ಮಡಿಕೇರಿ, ಆ. ೨೬: ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಮತ್ತು ದಲಿತ ಸಂಘಟನೆಗಳ ಐಕ್ಯ ಹೋರಾಟ ಚಾಲನಾ ಸಮಿತಿ ವತಿಯಿಂದ ಮಾಜಿ ಮುಖ್ಯಮಂತ್ರಿ ದಿವಂಗತ ದೇವರಾಜ ಅರಸು ಅವರ ೧೦೯ನೇ ಜನ್ಮದಿನಾಚರಣೆಯನ್ನು ಶನಿವಾರಸಂತೆಯ ದೇವರಾಜ ಅರಸು ಹಿಂದುಳಿದ ವರ್ಗಗಳ ಬಾಲಕರ ವಿದ್ಯಾರ್ಥಿ ನಿಲಯದಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಯಿತು.

ಸಂಘಟನೆಯ ಪ್ರಮುಖರು ಹಾಗೂ ಪದಾಧಿಕಾರಿಗಳು ದಿ.ದೇವರಾಜು ಅರಸು ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸುವ ಮೂಲಕ ಗೌರವ ಅರ್ಪಿಸಿದರು.

ನಂತರ ಮಾತನಾಡಿದ ಹೋರಾಟ ಚಾಲನಾ ಸಮಿತಿಯ ಜಿಲ್ಲಾಧ್ಯಕ್ಷ ಜೆ.ಆರ್.ಪಾಲಾಕ್ಷ ಅವರು ವಿದ್ಯಾರ್ಥಿಗಳಿಗೆ ದೇವರಾಜ ಅರಸು ಅವರ ಹುಟ್ಟು, ಶಿಕ್ಷಣ, ರಾಜಕೀಯ ಜೀವನ ಹಾಗೂ ಮುಖ್ಯಮಂತ್ರಿಗಳಾಗಿದ್ದಾಗ ಈ ರಾಜ್ಯಕ್ಕೆ ನೀಡಿದÀ ಕೊಡುಗೆಗಳ ಬಗ್ಗೆ ವಿವರಿಸಿದರು.

ವಿದ್ಯಾರ್ಥಿ ನಿಲಯದ ಮೇಲ್ವಿಚಾರಕ ಆನಂದ್ ಮಾತನಾಡಿ ದೇವರಾಜ ಅರಸು ಅವರ ೨೦ ಅಂಶಗಳ ಕಾರ್ಯಕ್ರಮ ಹಾಗೂ ಜನಪರ ಕಾರ್ಯಗಳ ಬಗ್ಗೆ ಮಾಹಿತಿ ನೀಡಿದರು.

ದುಂಡಳ್ಳಿ ಗ್ರಾ.ಪಂ. ಮಾಜಿ ಅಧ್ಯಕ್ಷರು, ಗ್ಯಾರಂಟಿ ಅನುಷ್ಠಾನ ಸಮಿತಿ ಸದಸ್ಯ ಸಿ.ಬಿ. ಅಬ್ಬಾಸ್ ಮಾತನಾಡಿದರು.

ಕಾರ್ಯಕ್ರಮದಲ್ಲಿ ಮಾನವ ಬಂಧುತ್ವ ವೇದಿಕೆಯ ಜಿಲ್ಲಾಧ್ಯಕ್ಷ ಜೆ.ಎಲ್.ಜನಾರ್ಧನ, ದಲಿತ ಸಂಘರ್ಷ ಸಮಿತಿಯ ಗ್ರಾಮ ಶಾಖೆ ಮುಖಂಡರುಗಳಾದ ಎಡೆಹಳ್ಳಿ ಚಿನ್ನಪ್ಪ, ಎಂ.ಕೆ.ಮAಜುನಾಥ, ಮಾದ್ರೆ, ಮಂಜು, ವಿದ್ಯಾರ್ಥಿ ನಿಲಯದ ಅಡುಗೆ ಸಹಾಯಕ ಅನಂತ್ ಕುಮಾರ್ ಹಾಗೂ ರವಿ ಉಪಸ್ಥಿತರಿದ್ದರು. ಜಿಲ್ಲಾ ಚಾಲನಾ ಸಮಿತಿಯ ಕಾರ್ಯದರ್ಶಿ ಎಂ.ಎಸ್.ವೀರೇAದ್ರ ಸ್ವಾಗತಿಸಿ, ನಿರೂಪಿಸಿ, ವಂದಿಸಿದರು.