*ಗೋಣಿಕೊಪ್ಪ, ಆ. ೨೭: ಮಾಜಿ ಮುಖ್ಯಮಂತ್ರಿ ದಿ. ಡಿ. ದೇವರಾಜು ಅರಸು ಅವರ ೧೦೯ನೇ ಜನ್ಮ ದಿನಾಚರಣೆಯನ್ನು ಪೊನ್ನಂಪೇಟೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಮತ್ತು ವೀರಾಜಪೇಟೆ ತಾಲೂಕು ಆಡಳಿತ ವತಿಯಿಂದ ಆಚರಿಸಲಾಯಿತು.
ವೀರಾಜಪೇಟೆ ಮಹಿಳಾ ಸಮಾಜದಲ್ಲಿ ನಡೆದ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವೀರಾಜಪೇಟೆ ತಹಶೀಲ್ದಾರ್ ಹೆಚ್.ಎನ್. ರಾಮಚಂದ್ರರಾವ್ ವಹಿಸಿದ್ದರು. ಉದ್ಘಾಟನೆಯನ್ನು ಪೊನ್ನಂಪೇಟೆ ತಾಲೂಕು ತಹಶೀಲ್ದಾರ್ ಮೋಹನ್ಕುಮಾರ್ ನೆರವೇರಿಸಿದರು.
ಪುರಸಭೆ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಚಂದ್ರಕುಮಾರ್, ತಾಲೂಕು ಪೊಲೀಸ್ ಡಿ.ವೈ.ಎಸ್.ಪಿ. ಮೋಹನ್ ಕುಮಾರ್ ಉಪಸ್ಥಿತಿಯಲ್ಲಿ ವೀರಾಜಪೇಟೆ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲ ಕೆ.ಸಿ. ದಯಾನಂದ, ಅರಸುರವರ ಜೀವನ ಚರಿತ್ರೆ, ಸಾಧನೆ ಮತ್ತು ಹಿಂದುಳಿದ ವರ್ಗಗಳ ಸಮುದಾಯಕ್ಕೆ ನೀಡಿದ ಕೊಡುಗೆಗಳ ಬಗ್ಗೆ ತಿಳಿಸಿದರು.
ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಪಿ.ಪಿ. ಕವಿತಾ ಕಾರ್ಯಕ್ರಮದ ಜವಾಬ್ದಾರಿ ಯನ್ನು ನಿಭಾಯಿಸಿದರು. ನಿಲಯ ಮೇಲ್ವಿಚಾರಕ ಹೆಚ್.ಸಿ. ನಾಗರಾಜು ಸೇರಿದಂತೆ ತಾಲೂಕು ಮಟ್ಟದ ಅಧಿಕಾರಿಗಳು, ಸಂಘ-ಸAಸ್ಥೆಗಳ ಅಧ್ಯಕ್ಷರುಗಳು ಹಾಜರಿದ್ದರು. ಇದೇ ಸಂದರ್ಭ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.