿದೆ. ಇಂತಹ ಕ್ರೀಡೆಗಳು ವಿದ್ಯಾರ್ಥಿಗಳಿಗೆ ಕೃಷಿ ಪರಿಚಯ ಮಾಡಿಕೊಡಲು ಸಹಕಾರಿಯಾಗಿವೆ ಎಂದರು.

ಕುಶಾಲನಗರ ಕಾವೇರಿ ಜೆ.ಸಿ.ಐ. ಸಂಸ್ಥೆಯ ಅಧ್ಯಕ್ಷ ಬಿ.ಜಗದೀಶ್ ಮಾತನಾಡಿ, ಕೆಸರು ಗದ್ದೆಯಲ್ಲಿ ಮಕ್ಕಳು ಸಂಭ್ರಮದಿAದ ಪಾಲ್ಗೊಂಡು ಕೃಷಿಯ ಅನುಭವ ಪಡೆಯು ತ್ತಿರುವುದು ಹೆಮ್ಮೆಯ ಸಂಗತಿ ಎಂದರು.

ತಾಲೂಕು ಸರ್ಕಾರಿ ನೌಕರರ ಸಂಘದ ಉಪಾಧ್ಯಕ್ಷ ಎಂ.ಟಿ. ದಯಾನಂದ ಪ್ರಕಾಶ್ ಮಾತನಾಡಿ, ಇಂತಹ ಕ್ರೀಡಾಕೂಟಗಳು ವಿದ್ಯಾರ್ಥಿಗಳಿಗೆ ಕೃಷಿ ಅನುಭವ ನೀಡುತ್ತವೆ ಎಂದರು. ಗದ್ದೆಯಲ್ಲಿ ಮಕ್ಕಳೊಂದಿಗೆ ತೊಡಗಿಸಿಕೊಂಡಿದ್ದ ಜಿಲ್ಲಾ ಗೈಡ್ಸ್ ಸಂಸ್ಥೆಯ ಕ್ಯಾಪ್ಟನ್ ಸಿ.ಎಂ. ಸುಲೋಚನಾ ಮಾತನಾಡಿ, ದೇಸಿ ಕ್ರೀಡೆಗಳನ್ನು ಉಳಿಸಿ-ಬೆಳೆಸಬೇಕಾಗಿದೆ ಎಂದರು.

ಎಸ್.ಡಿ.ಎA.ಸಿ. ಅಧ್ಯಕ್ಷರಾದ ಎ.ಎಂ. ಜವರಯ್ಯ, ಸದಸ್ಯರಾದ ಶೃತಿ, ಲಕ್ಷಿö್ಮ, ಕುಶಾಲನಗರ ಕಾವೇರಿ ಜೆ.ಸಿ.ಐ. ಸಂಸ್ಥೆಯ ನಿಕಟಪೂರ್ವ ಅಧ್ಯಕ್ಷ ಎಂ.ಜೆ. ರಜನಿಕಾಂತ್, ಶಿಕ್ಷಕರಾದ ಕೆ. ಗೋಪಾಲಕೃಷ್ಣ, ಎಂ.ಟಿ. ದಯಾನಂದ ಪ್ರಕಾಶ್, ಬಿ.ಎನ್. ಸುಜಾತ ಬಿ.ಡಿ. ರಮ್ಯ, ಎಸ್.ಎಂ. ಗೀತಾ, ಅನ್ಸಿಲಾ ರೇಖಾ, ಕೆ.ಟಿ. ಸೌಮ್ಯ, ಕೃಷಿಕ ಕೆ.ಆರ್ ನಾಗರಾಜು, ಕೆ.ಎನ್. ಕುಶಾಲ್, ಇತರರು ಇದ್ದರು. ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕಿ ಕೆ.ಟಿ. ಸೌಮ್ಯ ಕ್ರೀಡೆ ನಡೆಸಿಕೊಟ್ಟರು.