ಕುಶಾಲನಗರ, ಆ. ೨೭: ಸಾಮರಸ್ಯ ವೇದಿಕೆ ವತಿಯಿಂದ ಕುಶಾಲನಗರದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿಯನ್ನು ಆಚರಣೆ ಮಾಡಲಾಯಿತು.
ಸಾಮಾಜಿಕ ಕಾರ್ಯಕರ್ತ ಅಜೀಶ್ ಐಗೂರು ಮಾತನಾಡಿ, ದಕ್ಷಿಣ ಭಾರತದಲ್ಲಿ ಸಾಮಾಜಿಕ ಪರಿವರ್ತನೆಯ ಹರಿಕಾರರಾದ ಬ್ರಹ್ಮಶ್ರೀ ನಾರಾಯಣ ಗುರುಗಳು ದುರ್ಬಲ ವರ್ಗಗಳಿಗಾಗಿ ಶಿಕ್ಷಣ ಸಂಸ್ಥೆಗಳು, ದೇವಸ್ಥಾನಗಳನ್ನು ಸ್ಥಾಪನೆ ಮಾಡುವ ಮೂಲಕ ಸಾಮಾಜಿಕ ಸಮಾನತೆಗಾಗಿ ತಮ್ಮ ಬದುಕನ್ನೇ ಮುಡಿಪಾಗಿಟ್ಟರು. ಸಾಮಾಜಿಕ ಅಸಮಾನತೆ ನಿರ್ಮೂಲನೆಗಾಗಿ ಹೋರಾಡಿದರು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಸಾಮಾಜಿಕ ಸಮಾನತೆಯ ಪ್ರಾರ್ಥನಾ ಗೀತೆಯನ್ನು ಸಂಸ್ಕೃತ ಭಾರತಿ ಸಂಸ್ಥೆಯ ಜಿಲ್ಲಾ ಯೋಜಕ ಮಧುಸೂದನ್ ಹಾಡಿದರು. ಸ್ವಾಗತ ಮತ್ತು ಪರಿಚಯವನ್ನು ಸಾಮರಸ್ಯ ವೇದಿಕೆಯ ಪ್ರಮುಖರಾದ ಸದಾಶಿವ ಮಾಡಿದರೆ, ರಂಜಿತ್ ವಂದಿಸಿದರು. ಕಾರ್ಯಕ್ರಮದಲ್ಲಿ ಸಾಮರಸ್ಯ ವೇದಿಕೆಯ ಜಿಲ್ಲಾ ಸಂಯೋಜಕ ಹರೀಶ್ ತಮ್ಮಯ್ಯ, ರಾಷ್ಟಿçÃಯ ಸ್ವಯಂಸೇವಕ ಸಂಘದ ತಾಲೂಕು ಕಾರ್ಯವಾಹ ರಮೇಶ್ ಬೊಟ್ಟು ಮನೆ, ವನವಾಸಿ ಕಲ್ಯಾಣ ಸಂಸ್ಥೆಯ ಮುರುಳಿ, ಹರ್ಷ ಇತರರು ಉಪಸ್ಥಿತರಿದ್ದರು.